SAMSUNG Galaxy M53 5G : ಮತ್ತೆ ಭಾರೀ ಬೆಲೆ ಇಳಿಕೆ ಕಂಡ ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಫೋನ್!
ಸ್ಯಾಮ್‌ಸಂಗ್ ಸಂಸ್ಥೆಯ ಇತ್ತೀಚಿನ 5G ಫೋನ್‌ಗಳು ಹೆಚ್ಚು ಆಕರ್ಷಕ ಎನಿಸುತ್ತಿದ್ದು, ಈ ನಿಟ್ಟಿನಲ್ಲಿ ಸ್ಯಾಮ್‌ಸಂಗ್ ಹಲವು 5G ಫೋನ್‌ಗಳ ಆಯ್ಕೆ ಗ್ರಾಹಕರಿಗೆ ನೀಡಿದೆ. ಅವುಗಳಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಫೋನ್ ಮೀಡ್‌ರೇಂಜ್ ಬೆಲೆಯಲ್ಲಿ ಲಭ್ಯವಿರುವ ಅತ್ಯುತ್ತಮ 5G ಫೋನ್‌ಗಳಲ್ಲಿ ಒಂದಾಗಿದೆ. ಇದೀಗ ಸಖತ್ ರಿಯಾಯಿತಿ ಪಡೆದಿದೆ.
ಹೌದು, ಸ್ಯಾಮ್‌ಸಂಗ್ ಕಂಪೆನಿ ಜನಪ್ರಿಯ ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಇದೀಗ ಆಕರ್ಷಕ ರಿಯಾಯಿತಿ ಪಡೆದಿದೆ. 6GB RAM + 128GB ಸ್ಟೋರೇಜ್‌ನ ವೇರಿಯಂಟ್ ಈ ಫೋನ್ ಈಗ 23,680ರೂ. ಆಫರ್ ಬೆಲೆಯಲ್ಲಿ ಕಾಣಿಸಿಕೊಂಡಿದೆ.

ಇದರೊಂದಿಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್ ಎಕ್ಸ್‌ಚೇಂಜ್ ಆಫರ್, ನೋ ಕಾಸ್ಟ್ ಇಎಮ್‌ಐ ಆಯ್ಕೆಗಳು ಸಹ ಲಭ್ಯವಾಗಲಿವೆ. ಅಂದಹಾಗೆ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಹೊಂದಿದ್ದು, ಕ್ವಾಡ್ ಕ್ಯಾಮೆರಾ ರಚನೆ ಪಡೆದಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಗ್ಯಾಲಕ್ಸಿ M53 5G : ಡಿಸ್‌ಪ್ಲೇ ರಚನೆ ಹೇಗಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ + ಇನ್ಫಿನಿಟಿ O ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದ್ದು, 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಪಡೆದಿದೆ. ಹಾಗೆಯೇ 85.3% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದೆ.

ಗ್ಯಾಲಕ್ಸಿ M53 5G : ಪ್ರೊಸೆಸರ್ ಕಾರ್ಯ ಏನು?
ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ OS ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM + 128GB ಹಾಗೂ 8GB RAM ಮತ್ತು 128 GB ಸ್ಟೋರೇಜ್ ಆಯ್ಕೆಗಳನ್ನು ಇದು ಹೊಂದಿದೆ. ಇನ್ನು ಈ ಫೋನ್ ಸ್ಯಾಮ್‌ಸಂಗ್‌ನ 'RAM ಪ್ಲಸ್' ಫೀಚರ್ಸ್ ಹೊಂದಿದ್ದು, 8GB ವರೆಗೆ ಬಳಕೆಯಾಗದ ಸ್ಟೋರೇಜ್ ಅನ್ನು ವರ್ಚುವಲ್ RAM ಆಗಿ ಬಳಸಿಕೊಳ್ಳುತ್ತದೆ.
ಗ್ಯಾಲಕ್ಸಿ M53 5G : ಕ್ವಾಡ್ ಕ್ಯಾಮೆರಾ ರಚನೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ f/1.8 ಅಪರ್ಚರ್ ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಗ್ಯಾಲಕ್ಸಿ M53 5G : ಬ್ಯಾಟರಿ ಬಲ ಮತ್ತು ಇತರೆ ಸೌಲಭ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5.2, GPS/ A-GPS ಮತ್ತು ಯುಎಸ್‌ಬಿ ಟೈಪ್ C ಪೋರ್ಟ್ ಹೊಂದಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಜಿಯೋಮ್ಯಾಗ್ನೆಟಿಕ್ ಸೆನ್ಸಾರ್, ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್ ಮತ್ತು ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.


Click it and Unblock the Notifications








