ಸ್ಯಾಮ್‌ಸಂಗ್ ಗ್ಯಾಲಕ್ಸಿ S ಸರಣಿಯ ಈ ಫೋನ್‌ಗೆ ಈಗ ಭಾರೀ ಡಿಸ್ಕೌಂಟ್!
ಜನಪ್ರಿಯ ಸ್ಯಾಮ್‌ಸಂಗ್ ಕಂಪನಿಯು ಗ್ಯಾಲಕ್ಸಿ S ಸರಣಿಯಲ್ಲಿ ಹಲವು ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಅವುಗಳಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್ ಸಹ ಒಂದಾಗಿದ್ದು, ಇದೀಗ ಈ ಸ್ಮಾರ್ಟ್‌ಫೋನ್ ಭಾರೀ ರಿಯಾಯಿತಿ ಪಡೆದಿದೆ. ಹೀಗಾಗಿ ಗ್ಯಾಲಕ್ಸಿ S ಸರಣಿಯ ಫೋನ್ ಖರೀದಿಸುವ ಗ್ರಾಹಕರಿಗೆ ಇದು ಖುಷಿ ಎನಿಸಿದೆ.
ಹೌದು, ಸ್ಯಾಮ್‌ಸಂಗ್ ತನ್ನ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್ ಅಮೆಜಾನ್ ಇ ಕಾಮರ್ಸ್ ಮಾರುಕಟ್ಟೆಯಲ್ಲಿ ಈಗ 53% ರಷ್ಟು ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್ 128GB ಸ್ಟೋರೇಜ್‌ನ ವೇರಿಯಂಟ್ 74,999ರೂ. ಗಳ ಪ್ರೈಸ್ ಟ್ಯಾಗ್ ಹೊಂದಿದ್ದು, 34,999ರೂ. ಗಳ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಖರೀದಿ ಮಾಡಬಹುದಾಗಿದೆ.

ಇದರೊಂದಿಗೆ ಆಯ್ದ ಬ್ಯಾಂಕ್‌ಗಳಿಂದ ಆಫರ್ ಹಾಗೂ ನೋ ಕಾಸ್ಟ್ ಇಎಮ್‌ಐ ಸೌಲಭ್ಯ ಸಹ ಗ್ರಾಹಕರಿಗೆ ಲಭ್ಯವಾಗಲಿದೆ. ಇನ್ನು ಈ ಮೊಬೈಲ್ ನ್ಯಾವಿ, ಲ್ಯಾವೆಂಡರ್, ಗ್ರೀನ್ ಕಲರ್‌ಗಳ ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತದೆ. ಇನ್ನುಳಿದಂತೆ ಈ ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಫುಲ್-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 20: 9 ರಚನೆ ಅನುಪಾತವನ್ನು ಒಳಗೊಂಡಿರುವ ಸೂಪರ್ ಅಮೋಲೆಡ್ ಇನ್ಫಿನಿಟಿ-ಒ ಡಿಸ್‌ಪ್ಲೇ ಆಗಿದೆ. ಅಲ್ಲದೆ ಇದು 120Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ.
ಪ್ರೊಸೆಸರ್ ಯಾವುದು : ಗ್ಯಾಲಕ್ಸಿ S20 FE 4G ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಎಕ್ಸಿನೋಸ್ 990 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 8 GB RAM + 128 GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು 1 TB ವರೆಗೆ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್ : ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ವೈಡ್-ಆಂಗಲ್ ಲೆನ್ಸ್ ಹೊಂದಿದ್ದು, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (ಒಐಎಸ್) ಮತ್ತು ಡ್ಯುಯಲ್ ಫೇಸ್ ಡಿಟೆಕ್ಷನ್ ಆಟೋಫೋಕಸ್ ಅನ್ನು ಬೆಂಬಲಿಸುತ್ತದೆ. ಎರಡನೇ ಕ್ಯಾಮೆರಾ 123 ಡಿಗ್ರಿ ಫೀಲ್ಡ್ ವ್ಯೂ ಜೊತೆಗೆ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್ ಅನ್ನು ಹೊಂದಿದೆ.ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಬ್ಯಾಟರಿ ಬ್ಯಾಕ್‌ಅಪ್: ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದು 15W ಫಾಸ್ಟ್ ಚಾರ್ಜಿಂಗ್ ಮತ್ತು ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ವಾಯರ್‌ಲೆಸ್ ಚಾರ್ಜಿಂಗ್-ಬೆಂಬಲಿತ ಡಿವೈಸ್‌ಗಳೊಂದಿಗೆ ಪವರ್ ಹಂಚಿಕೊಳ್ಳಲು ಸ್ಯಾಮ್‌ಸಂಗ್‌ನ ವಾಯರ್‌ಲೆಸ್ ಪವರ್‌ಶೇರ್ ಸಹ ಇದೆ.
ಇತರೆ ಸೌಲಭ್ಯಗಳು : ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE ವೈ-ಫೈ, ಬ್ಲೂಟೂತ್ V5.0, GPS, NFC, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಸಹ ಹೊಂದಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಹಾಲ್ ಸೆನ್ಸರ್ ಅನ್ನು ಹೊಂದಿದೆ. ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಒಳಗೊಂಡಿದೆ.


Click it and Unblock the Notifications








