ಭಾರಿ ಸಂಚಲನ ಸೃಷ್ಟಿಸಿದ್ದ ಸ್ಯಾಮ್‌ಸಂಗ್‌ನ ಈ ಫೋನ್‌ಗೆ ಇದೀಗ 53% ಡಿಸ್ಕೌಂಟ್!
ಟೆಕ್ ದೈತ್ಯ ಸ್ಯಾಮ್‌ಸಂಗ್ ತನ್ನ ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಿಂದ ಜನಪ್ರಿಯತೆ ಪಡೆದುಕೊಂಡಿದೆ. ಇದರಲ್ಲಿ ಗ್ಯಾಲಕ್ಸಿ S ಸರಣಿಯ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್‌ಗಳಿಗೆ ಸಹಜವಾಗಿಯೇ ಭಾರಿ ಡಿಮ್ಯಾಂಡ್ ಇದೆ. ಈ ಪೈಕಿ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆದಿದೆ. ಸದ್ಯ ಈ ಫೋನ್ ಇದೀಗ ಭಾರಿ ಡಿಸ್ಕೌಂಟ್ ಪಡೆದುಕೊಂಡಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್ ಅಮೆಜಾನ್ ತಾಣದಲ್ಲಿ 53% ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೂಲಕ ತನ್ನ ಮೂಲಬೆಲೆಗಿಂತ ಅತಿ ಕಡಿಮೆ ಬೆಲೆಯಲ್ಲಿ ಈ ಸ್ಮಾರ್ಟ್‌ಫೋನ್ ಅನ್ನು ಸೇಲ್ ಮಾಡುತ್ತಿದೆ. ಅಷ್ಟೇ ಅಲ್ಲ ಈ ಸ್ಮಾರ್ಟ್‌ಫೋನ್ ಮೇಲೆ ವಿವಿಧ ಬ್ಯಾಂಕ್‌ಗಳು ಕೂಡ ವಿಶೇಷ ಆಫರ್ ಅನ್ನು ನೀಡುತ್ತಿವೆ. ಇದರಿಂದ ಇದರ ಬೆಲೆಯಲ್ಲಿ ಭಾರಿ ಬದಲಾವಣೆ ಆಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಮೇಲೆ ನಿಮಗೆ ದೊರೆಯಲಿರುವ ರಿಯಾಯಿತಿ ಎಷ್ಟು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

53% ಡಿಸ್ಕೌಂಟ್! ಕೂಡಲೇ ಖರೀದಿಸಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್ ಇದೀಗ ಅಮೆಜಾನ್ ಸೈಟ್‌ನಲ್ಲಿ 53% ಡಿಸ್ಕೌಂಟ್ ಪಡೆದುಕೊಂಡಿದೆ. ಇದರಿಂದ 74,999ರೂ. (128GB ಸ್ಟೋರೇಜ್) ಬೆಲೆಯ ಸ್ಮಾರ್ಟ್‌ಫೋನ್ ನಿಮಗೆ ಕೇವಲ 34,999ರೂ. ರಿಯಾಯಿತಿ ಬೆಲೆಯಲ್ಲಿ ಲಭ್ಯವಾಗಲಿದೆ. ಜೊತೆಗೆ ವಿವಿಧ ಬ್ಯಾಂಕ್‌ಗಳ ಕ್ರೆಡಿಟ್ ಕಾರ್ಡ್ ಮೂಲಕ ಸ್ಮಾರ್ಟ್‌ಫೋನ್ ಖರೀದಿಸಿದರೆ ಕ್ಯಾಶ್‌ಬ್ಯಾಕ್ ಆಫರ್ ಜೊತೆಗೆ ವಿವಿಧ ಆಫರ್‌ಗಳನ್ನು ಪಡೆದುಕೊಳ್ಳಬಹುದಾಗಿದೆ. ಇದರಿಂದ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಇನ್ನಷ್ಟು ಇಳಿಕೆಯಾಗಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಡಿಸ್‌ಪ್ಲೇ ಹೇಗಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 20:9 ರಚನೆ ಅನುಪಾತವನ್ನು ಒಳಗೊಂಡಿದ್ದು, 120Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ. ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಎಕ್ಸಿನೋಸ್ 990 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8 GB RAM + 128 GB ಸಂಗ್ರಹ ಸಾಮರ್ಥ್ಯ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಕ್ಯಾಮೆರಾ ಸೆಟ್‌ಅಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಅಂಗಲ್ ಶೂಟರ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್ ಅನ್ನು ಹೊಂದಿದೆ. ಇದರೊಂದಿಗೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಬ್ಯಾಟರಿ ಮತ್ತು ಇತರೆ ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇದು 15W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE ವೈ-ಫೈ, ಬ್ಲೂಟೂಟ್ V5.0, GPS, NFC, ಮತ್ತು ಯುಎಸ್‌ಡಿಬಿ ಟೈಪ್-ಸಿ ಪೋರ್ಟ್ ಒಳಗೊಂಡಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಹಾಲ್ ಸೆನ್ಸರ್ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇನ್-ಡಿಸ್ಪಲ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಒಳಗೊಂಡಿದೆ.


Click it and Unblock the Notifications








