ಬರಲಿದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 20 ಸರಣಿಯ ಸ್ಮಾರ್ಟ್‌ಫೋನ್!
ಸ್ಮಾರ್ಟ್‌ಫೋನ್ ದಿಗ್ಗಜ ಸ್ಯಾಮ್‌ಸಂಗ್ ಕಂಪೆನಿ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸ್ಮಾರ್ಟ್‌ಫೋನ್ ವಲಯದಲ್ಲಿ ಸ್ಮಾರ್ಟ್‌ಫೋನ್ ಪ್ರಿಯರಿಂದ ಸೈ ಎನಿಸಿಕೊಂಡಿರುವ ಸ್ಯಾಮ್‌ಸಂಗ್ ತನ್ನ ವೈವಿಧ್ಯಮಯ ಫೀಚರ್ಸ್‌ಗಳಿಂದ ಪ್ರಸಿದ್ದಿಯನ್ನ ಪಡೆದುಕೊಂಡಿದೆ. ಸದ್ಯ ಇದೀಗ ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಪರಿಚಯಿಸಲು ಸಿದ್ದತೆ ನಡೆಸಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ತ್ನ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 20 ಸರಣಿಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಲಿದೆ ಎಂದು ವರದಿ ಆಗಿದೆ. ಸದ್ಯ ಟೆಕ್ ವಲಯದಲ್ಲಿ ಲಭ್ಯವಾಗಿರುವ ಮಾಹಿತಿ ಪ್ರಕಾರ ಮುಂಬರುವ ಆಗಸ್ಟ್‌ನಲ್ಲಿ ಗ್ಯಾಲಕ್ಸಿ ನೋಟ್ 20 ಸರಣಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಇನ್ನು ಈ ಗ್ಯಾಲಕ್ಸಿ ನೋಟ್ 20 ಸರಣಿಯ ಸ್ಮಾರ್ಟ್‌ಫೋನ್ ನ 'ಅಲ್ಟ್ರಾ' ರೂಪಾಂತರವು 120Hz ರಿಫ್ರೆಶ್ ದರ ಮತ್ತು QHD + ರೆಸಲ್ಯೂಶನ್ ಹೊಂದಿರುವ LTPO OLED ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗ್ತಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್ಸಂಗ್ ಗ್ಯಾಲಕ್ಸಿ ನೋಟ್ 20 ಸರಣಿಯಲ್ಲಿ ಗ್ಯಾಲಕ್ಸಿ ನೋಟ್ 20 ಅಲ್ಟ್ರಾ ಸ್ಮಾರ್ಟ್‌ಫೋನ್ ಹೊಸ ಕ್ಯಾಮೆರಾ ಫೀಚರ್ಸ್ ಮತ್ತು ಹೊಸ ಎಸ್ ಪೆನ್ ಜೊತೆಗೆ ಬರಲಿದೆ ಎಂದು ಸಹ ಸೂಚಿಸಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಕಳೆದ ವರ್ಷ ಆಗಸ್ಟ್ 2019 ರಲ್ಲಿ ಬಿಡುಗಡೆ ಮಾಡಿದ್ದ ಗ್ಯಾಲಕ್ಸಿ ನೋಟ್ 10+ಗೆ ಹೋಲುವ ಮಾದರಿಯನ್ನ ಹೊಂದಿರಲಿದೆ ಎಂದು ಟಿಪ್‌ಸ್ಟರ್ ನಲ್ಲಿ ವರದಿ ಆಗಿದೆ.ಅಲ್ಲದೆ ಟ್ವಿಟರ್ ಪೋಸ್ಟ್ ಪ್ರಕಾರ, ಸ್ಯಾಮ್ಸಂಗ್ ಗ್ಯಾಲಕ್ಸಿ ನೋಟ್ 20 ಅಲ್ಟ್ರಾವನ್ನು ಅಘೋಷಿತ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 865+ SoC ಪ್ರೊಸೆಸರ್ ಅನ್ನು ಹೊಂದಿರಲಿದ ಎನ್ನಲಾಗ್ತಿದೆ.

ಇನ್ನು ಗ್ಯಾಲಕ್ಸಿ ನೋಟ್ 20 ಅಲ್ಟ್ರಾ ಆವೃತ್ತಿಯ ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್ ಅನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಅಲ್ಲದೆ QHD + ರೆಸಲ್ಯೂಶನ್ ಸಾಮರ್ಥ್ಯವನ್ನ ಹೊಂದಿರುವ LTPO OLED ಡಿಸ್‌ಪ್ಲೇಯನ್ನು ಹೊಂದಿರುತ್ತದೆ ಎಂದು ಟಿಪ್‌ಸ್ಟರ್ ಹೇಳಿದೆ. ಇನ್ನು ಈ ಹೊಸ ಸ್ಮಾರ್ಟ್‌ಫೋನ್ ನವೀನ ಮಾದರಿಯ ಕ್ಯಾಮೆರಾ ತಂತ್ರಜ್ಞಾನ ಹೊಂದಿದ್ದು, ಹೊಸ ಮಾದರಿಯ ಅನುಭವ ನೀಡಲಿದೆ ಎನ್ನಲಾಗ್ತಿದೆ. ಅಷ್ಟೇ ಅಲ್ಲ ವೆನಿಲ್ಲಾ ಗ್ಯಾಲಕ್ಸಿ ನೋಟ್ 20 60Hz ಫುಲ್ ಹೆಚ್‌ಡಿ ಫ್ಲಾಟ್ ಡಿಸ್‌ಪ್ಲೇ ಅನ್ನು ಹೊಂದಿರಲಿದೆ ಎನ್ನಲಾಗಿದ್ದು, ಇದು ವೈಡ್ ಫ್ರೇಮ್‌ಗಳೊಂದಿಗೆ ಎಂದು ಅಂದಾಜಿಸಲಾಗಿದೆ.

ಅಲ್ಲದೆ ಈ ಗ್ಯಾಲಕ್ಸಿ ನೋಟ್ 20+ ಸರಣಿಯ ಸ್ಮಾರ್ಟ್‌ಫೋನ್ ಬ್ಲ್ಯಾಕ್, ತಾಮ್ರ, ಬಿಳಿ, ಗ್ರೇ ಮತ್ತು ಮಿಂಟ್ ಗ್ರೀನ್ ಕಲರ್ ಆಯ್ಕೆಗಳಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಸರಣಿಯ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಇಲ್ಲವೇ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಜೊತೆಗೆ ಬ್ಯಾಟರಿ ಪ್ಯಾಕ್‌ಅಪ್ ನಲ್ಲಿ ವ್ಯತ್ಯಾಸಗಳನ್ನು ಕಾಣುವ ಸಾಧ್ಯತೆ ಇದೆ. ಇದಲ್ಲದೆ ಗ್ಯಾಲಕ್ಸಿ ಫೋಲ್ಡ್ 2 ಮತ್ತು 5G ಆಯ್ಕೆಯ ಸ್ಮಾರ್ಟ್‌ಫೋನ್ ಜೊತೆಗೆ ಗ್ಯಾಲಕ್ಸಿ ನೋಟ್ 20 ಸರಣಿಯನ್ನು ಆಗಸ್ಟ್ 5 ರಂದು ಆನ್‌ಲೈನ್ ಈವೆಂಟ್ ಮೂಲಕ ಅನಾವರಣಗೊಳಿಸಲಿದೆ ಎಂದು ನಿರೀಕ್ಷಿಸಲಾಗಿದೆ.


Click it and Unblock the Notifications








