Home
ಸುದ್ದಿಜಾಲ

ಸ್ಯಾಮ್‌ಸಂಗ್‌ನ ಈ ದೈತ್ಯ ಸ್ಮಾರ್ಟ್‌ಫೋನ್‌ ಈಗ ಡಿಸ್ಕೌಂಟ್‌ನಲ್ಲಿ ಲಭ್ಯ!

ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿಯು ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ ಸರಣಿಯನ್ನು ಬಿಡುಗಡೆ ಮಾಡಿ ಗ್ರಾಹಕರನ್ನು ಆಕರ್ಷಿಸಿದೆ. ಆ ಪೈಕಿ ಗ್ಯಾಲಕ್ಸಿ S ಸರಣಿಯಲ್ಲಿ ಪರಿಚಯಿಸಿರುವ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್ ಫೀಚರ್ಸ್‌ಗಳಿಂದ ಫೋನ್‌ ಪ್ರಿಯರನ್ನು ಸೆಳೆದಿದೆ. ಇದೀಗ ಈ ಸ್ಮಾರ್ಟ್‌ಫೋನ್ ಭಾರೀ ರಿಯಾಯಿತಿ ಪಡೆದಿದ್ದು, ಮತ್ತೆ ಗ್ರಾಹಕರನ್ನು ಆಕರ್ಷಿಸಿದೆ.

ಹೌದು, ಸ್ಯಾಮ್‌ಸಂಗ್‌ ತನ್ನ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ ಅಮೆಜಾನ್‌ ಇ ಕಾಮರ್ಸ್‌ ಮಾರುಕಟ್ಟೆಯಲ್ಲಿ ಈಗ 53% ನಷ್ಟು ಡಿಸ್ಕೌಂಟ್‌ ದರದಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ 128GB ಸ್ಟೋರೇಜ್‌ನ ವೇರಿಯಂಟ್‌ 74,999ರೂ. ಗಳ ಪ್ರೈಸ್‌ ಟ್ಯಾಗ್‌ ಹೊಂದಿದ್ದು, 34,999ರೂ. ಗಳ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಲಿದೆ.

ಸ್ಯಾಮ್‌ಸಂಗ್‌ನ ಈ ದೈತ್ಯ ಸ್ಮಾರ್ಟ್‌ಫೋನ್‌ ಈಗ ಡಿಸ್ಕೌಂಟ್‌ನಲ್ಲಿ ಲಭ್ಯ!

ಇದರೊಂದಿಗೆ ಆಯ್ದ ಬ್ಯಾಂಕ್‌ಗಳಿಂದ ಕೊಡುಗೆ ಹಾಗೂ ನೋ ಕಾಸ್ಟ್‌ ಇಎಮ್‌ಐ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ನ್ಯಾವಿ, ಲ್ಯಾವೆಂಡರ್, ಗ್ರೀನ್‌ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಈ ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 20: 9 ರಚನೆ ಅನುಪಾತವನ್ನು ಒಳಗೊಂಡಿರುವ ಸೂಪರ್ ಅಮೋಲೆಡ್ ಇನ್ಫಿನಿಟಿ-ಒ ಡಿಸ್‌ಪ್ಲೇ ಆಗಿದೆ. ಅಲ್ಲದೆ ಇದು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ನ ಈ ದೈತ್ಯ ಸ್ಮಾರ್ಟ್‌ಫೋನ್‌ ಈಗ ಡಿಸ್ಕೌಂಟ್‌ನಲ್ಲಿ ಲಭ್ಯ!

ಪ್ರೊಸೆಸರ್‌ ಯಾವುದು : ಗ್ಯಾಲಕ್ಸಿ S20 FE 4G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಎಕ್ಸಿನೋಸ್ 990 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 8 GB RAM + 128 GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು 1 TB ವರೆಗೆ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್ : ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ವೈಡ್-ಆಂಗಲ್ ಲೆನ್ಸ್ ಹೊಂದಿದ್ದು, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (ಒಐಎಸ್) ಮತ್ತು ಡ್ಯುಯಲ್ ಫೇಸ್ ಡಿಟೆಕ್ಷನ್ ಆಟೋಫೋಕಸ್ ಅನ್ನು ಬೆಂಬಲಿಸುತ್ತದೆ. ಎರಡನೇ ಕ್ಯಾಮೆರಾ 123 ಡಿಗ್ರಿ ಫೀಲ್ಡ್ ವ್ಯೂ ಜೊತೆಗೆ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್‌ ಅನ್ನು ಹೊಂದಿದೆ.ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಸ್ಯಾಮ್‌ಸಂಗ್‌ನ ಈ ದೈತ್ಯ ಸ್ಮಾರ್ಟ್‌ಫೋನ್‌ ಈಗ ಡಿಸ್ಕೌಂಟ್‌ನಲ್ಲಿ ಲಭ್ಯ!

ಬ್ಯಾಟರಿ ಬ್ಯಾಕ್‌ಅಪ್‌: ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 15W ಫಾಸ್ಟ್ ಚಾರ್ಜಿಂಗ್ ಮತ್ತು ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ವಾಯರ್‌ಲೆಸ್‌ ಚಾರ್ಜಿಂಗ್-ಬೆಂಬಲಿತ ಡಿವೈಸ್‌ಗಳೊಂದಿಗೆ ಪವರ್‌ ಹಂಚಿಕೊಳ್ಳಲು ಸ್ಯಾಮ್‌ಸಂಗ್‌ನ ವಾಯರ್‌ಲೆಸ್ ಪವರ್‌ಶೇರ್ ಸಹ ಇದೆ.

ಇತರೆ ಸೌಲಭ್ಯಗಳು : ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE ವೈ-ಫೈ, ಬ್ಲೂಟೂತ್ V5.0, GPS, NFC, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಸಹ ಹೊಂದಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಹಾಲ್ ಸೆನ್ಸರ್ ಅನ್ನು ಹೊಂದಿದೆ. ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ.

Best Mobiles in India

English summary
Samsung Galaxy S20 FE 5G available at discount price on Amazon; check offer price and more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+