ಸ್ಯಾಮ್‌ಸಂಗ್ ಗ್ಯಾಲಕ್ಸಿ ಕ್ವಾಂಟಮ್ 2 ಲಾಂಚ್: ಫೀಚರ್ಸ್ ಏನು?
ದಕ್ಷಿಣ ಕೊರಿಯಾ ಟೆಕ್ ದಿಗ್ಗಜ ಸ್ಯಾಮ್‌ಸಂಗ್ ಕಂಪೆನಿ ಬಜೆಟ್ ದರದಿಂದ ಹೈ ಎಂಡ್ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿರುವ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಬ್ರ್ಯಾಂಡ್ ಆಗಿ ಗುರುತಿಸಿ ಕೊಂಡಿದೆ. ಗ್ಯಾಲಕ್ಸಿ ಕ್ವಾಂಟಮ್ ಹೆಸರಿನ ಫೋನ್‌ಗಳನ್ನು ಲಾಂಚ್ ಮಾಡಿದೆ. ಈಗ ಕ್ವಾಂಟಮ್ 2 ಫೋನ್ ಬಿಡುಗಡೆ ಮಾಡಿದೆ.

ಹೌದು, ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಸ್ಯಾಮ್‌ಸಂಗ್ ಗ್ಯಾಲಕ್ಸಿ ಕ್ವಾಂಟಮ್ 2 ಸ್ಮಾರ್ಟ್‌ಫೋನ್ ಅನಾವರಣ ಮಾಡಿದೆ. ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 855+ SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ಅನ್ನು ಪಡೆದಿದೆ. ಹಾಗೆಯೇ 1,440x3,200 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದ ಡಿಸ್ಪ್ಲೇ ಅನ್ನು ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಆಕರ್ಷಕ ಡಿಸ್‌ಪ್ಲೇ ರಚನೆ
ಗ್ಯಾಲಕ್ಸಿ ಕ್ವಾಂಟಮ್ 2 ಸ್ಮಾರ್ಟ್‌ಫೋನ್ 1,440x3,200 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಕ್ವಾಡ್ HD+ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯ ಹೆಚ್ಚು ಪ್ರಖರವಾಗಿದೆ. ವಿಡಿಯೋ ಹಾಗೂ ಗೇಮ್ ಆಡಲು ಅತ್ಯುತ್ತಮ ಸಪೋರ್ಟ್ ಮಾಡಲಿದೆ.

ಗ್ಯಾಲಕ್ಸಿ ಕ್ವಾಂಟಮ್ 2 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 855+ SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ಅನ್ನು ಪಡೆದಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 6GB RAM + 128GB. ಮೆಮೊರಿ ಕಾರ್ಡ್ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯ ವಿಸ್ತರಣೆ ಮಾಡಿಕೊಳ್ಳುವುದಕ್ಕೆ ಅವಕಾಶವನ್ನು ಸಹ ನೀಡಲಾಗಿದೆ.

ಟ್ರಿಪಲ್ ಕ್ಯಾಮೆರಾ ಸೆನ್ಸಾರ್
ಗ್ಯಾಲಕ್ಸಿ ಕ್ವಾಂಟಮ್ 2 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಸೆಕೆಂಡರಿ ಕ್ಯಾಮೆರಾವು 12 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನು ಮೂರನೇ ಕ್ಯಾಮೆರಾವು ಸಹ 5 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ 10 ಮೆಗಾ ಪಿಕ್ಸಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಗ್ಯಾಲಕ್ಸಿ ಕ್ವಾಂಟಮ್ 2 ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, ಇದು 25W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. 161.9x73.8x8.1mm ರಚನೆಯನ್ನು ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ ಎಲ್ ಟಿಇ, ವೈ-ಫೈ 802.11 ಬಿ / ಜಿ / ಎನ್, ಬ್ಲೂಟೂತ್ ವಿ 5.0, ಜಿಪಿಎಸ್ / ಎ-ಜಿಪಿಎಸ್, ಮೈಕ್ರೋ-ಯುಎಸ್ಬಿ ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಸೇರಿವೆ. ಈ ಫೋನ್ ವೈಟ್, ಗ್ರೇ ಹಾಗೂ ವೈಲೇಟ್ ಬಣ್ಣಗಳ ಆಯ್ಕೆ ಪಡೆದಿದೆ.


Click it and Unblock the Notifications








