ಎದುರಾಳಿಗಳು ಅಲರ್ಟ್..! ಇಂದು Samsung Galaxy M56 5G ಲಾಂಚ್; ನಿರೀಕ್ಷೆಗೂ ಮೀರಿದ ವೈಶಿಷ್ಟ್ಯಗಳು.. ಬೆಲೆ ಎಷ್ಟು?
ಸ್ಯಾಮ್‌ಸಂಗ್ ಕಂಪನಿಯು ಇಂದು ಭಾರತದಲ್ಲಿ ಮತ್ತೊಂದು ಹೊಸ ಫೋನನ್ನು ಲಾಂಚ್ ಮಾಡಲಿದೆ. ಈ ಮೊಬೈಲ್‌ನ ಹೆಸರು ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G (Samsung Galaxy M56 5G) ಆಗಿದೆ. ಹೌದು, ಕಂಪನಿಯು ಈ ಫೋನನ್ನು ತನ್ನ ಗ್ಯಾಲಕ್ಸಿ 'M' ಸರಣಿಯ ಅಡಿಯಲ್ಲಿ ದೇಶೀಯ ಮಾರುಕಟ್ಟೆಗೆ ಪರಿಚಯಿಸಲಿದೆ. ವಿಶೇಷವೆಂದರೆ, ಇದೇ ಸರಣಿಯಲ್ಲಿ ಇತ್ತೀಚೆಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M06 5G ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ M16 5G ಫೋನ್‌ಗಳನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ ಈ ಸರಣಿಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ಮೊಬೈಲ್ ಸೇರಲಿದೆ. ಬನ್ನಿ, ಈ ಫೋನಿನ ವಿಶೇಷತೆಗಳನ್ನು ನೋಡೋಣ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ಫೋನಿನ ವಿಶೇಷತೆಗಳ ಬಗ್ಗೆ ಹೇಳುವುದಾದರೆ, ಇದು ಕೇವಲ 7.2 ಮಿಮೀ ದಪ್ಪ ಮತ್ತು ಕೇವಲ 180 ಗ್ರಾಂ ತೂಕ ಹೊಂದಿದೆ. ಈ ಮೊಬೈಲ್ 5,000mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್ ಸೌಲಭ್ಯ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಲಭ್ಯವಿದೆ. ಇದು ಕಂಪನಿಯ Exynos 1480 ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ ಪಂಚ್ ಹೋಲ್ ಶೈಲಿಯ ಅಮೋಲೆಡ್ ಡಿಸ್ಪ್ಲೇ ಸೇರಿದಂತೆ ಹಲವು ವೈಶಿಷ್ಟ್ಯಗಳಿವೆ. ಈ ಸ್ಮಾರ್ಟ್‌ಫೋನ್ ಕಡಿಮೆ ಬಜೆಟ್‌ನಲ್ಲಿ ಬಿಡುಗಡೆಯಾಗಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ಬಿಡುಗಡೆ ವಿವರ
ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ಫೋನ್ ಇಂದು (ಏಪ್ರಿಲ್ 17) ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಬಿಡುಗಡೆಯಾಗಲಿದೆ. ಈ ಫೋನಿನ ಮೈಕ್ರೋ ಸೈಟ್ ಅಮೆಜಾನ್‌ನಲ್ಲಿ ಲೈವ್ ಆಗಿದೆ. ಈಗಾಗಲೇ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ಫೋನಿನ ಎಲ್ಲಾ ವಿವರಗಳನ್ನು ಸಹ ಬಹಿರಂಗಪಡಿಸಲಾಗಿದೆ. ಕಂಪನಿಯು ಇಂದು ಬೆಲೆ ಮತ್ತು ಮಾರಾಟದ ದಿನಾಂಕದ ಬಗ್ಗೆ ಮಾಹಿತಿ ನೀಡಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ವೈಶಿಷ್ಟ್ಯಗಳು
ಡಿಸ್ಪ್ಲೇ: ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ಮೊಬೈಲ್ ಪಂಚ್ ಹೋಲ್ ಶೈಲಿಯ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು ವಿಷನ್ ಬೂಸ್ಟರ್ ತಂತ್ರಜ್ಞಾನವನ್ನು ಸಹ ಒಳಗೊಂಡಿದೆ. ಈ ಮೊಬೈಲ್ ಶೇ.33 ರಷ್ಟು ಹೆಚ್ಚಿನ ಬ್ರೈಟ್‌ನೆಸ್ ಪಡೆದಿದೆ. ಈ ಫೋನಿನ ಡಿಸ್ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್+ ರಕ್ಷಣೆ ಹೊಂದಿದೆ.
ಪ್ರೊಸೆಸರ್: ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್‌ನ ಸ್ವಂತ Exynos 1480 ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದೆ. ಈ ಸ್ಯಾಮ್‌ಸಂಗ್ 5G ಫೋನ್ ಆಂಡ್ರಾಯ್ಡ್ 15 ಓಎಸ್ ಜೊತೆಗೆ ಕೆಲಸ ಮಾಡುತ್ತದೆ. ಈ ಮೊಬೈಲ್ 8GB RAM ನೊಂದಿಗೆ ಬಿಡುಗಡೆಯಾಗಲಿದೆ. ಇದರಲ್ಲಿ 128GB ಸ್ಟೋರೇಜ್ ಮತ್ತು 256GB ಸ್ಟೋರೇಜ್ ಆಯ್ಕೆ ಲಭ್ಯವಿರುತ್ತದೆ.

ಕ್ಯಾಮೆರಾ ಸೆಟಪ್: ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು OIS ಮತ್ತು ಎಲ್‌ಇಡಿ ಫ್ಲ್ಯಾಷ್ ಬೆಂಬಲದೊಂದಿಗೆ ಬರುತ್ತದೆ. ಹಾಗೆಯೇ ಎರಡನೇ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಹೊಂದಿದೆ. ಇನ್ನು ತೃತೀಯ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿದೆ. ಈ ಸ್ಯಾಮ್‌ಸಂಗ್ ಫೋನ್ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 12 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ: ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ವೇಗವಾಗಿ ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ತಂತ್ರಜ್ಞಾನ ಒದಗಿಸಲಾಗಿದೆ. ಮುಂಬರುವ ಈ ಫೋನಿನಲ್ಲಿ ಹಲವು ಎಐ (AI) ವೈಶಿಷ್ಟ್ಯಗಳಿವೆ. ಆಬ್ಜೆಕ್ಟ್ ಎರೇಸರ್ ಮತ್ತು ಇಮೇಜ್ ಕ್ಲಿಪ್ಪರ್ ಸೇರಿದಂತೆ ಮುಂತಾದ ಎಐ ಇಮೇಜಿಂಗ್ ಟೂಲ್‌ಗಳನ್ನು ಅಳವಡಿಸಲಾಗಿದೆ.


Click it and Unblock the Notifications








