ಭಾರತದಲ್ಲಿ 'ಸ್ಯಾಮ್‌ಸಂಗ್ ಗ್ಯಾಲಕ್ಸಿ S10 ಲೈಟ್' ಫೋನ್ ಬೆಲೆ ಎಷ್ಟು ಗೊತ್ತಾ?

|

ಜನಪ್ರಿಯ 'ಸ್ಯಾಮ್‌ಸಂಗ್' ಸಂಸ್ಥೆಯು ಸ್ಮಾರ್ಟ್‌ಫೋನ್ ತಯಾರಿಕೆಯಲ್ಲಿ ಮುಂಚೂಣಿಯ ಸ್ಥಾನದಲ್ಲಿ ಗುರುತಿಸಿಕೊಂಡಿದೆ. ಸಂಸ್ಥೆಯು ಈಗಾಗಲೇ ತನ್ನ 'ಗ್ಯಾಲಕ್ಸಿ ಎಸ್‌10' ಸರಣಿಯಲ್ಲಿ ಹಲವು ಟಾಪ್‌ ಎಂಡ್ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಅದೇ ಸರಣಿಯಲ್ಲಿ ಇದೀಗ 'ಗ್ಯಾಲಕ್ಸಿ ಎಸ್‌10 ಲೈಟ್'‌ ಸ್ಮಾರ್ಟ್‌ಫೋನ್‌ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸಲು ಸಿದ್ಧವಾಗಿದೆ. ಬೆಲೆಯು ಬಗ್ಗೆ ಮಾಹಿತಿ ಲೀಕ್ ಆಗಿದೆ.

ಗ್ಯಾಲಕ್ಸಿ ಎಸ್‌10 ಲೈಟ್

ಹೌದು, ಸ್ಯಾಮ್‌ಸಂಗ್ ಕಂಪನಿಯು ದೇಶಿಯ ಮಾರುಕಟ್ಟೆಗೆ ಗ್ಯಾಲಕ್ಸಿ ಎಸ್‌10 ಲೈಟ್ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ತಯಾರಾಗಿದೆ. ಈ ಸ್ಮಾರ್ಟ್‌ಫೋನ್ ಫೀಚರ್ಸ್‌ಗಳು ಆಕರ್ಷಕವಾಗಿದ್ದು, ಗ್ರಾಹಕರಲ್ಲಿ ಫೋನ ಬೆಲೆಯ ಬಗ್ಗೆ ಭಾರಿ ಕುತೂಹಲ ಮೂಡಿತ್ತು. ಆದ್ರೆ ಇದೀಗ ಗ್ಯಾಲಕ್ಸಿ ಎಸ್‌10 ಲೈಟ್ ಫೋನ್ ಬೆಲೆ ಲೀಕ್ ಆಗಿದ್ದು, ಶೀಘ್ರದಲ್ಲೇ ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಗೆ ಲಭ್ಯವಾಗಲಿದೆ.

8GB RAM ಮತ್ತು 128GB

ಗ್ಯಾಲಕ್ಸಿ ಎಸ್‌10 ಲೈಟ್‌ ಸ್ಮಾರ್ಟ್‌ಫೋನ್ 8GB RAM ಮತ್ತು 128GB ಆಂತರಿಕ ಸ್ಟೋರೇಜ್ ಸಾಮರ್ಥ್ಯದ ವೇರಿಯಂಟ್‌ ಆಯ್ಕೆ ಹೊಂದಿರಲಿದೆ. ಇನ್ನು ಈ ಫೋನ್ ಇನ್ನು 6.7 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಸೂಪರ್ AMOLED ಡಿಸ್‌ಪ್ಲೇ ಒಳಗೊಂಡಿದ್ದು, ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 855 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. 45W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಬೆಂಬಲದೊಂದಿಗೆ, 4500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದೆ.

ತ್ರಿವಳಿ ಕ್ಯಾಮೆರಾ

ಈ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾವನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿಯ ಸೋನಿಯ IMX586 ಸೆನ್ಸಾರ್‌ ಹೊಂದಿದೆ. ಸೆಕೆಂಡರಿ ಕ್ಯಾಮೆರಾವು 12ಎಂಪಿಯ ಅಲ್ಟ್ರಾ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದ್ದು, ತೃತೀಯ ಕ್ಯಾಮೆರಾವು 5ಎಂಪಿಯ ಮೈಕ್ರೋ ಲೆನ್ಸ್‌ ಒಳಗೊಂಡಿದೆ. ಇನ್ನು ಸೆಲ್ಫಿ ಕ್ಯಾಮೆರಾವು ಹೈ ಎಂಡ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ.

ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌

ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್‌10 ಲೈಟ್ ಫೋನ್ ಆರಂಭಿಕ ದರವು 45,000ರೂ.ಗಳ ಒಳಗೆ ಇರಲಿದೆ ಎಂದು ಲೀಕ್ ಮಾಹಿತಿಗಳಿಂದ ತಿಳಿದುಬಂದಿದೆ. ಇದೇ ಜನವರಿ 25ರಂದು ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಗೆ ಲಭ್ಯವಾಗಲಿದೆ ಎನ್ನಲಾಗಿದ್ದು, ಹಾಗೆಯೇ ಆಫ್‌ಲೈನ್ ಮಾರುಕಟ್ಟೆಯಲ್ಲಿ ದೊರೆಯಲಿದೆ ಎಂದು ತಿಳಿದುಬಂದಿದೆ. ಗ್ಯಾಲಕ್ಸಿ ಎಸ್‌ ಪೆನ್ ಸಪೋರ್ಟ್‌ ಸಹ ಪಡೆದಿರುತ್ತದೆ.

Most Read Articles
Best Mobiles in India

English summary
Samsung Galaxy S10 Lite with Snapdragon 855 SoC in February with a price range of Rs. 40,000 - Rs. 45,000. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X