Home
ಸುದ್ದಿಜಾಲ

ಸ್ಯಾಮ್‌ಸಂಗ್‌ ಫೋನ್‌ ಖರೀದಿಸುವ ಗ್ರಾಹಕರೇ ಗಮನಿಸಿ; ಇದು ಬೆಸ್ಟ್‌ ಆಫರ್‌!

ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿಯು ಭಿನ್ನ ಶ್ರೇಣಿಯ ಮೊಬೈಲ್‌ ಸರಣಿಯನ್ನು ಲಾಂಚ್ ಮಾಡಿ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಆ ಪೈಕಿ ಗ್ಯಾಲಕ್ಸಿ S ಸರಣಿಯ ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಮೊಬೈಲ್‌ ಬೊಂಬಾಟ್‌ ಫೀಚರ್ಸ್‌ಗಳಿಂದ ಮೊಬೈಲ್‌ ಪ್ರಿಯರನ್ನು ಆಕರ್ಷಿಸಿದೆ. ಈಗ ಈ ಮೊಬೈಲ್‌ ಸಖತ್ ಡಿಸ್ಕೌಂಟ್‌ ಪಡೆದಿದ್ದು, ಮತ್ತೆ ಗ್ರಾಹಕರನ್ನು ಸೆಳೆದಿದೆ.

ಹೌದು, ಅಮೆಜಾನ್‌ ಇ ಕಾಮರ್ಸ್‌ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್‌ ತನ್ನ ಗ್ಯಾಲಕ್ಸಿ S20 FE ಮೊಬೈಲ್‌ ಈಗ 64% ರಷ್ಟು ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ. ಈ ಮೊಬೈಲ್‌ 8GB RAM + 128GB ಸ್ಟೋರೇಜ್‌ನ ವೇರಿಯಂಟ್‌ 74,999ರೂ. ಗಳ ಪ್ರೈಸ್‌ ಟ್ಯಾಗ್‌ ಹೊಂದಿದ್ದು, ಆದರೆ ಅಮೆಜಾನ್‌ ಗ್ರೇಟ್‌ ಫ್ರಿಡಂ ಸೇಲ್‌ನಲ್ಲಿ ಈಗ 26,999ರೂ. ಗಳ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ.

ಸ್ಯಾಮ್‌ಸಂಗ್‌ ಫೋನ್‌ ಖರೀದಿಸುವ ಗ್ರಾಹಕರೇ ಗಮನಿಸಿ; ಇದು ಬೆಸ್ಟ್‌ ಆಫರ್‌!

ಇನ್ನು ಈ ಸ್ಮಾರ್ಟ್‌ಫೋನ್ ನ್ಯಾವಿ, ಲ್ಯಾವೆಂಡರ್, ಗ್ರೀನ್‌ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಅಲ್ಲದೇ ಈ ಫೋನ್‌ ಎಕ್ಸಿನೋಸ್ 990 SoC ಪ್ರೊಸೆಸರ್‌, 12 ಮೆಗಾಪಿಕ್ಸೆಲ್ ಸಾಮರ್ಥ್ಯದ ಪ್ರಾಥಮಿಕ ಕ್ಯಾಮೆರಾ ಜೊತೆಗೆ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ರಚನೆ ಅನ್ನು ಸಹ ಪಡೆದುಕೊಂಡಿದೆ. ಹಾಗಾದರೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S20 FE ಮೊಬೈಲ್‌ನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಗ್ಯಾಲಕ್ಸಿ S20 FE ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಮಾಹಿತಿ : ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 20: 9 ರಚನೆ ಅನುಪಾತವನ್ನು ಒಳಗೊಂಡಿರುವ ಸೂಪರ್ ಅಮೋಲೆಡ್ ಇನ್ಫಿನಿಟಿ-ಒ ಡಿಸ್‌ಪ್ಲೇ ಆಗಿದೆ. ಅಲ್ಲದೆ ಇದು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಗ್ಯಾಲಕ್ಸಿ S20 FE ಪ್ರೊಸೆಸರ್‌ ಬಲ ಯಾವುದು : ಗ್ಯಾಲಕ್ಸಿ S20 FE 4G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಎಕ್ಸಿನೋಸ್ 990 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 8 GB RAM + 128 GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು 1 TB ವರೆಗೆ ವಿಸ್ತರಿಸಬಹುದಾಗಿದೆ.

ಗ್ಯಾಲಕ್ಸಿ S20 FE ಕ್ಯಾಮೆರಾ ಸೆನ್ಸಾರ್ ಮಾಹಿತಿ : ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್‌ವೈಡ್-ಆಂಗಲ್ ಲೆನ್ಸ್ ಪಡೆದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (ಒಐಎಸ್) ಮತ್ತು ಡ್ಯುಯಲ್ ಫೇಸ್ ಡಿಟೆಕ್ಷನ್ ಆಟೋಫೋಕಸ್ ಅನ್ನು ಸಪೋರ್ಟ್ ಮಾಡುತ್ತದೆ.

ಹಾಗೆಯೇ ಸೆಕೆಂಡರಿ ಕ್ಯಾಮೆರಾ 123 ಡಿಗ್ರಿ ಫೀಲ್ಡ್ ವ್ಯೂ ಜೊತೆಗೆ 12 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್ ಅನ್ನು ಪಡೆದಿದೆ. ತೃತೀಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್‌ ಅನ್ನು ಪಡೆದಿದ್ದು, ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಒಳಗೊಂಡಿದೆ.

ಗ್ಯಾಲಕ್ಸಿ S20 FE ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ : ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 15W ಫಾಸ್ಟ್ ಚಾರ್ಜಿಂಗ್ ಮತ್ತು ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಹಾಗೆಯೇ ವಾಯರ್‌ಲೆಸ್‌ ಚಾರ್ಜಿಂಗ್-ಬೆಂಬಲಿತ ಡಿವೈಸ್‌ಗಳೊಂದಿಗೆ ಪವರ್‌ ಶೇರ್ ಮಾಡಲು ಸ್ಯಾಮ್‌ಸಂಗ್‌ನ ವಾಯರ್‌ಲೆಸ್ ಪವರ್‌ಶೇರ್ ಸೌಲಭ್ಯ ಸಹ ಇದೆ.

ಗ್ಯಾಲಕ್ಸಿ S20 FE ಇತರೆ ಸೌಲಭ್ಯಗಳ ಮಾಹಿತಿ : ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಮೊಬೈಲ್‌ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE ವೈ-ಫೈ, ಬ್ಲೂಟೂತ್ V5.0, GPS, NFC, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಸಹ ಹೊಂದಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಹಾಲ್ ಸೆನ್ಸರ್ ಸೌಲಭ್ಯಗಳನ್ನು ಸಹ ಹೊಂದಿದೆ. ಜೊತೆಗೆ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಪಡೆದುಕೊಂಡಿದೆ.

Best Mobiles in India

English summary
Samsung Galaxy S20 FE 5G huge price cut on Amazon Great Freedom Sale. check offer details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+