Home
ಸುದ್ದಿಜಾಲ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S20 + 5G BTS ಆವೃತ್ತಿ ಸ್ಮಾರ್ಟ್‌ಫೋನ್‌ ಲಾಂಚ್‌!

ಸ್ಮಾರ್ಟ್‌ಫೋನ್‌ ದಿಗ್ಗಜ ಎನಿಸಿಕೊಂಡಿರುವ ಸ್ಯಾಮ್‌ಸಂಗ್‌ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿ ಮಾರುಕಟ್ಟೆಯ ಸೈ ಎನಿಸಿಕೊಂಡಿರುವ ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರಾಂಡ್‌ ಎನಿಸಿಕೊಂಡಿದೆ. ಇದಲ್ಲದೆ ಮಾರುಕಟ್ಟೆಯಲ್ಲಿ ತನ್ನದೇ ಆದ ಪ್ರಾಬಲ್ಯವನ್ನ ವಿಸ್ತರಿಸಿಕೊಂಡಿದೆ. ಸದ್ಯ ಇದೀಗ ಸ್ಯಾಮ್‌ಸಂಗ್‌ ಕಂಪೆನಿ ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

ಸ್ಯಾಮ್‌ಸಂಗ್‌

ಹೌದು, ಸ್ಮಾರ್ಟ್‌ಫೋನ್‌ ವಲಯದ ದಿಗ್ಗಜ ಸ್ಯಾಮ್‌ಸಂಗ್‌ ಕಂಪೆನಿ ತನ್ನ ಹೊಸ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎಸ್ 20 + 5G BTS ಎಡಿಸನ್‌ ಅನ್ನು ಅದಿಕೃತವಾಗ ಬಿಡುಗಡೆ ಮಾಡಿದೆ. ಇದರ ಜೊತೆಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ ಬಡ್ಸ್ + ಬಿಟಿಎಸ್ ಆವೃತ್ತಿ ಇಯರ್‌ಬಡ್‌ಗಳನ್ನು ಸಹ ಅನಾವರಣಗೊಳಿಸಿದೆ. ಇನ್ನು ಈ ಹೊಸ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಹಾಗೂ ವಿನ್ಯಾಸ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಸ್ಯಾಮ್‌ಸಂಗ್ ಗ್ಯಾಲಕ್ಸಿ S20 + ಸ್ಮಾರ್ಟ್‌ಫೋನ್‌ 6.7-ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಇನ್ಫಿನಿಟಿ-ಒ ಡೈನಾಮಿಕ್ ಅಮೋಲೆಡ್ 2x ಡಿಸ್‌ಪ್ಲೇ ಆಗಿದ್ದು, ಉತ್ತಮ ವಿನ್ಯಾಸವನ್ನ ಒಳಗೊಂಡಿದೆ. ಇದಲ್ಲದೆ ಬಳಕೆದಾರರಿಗೆ ವೀಡಿಯೋ ಕರೆಗಳು ಹಾಗೂ ವೀಡಿಯೋ ವೀಕ್ಷಣೆಯಲ್ಲಿ ಉತ್ತಮ ಅನುಭವ ನಿಡುವ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಸ್ಯಾಮ್‌ಸಂಗ್ ಎಕ್ಸಿನೋಸ್ 990 ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 12GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ ಸಂಗ್ರಹ ಸಮರ್ಥ್ಯವನ್ನ ಮೆಮೊರಿ ಕಾರ್ಡ್‌ ಮೂಲಕ ವಿಸ್ತರಿಸಿಕೊಲ್ಳುವ ಅವಕಾಶವನ್ನ ಸಹ ನೀಡಲಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S20+ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಸೆನ್ಸಾರ್‌,ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 10 ಮೆಗಾಪಿಕ್ಸೆಲ್ ಸೆನ್ಸಾರ್‌ ಸಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎಸ್ 20 + 4,500 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ವೇಗದ ಚಾರ್ಜಿಂಗ್‌ ಬೆಂಬಲದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ, ಹಾಟ್‌ಸ್ಪಾಟ್‌, ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 20 + 5 ಇದೇ ಜೂನ್ 19 ರಿಂದ ವಿವಿಧ ಮಾರುಕಟ್ಟೆಗಳಲ್ಲಿ ಸ್ಯಾಮ್‌ಸಂಗ್.ಕಾಂನಲ್ಲಿ ಖರೀದಿಸಲು ಲಭ್ಯವಾಗಲಿದೆ.

Best Mobiles in India

English summary
Samsung Galaxy S20+ features a 6.7-inch Infinity-O Dynamic AMOLED 2X display and it is powered by Samsung Exynos 990.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+