Home
ಸುದ್ದಿಜಾಲ

ಸದ್ದಿಲ್ಲದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M55 5G ಲಾಂಚ್‌!..ಬೆಲೆ ಎಷ್ಟು..ಫೀಚರ್ಸ್‌ ಏನು?

ಜನಪ್ರಿಯ ಸ್ಯಾಮ್‌ಸಂಗ್ ಸಂಸ್ಥೆಯು ಸದ್ದಿಲ್ಲದೇ ತನ್ನ ಗ್ಯಾಲಕ್ಸಿ M ಸರಣಿಯಲ್ಲಿ ಮತ್ತೆ ನೂತನ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ್ದು, ಅದುವೇ ಸ್ಯಾಮ್‌ಸಂಗ್ ಗ್ಯಾಲಕ್ಸಿ M55 5G ಸ್ಮಾರ್ಟ್‌ಫೋನ್‌ ಆಗಿದೆ. ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಈ ಹೊಸ ಸ್ಮಾರ್ಟ್‌ಫೋನ್‌ ಕ್ವಾಲ್ಕಮ್‌ ಸ್ನಾಪ್‌ಡ್ರಾಗನ್ 7 ಜನ್ 1 ಪ್ರೊಸೆಸರ್‌ ಪವರ್‌ ಅನ್ನು ಒಳಗೊಂಡಿದೆ.

ಹೌದು, ಸ್ಯಾಮ್‌ಸಂಗ್‌ ಸಂಸ್ಥೆಯು ಭಾರತೀಯ ಮಾರುಕಟ್ಟೆಗೆ ನೂತನವಾಗಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M55 5G ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ. ಅಂದಹಾಗೆ ಈ ಫೋನ್‌ ಮೀಡ್‌ರೇಂಜ್‌ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, 8GB + 128GB ಹಾಗೂ 12GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

ಸದ್ದಿಲ್ಲದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M55 5G ಲಾಂಚ್‌!..ಬೆಲೆ ಎಷ್ಟು.?

ಅಲ್ಲದೇ ಈ ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಪಡೆದಿದ್ದು, ಇದರೊಂದಿಗೆ 45W ಫಾಸ್ಟ್‌ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ. ಇನ್ನು ಈ ಫೋನ್‌ ಡೆನಿಮ್‌ ಬ್ಲ್ಯಾಕ್‌ ಹಾಗೂ ಲೈಟ್‌ ಗ್ರೀನ್‌ ಕಲರ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M55 5G ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M55 5G - ಫೀಚರ್ಸ್

ನೂತನ ಗ್ಯಾಲಕ್ಸಿ M55 5G ಸ್ಮಾರ್ಟ್‌ಫೋನ್‌ 1080 × 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಹೆಚ್‌ಡಿ ಪ್ಲಸ್‌ ಅಮೊಲೆಡ್‌ Infinity-O ಡಿಸ್‌ಪ್ಲೇ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಹೊಂದಿದ್ದು, 1000 nits ಬ್ರೈಟ್ನೆಸ್‌ ಬೆಂಬಲ ಅನ್ನು ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M55 5G ಸ್ಮಾರ್ಟ್‌ಫೋನ್‌ ಕ್ವಾಲ್ಕಮ್‌ ಸ್ನಾಪ್‌ಡ್ರಾಗನ್ 7 ಜನ್ 1 ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, ಜೊತೆಗೆ ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಸಓಎಸ್‌ ಸಪೋರ್ಟ್‌ ಹೊಂದಿದೆ. ಇನ್ನು ಈ ಫೋನ್ 8GB + 128GB, 8GB + 256GB ಹಾಗೂ 12GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದ್ದು, ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಇದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M55 5G ಸ್ಮಾರ್ಟ್‌ಫೋನ್‌ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸಲ್‌ ಹಾಗೂ ಮೂರನೇ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಸೆನ್ಸಾರ್‌ ಹೊಂದಿವೆ. ಇನ್ನು ಸೆಲ್ಫಿ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M55 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ. ಇದಕ್ಕೆ ಅನುಗುಣವಾಗಿ 45W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಯುಎಸ್‌ಬಿ ಟೈಪ್-ಸಿ ಆಡಿಯೊ, ಸ್ಟಿರಿಯೊ ಸ್ಪೀಕರ್‌ ಆಯ್ಕೆಗಳ ಜೊತೆಗೆ ಬ್ಲೂಟೂತ್ 5.2, ಎನ್‌ಎಫ್‌ಸಿ ಆಯ್ಕೆಗಳು ಸಹ ಇವೆ.

ಬೆಲೆ ಹಾಗೂ ಲಭ್ಯತೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M55 5G ಫೋನ್‌ 8GB + 128GB, 8GB + 256GB ಹಾಗೂ 12GB + 256GB ಸ್ಟೋರೇಜ್ ವೇರಿಯಂಟ್‌ ಆಯ್ಕೆ ಪಡೆದಿದೆ. ಅಮೆಜಾನ್‌ ಹಾಗೂ ಸ್ಯಾಮ್‌ಸಂಗ್‌ ವೆಬ್‌ಸೈಟ್‌ ಮೂಲಕ ಖರೀದಿಗೆ ಲಭ್ಯ ಇದೆ.

8GB + 128GB ವೇರಿಯಂಟ್‌ 26,999ರೂ. ಗಳ ಬೆಲೆ ಹೊಂದಿದೆ.
8GB + 256GB ವೇರಿಯಂಟ್‌ 29,999ರೂ. ಗಳ ಬೆಲೆ ಹೊಂದಿದೆ.
12GB + 256GB ವೇರಿಯಂಟ್‌ 32,999ರೂ. ಗಳ ಬೆಲೆ ಹೊಂದಿದೆ.

Best Mobiles in India

English summary
Samsung Galaxy M55 5G with Snapdragon 7 Gen 1 launched in India. Specifications, price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+