ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಸೇಲ್ ಇಂದು!..ಕೊಡುಗೆ ಏನು?
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಹೊಸದಾಗಿ ಬಿಡುಗಡೆ ಮಾಡಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್ ಈಗಾಗಲೇ ಗ್ರಾಹಕರನ್ನು ಆಕರ್ಷಿಸಿವೆ. ಇನ್ನು ಈ ಸ್ಮಾರ್ಟ್‌ಫೋನ್ ಇಂದು ಮಧ್ಯಾಹ್ನ 12 ರಂದು ಜನಪ್ರಿಯ ಇ ಕಾಮರ್ಸ್ ತಾಣ ಅಮೆಜಾನ್ ಹಾಗೂ ಅಧಿಕೃತ ಸ್ಯಾಮ್‌ಸಂಗ್ ವೆಬ್‌ಸೈಟ್ ಮೂಲಕ ಫಸ್ಟ್ ಸೇಲ್ ಆರಂಭಿಸಲಿದೆ. 6GB + 128GB ಆಂತರೀಕ ಸ್ಟೋರೇಜ್‌ನ ಬೇಸ್ ವೇರಿಯಂಟ್‌ನ ಆರಂಭಿಕ ಬೆಲೆಯು 26,499ರೂ. ಆಗಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಇ ಕಾಮರ್ಸ್ ತಾಣ ಅಮೆಜಾನ್ ನಲ್ಲಿ ಇಂದು ಮಾರಾಟ ಶುರು ಮಾಡಲಿದೆ. ಈ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ + ಇನ್ಫಿನಿಟಿ O ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದ್ದು, 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಪಡೆದಿದೆ. ಹಾಗೆಯೇ 85.3% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದೆ.
ಪ್ರೊಸೆಸರ್ ಪವರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ One UI 4.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128 GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇನ್ನು ಈ ಫೋನ್ ಸ್ಯಾಮ್‌ಸಂಗ್‌ನ 'RAM ಪ್ಲಸ್' ಫೀಚರ್ಸ್ ಹೊಂದಿದ್ದು, 8GB ವರೆಗೆ ಬಳಕೆಯಾಗದ ಸ್ಟೋರೇಜ್ ಅನ್ನು ವರ್ಚುವಲ್ RAM ಆಗಿ ಬಳಸಿಕೊಳ್ಳುತ್ತದೆ.

ಕ್ಯಾಮೆರಾ ಸೆನ್ಸಾರ್ ವಿಶೇಷ
ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ f/1.8 ಅಪರ್ಚರ್ ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5.2, GPS/ A-GPS ಮತ್ತು ಯುಎಸ್‌ಬಿ ಟೈಪ್ C ಪೋರ್ಟ್ ಹೊಂದಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಜಿಯೋಮ್ಯಾಗ್ನೆಟಿಕ್ ಸೆನ್ಸಾರ್, ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್ ಮತ್ತು ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.
ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್ 6GB + 128GB ಸ್ಟೋರೇಜ್ ಮಾದರಿಗೆ 26,499 ರೂ. ಬೆಲೆ ಹೊಂದಿದೆ. ಆದರೆ 8GB + 128GB ರೂಪಾಂತರದ ಬೆಲೆ 28,499 ರೂ. ಆಗಿದೆ. ಇದು ನೀಲಿ ಮತ್ತು ಹಸಿರು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಈ ಫೋನ್ ಏಪ್ರಿಲ್ 29 ರಂದು ಮಧ್ಯಾಹ್ನ 12 ಗಂಟೆಗೆ ಅಮೆಜಾನ್, ಸ್ಯಾಮ್‌ಸಂಗ್ ನ ಅಧಿಕೃತ ವೆಬ್‌ಸೈಟ್ ತಾಣಗಳ ಮೂಲಕ ಮಾರಾಟವಾಗಲಿದೆ.


Click it and Unblock the Notifications








