Home
ಸುದ್ದಿಜಾಲ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M54 5G ಫೋನ್‌ ಲಾಂಚ್‌!..ಬೊಂಬಾಟ್‌ ಫೀಚರ್ಸ್‌!

ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿಯು ಗ್ಯಾಲಕ್ಸಿ M ಸರಣಿಯಲ್ಲಿ ಹಲವು ಫೋನ್‌ಗಳನ್ನು ಲಾಂಚ್ ಮಾಡಿದೆ. ಅದರ ಮುಂದುವರಿದ ಭಾಗವಾಗಿ ಈಗ M ಸರಣಿಯಲ್ಲಿ ಹೊಸ 5G ಫೋನ್‌ ಅನ್ನು ಬಿಡುಗಡೆ ಮಾಡಿದೆ. ಅದುವೇ ಸ್ಯಾಮ್‌ಸಂಗ್ ಗ್ಯಾಲಕ್ಸಿ M54 5G ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ.

ಹೌದು, ಸ್ಯಾಮ್‌ಸಂಗ್‌ ಸಂಸ್ಥೆಯು ಹೊಸದಾಗಿ ಗ್ಯಾಲಕ್ಸಿ M54 5G ಸ್ಮಾರ್ಟ್‌ಫೋನ್‌ ಲಾಂಚ್ ಆಗಿದೆ. ಈ ಫೋನ್‌ 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದ್ದು, ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಒಳಗೊಂಡಿದೆ. ಅಂದಹಾಗೆ ಈ ಫೋನ್‌ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M54 5G ಫೋನ್‌ ಲಾಂಚ್‌!..ಬೊಂಬಾಟ್‌ ಫೀಚರ್ಸ್‌!

ಹಾಗೆಯೇ ಈ ಫೋನ್ ಅಧಿಕ ರೆಸಲ್ಯೂಶನ್‌ ಹೊಂದಿದ್ದು, ಸೂಪರ್‌ ಅಮೊಲೆಡ್‌ ಡಿಸ್‌ಪ್ಲೇ ಪಡೆದಿದೆ. ಇದು 4K UHD ಬೆಂಬಲಿತ ವಿಡಿಯೋ ಸೌಲಭ್ಯ ಒಳಗೊಂಡಿದ್ದು, 240fps ಸ್ಲೋ ಮೋಷನ್‌ ಆಯ್ಕೆ ಪಡೆದಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M54 5G ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M54 5G ಸ್ಮಾರ್ಟ್‌ಫೋನ್‌ 2,400 x 1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೊಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಹೊಂದಿದ್ದು, 1000 nits ಬ್ರೈಟ್ನೆಸ್‌ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ ಗೊರಿಲ್ಲಾ ಗ್ಲಾಸ್‌ 5 ರಕ್ಷಣೆ ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M54 5G ಸ್ಮಾರ್ಟ್‌ಫೋನ್‌ ಸ್ಯಾಮ್‌ಸಂಗ್ Exynos 138 ಚಿಪ್‌ಸೆಟ್‌ ಪ್ರೊಸೆಸರ್ ಅನ್ನು ಒಳಗೊಂಡಿದ್ದು, ಜೊತೆಗೆ ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಪಡೆದಿದೆ. ಇನ್ನು ಈ ಫೋನ್ 8 GB + 256 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದ್ದು, ಇನ್ನೊಂದು ಆಯ್ಕೆಯ ಬಗ್ಗೆ ಮಾಹಿತಿಯಿಲ್ಲ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M54 5G ಫೋನ್‌ ಲಾಂಚ್‌!..ಬೊಂಬಾಟ್‌ ಫೀಚರ್ಸ್‌!

ಸ್ಯಾಮ್‌ಸಂಗ್ ಗ್ಯಾಲಕ್ಸಿ M54 5G ಸ್ಮಾರ್ಟ್‌ಫೋನ್‌ ತ್ರಿವಳಿ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾ ಪಿಕ್ಸಲ್‌ ಹಾಗೂ ತೃತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಸೆನ್ಸಾರ್‌ ಹೊಂದಿವೆ. ಇನ್ನು ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್‌ ಸೆನ್ಸಾರ್‌ ಆಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M54 5G ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಒಳಗೊಂಡಿದೆ. ಯುಎಸ್‌ಬಿ ಟೈಪ್-ಸಿ ಆಡಿಯೊ, ಸ್ಟಿರಿಯೊ ಸ್ಪೀಕರ್‌ ಆಯ್ಕೆಗಳನ್ನು ಇದು ಪಡೆದಿದೆ. ಜೊತೆಗೆ ಬ್ಲೂಟೂತ್ 5.2, ಎನ್‌ಎಫ್‌ಸಿ ಆಯ್ಕೆಗಳು ಸಹ ಇವೆ. ಈ ಫೋನ್‌ ಬೆಲೆಯ ಬಗ್ಗೆ ಸಂಸ್ಥೆಯು ಅಧಿಕೃತ ಮಾಹಿತಿ ಹೊರಹಾಕಿಲ್ಲ.

ಸ್ಯಾಮ್‌ಸಂಗ್‌ ಸಂಸ್ಥೆಯು ಇತ್ತೀಚಿಗೆ ಭಾರತದಲ್ಲಿ ಗ್ಯಾಲಕ್ಸಿ A34 5G ಮತ್ತು ಗ್ಯಾಲಕ್ಸಿ A54 5G ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಆ ಪೈಕಿ ಗ್ಯಾಲಕ್ಸಿ A34 5G ಫೋನ್‌ ಟ್ರಿಪಲ್‌ ಕ್ಯಾಮೆರಾ ಜೊತೆಗೆ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. 8GB + 256GB ಹೊಂದಿದ್ದು, ಈ ಫೋನ್ ಲೈಮ್‌, ಗ್ರಾಫೈಟ್‌ ಹಾಗೂ ಸಿಲ್ವರ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

Best Mobiles in India

English summary
Samsung Galaxy M54 5G is equipped with a triple rear camera setup. The primary camera is a 108MP. more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+