ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎಸ್ 10 ಲೈಟ್ ಮತ್ತು ನೋಟ್ 10 ಲೈಟ್ ಫೀಚರ್ಸ್‌ ಲೀಕ್!‌

|

ಟೆಕ್‌ ಜಗತ್ತಿನ ದೈತ್ಯ ಸ್ಯಾಮ್‌ಸಂಗ್‌ ಕಂಪೆನಿ ತನ್ನ ಹೊಸ ಆವೃತ್ತಿಯ ಸ್ಮಾರ್ಟ್‌ಫೋನ್‌ಗಳಾದ ಸ್ಯಾಮ್ಸಂಗ್ ಗ್ಯಾಲಕ್ಸಿ ಎಸ್ 10 ಲೈಟ್ ಮತ್ತು ಗ್ಯಾಲಕ್ಸಿ ನೋಟ್ 10 ಲೈಟ್ ಬಿಡುಗಡೆಗೆ ಸಜ್ಜಾಗಿದೆ. ಆದರೆ ಬಿಡುಗಡೆಗೂ ಮುನ್ನವೇ ಸ್ಯಾಮ್ಸಂಗ್ ಗ್ಯಾಲಕ್ಸಿ ಎಸ್ 10 ಲೈಟ್ ಮತ್ತು ಗ್ಯಾಲಕ್ಸಿ ನೋಟ್ 10 ಲೈಟ್ ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ ಜರ್ಮನಿಯಲ್ಲಿ ಲೀಕ್‌ ಆಗಿದ್ದು. 6.7 ಇಂಚಿನ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಹೊಂದಿರುವ ಸ್ಮಾರ್ಟ್‌ಫೋನ್‌ ಇದಾಗಿರಲಿದ್ದು ಬಾರಿ ನಿರೀಕ್ಷೆಯನ್ನ ಹುಟ್ಟುಹಾಕಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ನ ಮುಂದಿನ ಆವೃತ್ತಿಯಾದ ಸ್ಯಾಮ್ಸಂಗ್ ಗ್ಯಾಲಕ್ಸಿ ಎಸ್ 10 ಲೈಟ್ ಮತ್ತು ಗ್ಯಾಲಕ್ಸಿ ನೋಟ್ 10 ಲೈಟ್ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈಗಾಗಲೇ ಬಾರಿ ನಿರೀಕ್ಷೆಯನ್ನ ಇಟ್ಟುಕೊಳ್ಳಲಾಗಿದೆ. ಸ್ಮಾರ್ಟ್‌ಫೋನ್‌ ಪ್ರೀಯರ ನೆಚ್ಚಿನ ಕಂಪೆನಿಗಳಲ್ಲಿ ಒಂದಾಗಿರೋ ಸ್ಯಾಮ್‌ಸಂಗ್‌ ಈ ಬಾರಿ ಯಾವ ರೀತಿಯ ಫೀಚರ್ಸ್‌ಗಳನ್ನ ಪರಿಚಯಿಸಲಿದೆ ಅನ್ನೋ ಕುತೂಹಲ ಇದ್ದೆ ಇದೆ. ಹಾಗಾದ್ರೆ ಲೀಕ್‌ ಮಾಹಿತಿ ಪ್ರಕಾರ ಯಾವೆಲ್ಲಾ ವಿಶೇಷತೆಗಳನ್ನ ಈ ಸ್ಮಾರ್ಟ್‌ಫೋನ್‌ಗಳು ಹೊಂದಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಕೊಡ್ತೀವಿ ನೋಡಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಗ್ಯಾಲಕ್ಸಿ ಎಸ್ 10 ಲೈಟ್ ಸ್ಮಾರ್ಟ್‌ಫೋನ್‌ 1080 × 2400 ಪಿಕ್ಸೆಲ್‌ನ 6.7-ಇಂಚಿನ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನ ಹೊಂದಿದ್ದು, 20: 9 ಅನುಪಾತವನ್ನ ಹೊಂದಿರಲಿದೆ ಎನ್ನಲಾಗಿದೆ. ಇದಲ್ಲದೆ ಗ್ಯಾಲಕ್ಸಿ ನೋಟ್ 10 ಸ್ಮಾರ್ಟ್‌ಫೋನ್‌ 1080 x 2280ಪಿಕ್ಸೆಲ್‌ನ 6.5 ಇಂಚಿ ಡೈನಾಮಿಕ ಅಮೋಲೆಡ್‌ ಡಿಸ್‌ಪ್ಲೇಯನ್ನ ಹೊಂದಿದೆ. ಜೊತೆಗೆ ಪಂಚ್-ಹೋಲ್ ಡಿಸ್‌ಪ್ಲೆಯನ್ನ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಗ್ಯಾಲಕ್ಸಿ ಎಸ್ 10 ಲೈಟ್ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ 855 ಪ್ರೊಸೆಸರ್‌ ಹೊಂದಿದ್ದು ಆಂಡ್ರಾಯ್ಡ್ 10 ಆಧಾರಿತ ಒನ್ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಗ್ಯಾಲಕ್ಸಿ 10 ಲೈಟ್‌ನಲ್ಲಿ 8GB RAM ಮತ್ತು 128GB ಶೇಖರಣಾ ಸಾಮರ್ಥ್ಯವನ್ನ ಹೊಂದಿದ್ದು, ಮೆಮೊರಿ ಕಾರ್ಡ್‌ ಮೂಲಕ ಶೇಖರಣಾ ಸಾಮರ್ಥ್ಯವನ್ನ 1TB ವರೆಗೂ ವಿಸ್ತರಿಸಬಹುದಾಗಿದೆ. ಅಷ್ಟೇ ಅಲ್ಲ ಗ್ಯಾಲಕ್ಸಿ ನೋಟ್ 10 ಲೈಟ್ ಸ್ಯಾಮ್‌ಸಂಗ್‌ ಎಕ್ಸಿನೋಸ್‌9 ಅಕ್ಟಾ 9810 ಪ್ರೊಸೆಸರ್‌ ಹೊಂದಿದ್ದು ಅಂಡ್ರಾಯ್ಡ್‌10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು 6 GB RAM ಮತ್ತು 128 GB ಶೇಖರಣಾ ಸಾಮರ್ಥ್ಯ ಹೊಂದಿದ್ದು, ಮೆಮೊರಿ ಕಾರ್ಡ್‌ ಮೂಲಕ 1TBವರೆಗೂ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಇನ್ನು ಗ್ಯಾಲಕ್ಸಿ S10ಲೈಟ್‌ ಸ್ಮಾರ್ಟ್‌ಫೋನ್‌ ಟ್ರಿಪಲ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು F/ 2.0 ಲೆನ್ಸ್ ಒಳಗೊಂಡಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಹೊಂದಿದ್ದು F/ 2.2 ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದೆ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು F/ 2.2 ಮ್ಯಾಕ್ರೋ ಲೆನ್ಸ್ ಅನ್ನ ಒಳಗೊಂಡಿದೆ. ಜೊತೆಗೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ನ F/ 2.2 ಸೆಲ್ಫಿ ಕ್ಯಾಮೆರಾವನ್ನ ಒಳಗೊಂಡಿದೆ. ಜೊತೆಗೆ ಗ್ಯಾಲಕ್ಸಿ ನೋಟ್ 10 ಲೈಟ್ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು ಮುಖ್ಯಕ್ಯಾಮೆರಾ ಮತ್ತು ಎರಡನೇ ಕ್ಯಾಮೆರಾ 12ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದ್ದು, ಸೆಲ್ಫಿ ಕ್ಯಾಮೆರಾ 32ಮೆಗಾಫಿಕ್ಸೆಲ್‌ ಇರಲಿದೆ ಎಂದು ಅಂದಾಜಿಸಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಗ್ಯಾಲಕ್ಸಿ S10ಲೈಟ್ ಸ್ಮಾರ್ಟ್‌ಫೋನ್‌ 4,500mAh ಬ್ಯಾಟರಿ ಸಾಮರ್ಥ್ಯವನ್ನ ಹೊಂದಿದ್ದು, 45W ಚಾರ್ಜಿಂಗ್‌ ಅನ್ನ ಬೆಂಬಲಿಸಲಿದೆ. ಗ್ಯಾಲಕ್ಸಿ ನೋಟ್ 10 ಲೈಟ್ ಸ್ಮಾರ್ಟ್‌ಫೋನ್‌ 3100 mAh ಬ್ಯಾಟರಿ ಪ್ಯಾಕ್‌ ಆಪ್‌ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಈ ಎರಡು ಸ್ಮಾರ್ಟ್‌ಫೊನ್‌ಗಳು ಬ್ಲೂಟೂತ್‌, ವೈಫೈ, ಯುಎಸ್‌ಬಿ ಚಾರ್ಜಿಂಗ್‌ ಕನೆಕ್ಟಿವಿಟಿಯನ್ನ ಒಳಗೊಂಡಿರಲಿವೆ ಎಂದು ಹೇಳಲಾಗ್ತಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಗ್ಯಾಲಕ್ಸಿ ಎಸ್ 10 ಲೈಟ್ ಸ್ಮಾರ್ಟ್‌ಫೋನ್‌ ಬೆಲೆ ಯುರೋ 679.99 (ಸುಮಾರು 54,000 ರೂ)ಆಗಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಗ್ಯಾಲಕ್ಸಿ ನೋಟ್ 10 ಲೈಟ್ ಸ್ಮಾರ್ಟ್‌ಫೋನ್‌ನ ಬೆಲಕೆ 59,990ರೂ ಇರಲಿದೆ ಎಂದು ಊಹಿಸಲಾಗಿದೆ. ಈನ್ನು ಈ ಸ್ಮಾರ್ಟ್‌ಫೋನ್‌ಗಳು ಕಪ್ಪು, ಬಿಳಿ ಮತ್ತು ನೀಲಿ ಮೂರು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ ಎಂದು ಅಂದಾಜಿಸಲಾಗಿದೆ.

Best Mobiles in India

English summary
The Samsung Galaxy S10 Lite and the Galaxy Note 10 Lite are two of the most talked about devices right now in the tech world. We can expect an official reveal for both devices very soon. Now we have some more news about the Galaxy Note 10 Lite. In Germany, the phone’s specifications have just been leaked. Also, the phone will be launched in the next few days.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X