ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್ 256GB ವೇರಿಯಂಟ್ ಲಾಂಚ್!
ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿಯು ಬಜೆಟ್ ದರದ ಫೋನ್‌ಗಳಿಂದ ದುಬಾರಿ ಬೆಲೆಯ ಫೋನ್‌ಗಳನ್ನು ಲಾಂಚ್ ಮಾಡಿ ಗ್ರಾಹಕರಿಂದ ಸೈ ಅನಿಸಿಕೊಂಡಿದೆ. ಅದರಲ್ಲಿ ದುಬಾರಿ ಪ್ರೈಸ್‌ನ ಫೋನ್‌ಗಳು ಹೈ ಎಂಡ್ ಫೀಚರ್ಸ್‌ಗಳಿಂದ ವಿಶೇಷ ಲುಕ್ ಪಡೆದಿರುತ್ತವೆ. ಈ ಲಿಸ್ಟಿಗೆ ಇತ್ತೀಚಿಗಷ್ಟೆ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್ ಅನ್ನು ಸೇರ್ಪಡೆ ಮಾಡಿದೆ. ಇದೀಗ ಈ ಫೋನಿನಲ್ಲಿ ಹೊಸದೊಂದು ವೇರಿಯಂಟ್ ಬಿಡುಗಡೆ ಮಾಡಿದೆ.

ಹೌದು, ಸ್ಯಾಮ್‌ಸಂಗ್ ಬಿಡುಗಡೆ ಮಾಡಿರುವ ಗ್ಯಾಲಕ್ಸಿ S20FE ಸ್ಮಾರ್ಟ್‌ಫೋನ್ ಈಗಾಗಲೇ ಟ್ರೆಂಡಿಂಗ್ ನಲ್ಲಿ ಕಾಣಿಸಿಕೊಂಡಿದೆ. ಈ ಫೋನ್ 8GB RAM + 128GB ವೇರಿಯಂಟ್‌ನ ಆಯ್ಕೆಯನ್ನು ಹೊಂದಿದೆ. ಆದ್ರೆ ಸಂಸ್ಥೆಯು ಈಗ ಗ್ಯಾಲಕ್ಸಿ S20FE 8GB RAM + 256GB ಸ್ಟೋರೇಜ್ ವೇರಿಯಂಟ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಹಾಗಾದರೇ ಗ್ಯಾಲಕ್ಸಿ S20FE ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿಶೇಷ
ಇದು 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಫುಲ್-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 20: 9 ರಚನೆ ಅನುಪಾತವನ್ನು ಒಳಗೊಂಡಿರುವ ಸೂಪರ್ ಅಮೋಲೆಡ್ ಇನ್ಫಿನಿಟಿ-ಒ ಡಿಸ್‌ಪ್ಲೇ ಆಗಿದೆ. ಅಲ್ಲದೆ ಇದು 120Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ.

ಪ್ರೊಸೆಸರ್ ಬಲ
ಗ್ಯಾಲಕ್ಸಿ S20 FE 4G ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಎಕ್ಸಿನೋಸ್ 990 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 8GB RAM + 128GB, 8GB+256GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು 1TB ವರೆಗೆ ವಿಸ್ತರಿಸಬಹುದಾಗಿದೆ

ಟ್ರಿಪಲ್ ರಿಯರ್ ಕ್ಯಾಮೆರಾ
ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ವೈಡ್-ಆಂಗಲ್ ಲೆನ್ಸ್ ಹೊಂದಿದ್ದು, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (ಒಐಎಸ್) ಮತ್ತು ಡ್ಯುಯಲ್ ಫೇಸ್ ಡಿಟೆಕ್ಷನ್ ಆಟೋಫೋಕಸ್ ಅನ್ನು ಬೆಂಬಲಿಸುತ್ತದೆ. ಎರಡನೇ ಕ್ಯಾಮೆರಾ 123 ಡಿಗ್ರಿ ಫೀಲ್ಡ್ ವ್ಯೂ ಜೊತೆಗೆ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್ ಅನ್ನು ಹೊಂದಿದೆ.ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಗ್ಯಾಲಕ್ಸಿ S20FE ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದು 15W ಫಾಸ್ಟ್ ಚಾರ್ಜಿಂಗ್ ಮತ್ತು ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ವಾಯರ್‌ಲೆಸ್ ಚಾರ್ಜಿಂಗ್-ಬೆಂಬಲಿತ ಡಿವೈಸ್‌ಗಳೊಂದಿಗೆ ಪವರ್ ಹಂಚಿಕೊಳ್ಳಲು ಸ್ಯಾಮ್‌ಸಂಗ್‌ನ ವಾಯರ್‌ಲೆಸ್ ಪವರ್‌ಶೇರ್ ಸಹ ಇದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE ವೈ-ಫೈ, ಬ್ಲೂಟೂತ್ V5.0, GPS, NFC, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಸಹ ಹೊಂದಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಹಾಲ್ ಸೆನ್ಸರ್ ಅನ್ನು ಹೊಂದಿದೆ. ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್ 8GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಸಿಂಗಲ್ ವೇರಿಯೆಂಟ್ ಬೆಲೆ 49,999 ರೂ. ಆಗಿದೆ. ಹಾಗೆಯೇ ಹೊಸ 8GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆಯು 53,999ರೂ. ಆಗಿದೆ.


Click it and Unblock the Notifications








