ಗ್ಯಾಲಕ್ಸಿ M ಸರಣಿಯಲ್ಲಿ ಹೊಸ 5G ಫೋನ್ ಪರಿಚಯಿಸಲು ಸ್ಯಾಮ್‌ಸಂಗ್ ತಯಾರಿ!
ಸ್ಯಾಮ್‌ಸಂಗ್ ಕಂಪೆನಿ ತನ್ನ ಗ್ಯಾಲಕ್ಸಿ M ಸರಣಿಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದೀಗ ಅದರ ಮುಂದುವರೆದ ಭಾಗವಾಗಿ ಗ್ಯಾಲಕ್ಸಿ M ಸರಣಿಯಲ್ಲಿ ಹೊಸ 5G ಸ್ಮಾರ್ಟ್‌ಫೋನ್ ಪರಿಚಯಿಸಲು ತಯಾರಿ ನಡೆಸುತ್ತಿದೆ ಎಂದು ವರದಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್ ಆಗಿರಲಿದೆ ಎನ್ನಲಾಗಿದೆ. ಇದನ್ನು ಗ್ಯಾಲಕ್ಸಿ M54 5G ಸ್ಮಾರ್ಟ್‌ಫೋನ್ ಇರಬಹುದು ಎಂದು ನಿರೀಕ್ಷಿಸಲಾಗಿದೆ. ಇದು 2022 ರ ಅಂತ್ಯದ ವೇಳೆಗೆ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ಗ್ಯಾಲಕ್ಸಿ M ಸರಣಿಯಲ್ಲಿ ಮಧ್ಯಮ ಶ್ರೇಣಿಯ 5G ಫೋನ್ ಆಗಿ ಗ್ಯಾಲಕ್ಸಿ M54 5G ಪರಿಚಯಿಸುವ ಸಾಧ್ಯತೆಯಿದೆ. ಇದು ಭಾರತದಲ್ಲಿ 2023 ರಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಇನ್ನು ಈ ಸ್ಮಾರ್ಟ್‌ಫೋನ್ ಫೀಚರ್ಸ್ ಹೇಗಿರಲಿದೆ? ಬೆಲೆ ಎಷ್ಟಿರಲಿದೆ ಎಂಬೆಲ್ಲಾ ವಿಚಾರಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಹಾಗಾದ್ರೆ ಗ್ಯಾಲಕ್ಸಿ M54 5G ಫೋನ್ ಹೇಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆಯಲ್ಲಿ ನಿರೀಕ್ಷೆ ಏನು?
ಸ್ಯಾಮ್‌ಸಂಗ್ ಗ್ಯಾಲಕ್ಸಿ M54 5G ಸ್ಮಾರ್ಟ್‌ಫೋನ್ 6.67-ಇಂಚಿನ ಹೆಚ್‌ಡಿ ಪ್ಲಸ್ ಸೂಪರ್ AMOLED ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿರಲಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತ ಹೊಂದಿದ್ದು, 411ppi ಪಿಕ್ಸೆಲ್ ಸಾಂದ್ರತೆ ಹೊಂದಿರಲಿದೆ. ಇದಲ್ಲದೆ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ.

ಪ್ರೊಸೆಸರ್ ಯಾವುದು ಇರಬಹುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ M54 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಬಲವನ್ನು ಹೊಂದಿರಲಿದೆ ಎಂದು ವರದಿಯಾಗಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸುವ ಸಾಧ್ಯತೆಯಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿರಲಿದೆ ಎಂದು ಅಂದಾಜಿಸಲಾಗಿದೆ. ಈ ಫೋನ್ ಮೆಮೊರಿ ಕಾರ್ಡ್ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಕ್ಯಾಮೆರಾ ಸೆಟ್‌ಅಪ್ ಏನಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ M54 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಬರುವ ಸಾಧ್ಯತೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ನಿರೀಕ್ಷೆಯಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರುವ ಸಾಧ್ಯತೆಯಿದೆ.

ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M54 5G ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಇರಬಹುದು ಎಂದು ಅಂದಾಜಿಸಲಾಗಿದೆ. ಇದು 25W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ಒದಗಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, 5G, ಬ್ಲೂಟೂತ್, ಬೆಂಬಲಿಸಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಆಕ್ಸಿಲೆರೋಮೀಟರ್, ಗ್ರಾವಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M54 5G ಸ್ಮಾರ್ಟ್‌ಫೋನ್ ಭಾರತದಲ್ಲಿ 30,000 ರೂ.ಗಿಂತ ಕಡಿಮೆ ಇರುವ ನಿರೀಕ್ಷೆಯಿದೆ. ಆದರೆ ಇದು ವಿಯೆಟ್ನಾಂನಲ್ಲಿ 10,000,000 VND(ಅಂದಾಜು 33,830ರೂ.)ಬೆಲೆಯಲ್ಲಿ ಬರಲಿದೆ ಎಂದು ವರದಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕಲರ್ ಅಯ್ಕೆಗಳೇನು, ಬಿಡುಗಡೆಯ ನಿರ್ಧಿಷ್ಟ ದಿನಾಂಕದ ಬಗೆಗಿನ ಮಾಹಿತಿ ಇನ್ನು ಅಧಿಕೃತವಾಗಿ ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ ಮುಂದಿನ ವರ್ಷ ಭಾರತಕ್ಕೆ ಎಂಟ್ರಿ ನೀಡೋದು ಖಚಿತವಾಗಿದೆ.


Click it and Unblock the Notifications








