ಸ್ಯಾಮ್‌ಸಂಗ್ ಗ್ಯಾಲಕ್ಸಿ M62 ಫೋನ್ ಬಿಡುಗಡೆ: ಬಿಗ್ ಬ್ಯಾಟರಿ ವಿಶೇಷ!

|

ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಸಂಸ್ಥೆಯು ಇತ್ತೀಚಿಗಷ್ಟೆ ಭಾರತದಲ್ಲಿ ಹೊಸದಾಗಿ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ ಬಿಡುಗಡೆ ಗ್ರಾಹಕರನ್ನು ಸೆಳೆದಿದೆ. ಇದೀಗ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ ಹೋಲಿಕೆಯ ಗ್ಯಾಲಕ್ಸಿ M62 ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ ರಚನೆಯೊಂದಿಗೆ, ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿರುವುದು ಈ ಫೋನಿನ ಪ್ರಮುಖ ಅಟ್ರ್ಯಾಕ್ಷನ್ ಆಗಿದೆ.

ಬ್ಯಾಕ್‌ಅಪ್‌ನಿಂದ

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಹೊಸದಾಗಿ ಗ್ಯಾಲಕ್ಸಿ M62 ಸ್ಮಾರ್ಟ್‌ಫೋನ್‌ ಅನ್ನು ಥೈಲ್ಯಾಂಡ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಫೋನ್ 7,000mAh ಬ್ಯಾಟರಿ ಬ್ಯಾಕ್‌ಅಪ್‌ನಿಂದ ಗಮನ ಸೆಳೆದಿದ್ದು, ಫೋನಿನ ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್‌ನಲ್ಲಿದೆ. 8GB RAM ಮತ್ತು 128GB ಸಾಮರ್ಥ್ಯದ ವೇರಿಯಂಟ್‌ ಆಯ್ಕೆ ಹೊಂದಿದೆ. ಹಾಗೆಯೇ ಬ್ಲೂ, ಗ್ರೀನ್ ಹಾಗೂ ಬ್ಲ್ಯಾಕ್‌ ಬಣ್ಣಗಳ ಆಯ್ಕೆ ಪಡೆದಿದೆ. ಇನ್ನು ಗ್ಯಾಲಕ್ಸಿ M62 ಸ್ಮಾರ್ಟ್‌ಫೋನಿನ ಬೆಲೆ ಎಷ್ಟು ಹಾಗೂ ಇನ್ನುಳಿದ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M62 ಸ್ಮಾರ್ಟ್‌ಫೋನ್‌ 1,080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಮಲ್ಟಿ ಟಚ್‌ ಸ್ಕ್ರೀನ್‌ ವ್ಯವಸ್ಥೆಯನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ 405PPI ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿದೆ.

ಯಾವ ಪ್ರೊಸೆಸರ್‌ ಇದೆ

ಯಾವ ಪ್ರೊಸೆಸರ್‌ ಇದೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M62 ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ exynos 9825 SoC ಪ್ರೊಸೆಸರ್‌ ಹೊಂದಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳಿದ್ದು, ಅವುಗಳು ಕ್ರಮವಾಗಿ 8GB RAM ಮತ್ತು 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆ ಪಡೆದಿದೆ. ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೂ ಬಾಹ್ಯ ಮೆಮೊರಿ ವಿಸ್ತರಿಸಲು ಅವಕಾಶ ಇದೆ.

ಕ್ವಾಡ್‌ ಕ್ಯಾಮೆರಾ ಸೆನ್ಸಾರ್

ಕ್ವಾಡ್‌ ಕ್ಯಾಮೆರಾ ಸೆನ್ಸಾರ್

ಗ್ಯಾಲಕ್ಸಿ M62 ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 12ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾವು ಕ್ರಮವಾಗಿ 5ಎಂಪಿ ಸೆನ್ಸಾರ್ ಬಲವನ್ನು ಪಡೆದಿವೆ. ಇದರೊಂದಿಗೆ ಸೆಲ್ಫಿಗಾಗಿ 32ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಪಂಚ್‌ಹೋಲ್‌ ಕಟ್‌ಔಟ್ ಇದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಗ್ಯಾಲಕ್ಸಿ M62 ಸ್ಮಾರ್ಟ್‌ಫೋನ್‌ 7,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಇದರೊಂದಿಗೆ ಸೈಡ್‌ ಮೌಂಟ್‌ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಆಂಡ್ರಾಯ್ಡ್‌ 11 ಓಎಸ್‌, 4G VoLTE, ವೈಫೈ, ಬ್ಲೂಟತ್, ಜಿಪಿಎಸ್ ಆಡಿಯೊ ಜಾಕ್ ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.

Best Mobiles in India

English summary
Samsung Galaxy M62 is a rebadged version of Samsung Galaxy F62 and carries the same specifications.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X