ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

|

ಸ್ಯಾಮ್‌ಸಂಗ್ ಮೊಬೈಲ್‌ ಕಂಪನಿಯ ಪ್ರೀಮಿಯಂ ಮಾದರಿಯ ಸ್ಮಾರ್ಟ್‌ಫೋನ್‌ಗಳು ಸಿಕ್ಕಾಪಟ್ಟೆ ಸದ್ದು ಮಾಡಿವೆ. ಆ ಲಿಸ್ಟ್‌ನಲ್ಲಿ ಇತ್ತೀಚಿಗಷ್ಟೆ ಕಂಪನಿಯು ಬಿಡುಗಡೆ ಮಾಡಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ ಕಾಣಿಸಿಕೊಂಡಿದೆ. ಈಗಾಗಲೇ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿರುವ ಈ ಸ್ಮಾರ್ಟ್‌ಫೋನ್ ಇದೀಗ ಭರ್ಜರಿ ಬೆಲೆ ಇಳಿಕೆಯಿಂದ ಮತ್ತಷ್ಟು ಗ್ರಾಹಕರನ್ನು ತಿರುಗಿ ನೋಡುವಂತೆ ಮಾಡಿದೆ.

ಮೆಗಾ

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಜನಪ್ರಿಯ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ ಕಡಿತ ಆಗಿದೆ. ಈ ಫೋನ್‌ 8GB RAM + 128GB ವೇರಿಯಂಟ್‌ ಆಯ್ಕೆಯನ್ನು ಪಡೆದಿದೆ. ಈ ಮಾಡೆಲ್‌ ಬೆಲೆಯಲ್ಲಿ ಈಗ ಬರೋಬ್ಬರಿ 14,000ರೂ. ಕಡಿತವಾಗಿದ್ದು, 36,990ರೂ. ಗಳ ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ ಫೀಚರ್ಸ್‌ಗಳು ಏನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 20: 9 ರಚನೆ ಅನುಪಾತವನ್ನು ಒಳಗೊಂಡಿರುವ ಸೂಪರ್ ಅಮೋಲೆಡ್ ಇನ್ಫಿನಿಟಿ-ಒ ಡಿಸ್‌ಪ್ಲೇ ಆಗಿದೆ. ಅಲ್ಲದೆ ಇದು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಪವರ್ ಯಾವುದು

ಪ್ರೊಸೆಸರ್‌ ಪವರ್ ಯಾವುದು

ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಎಕ್ಸಿನೋಸ್ 990 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 8GB RAM + 128GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು 1TB ವರೆಗೆ ವಿಸ್ತರಿಸಲು ಅವಕಾಶ ನೀಡಲಾಗಿದೆ.

ಟ್ರಿಪಲ್ ರಿಯರ್ ಕ್ಯಾಮೆರಾ

ಟ್ರಿಪಲ್ ರಿಯರ್ ಕ್ಯಾಮೆರಾ

ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್‌ವೈಡ್-ಆಂಗಲ್ ಲೆನ್ಸ್ ಹೊಂದಿದ್ದು, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (ಒಐಎಸ್) ಮತ್ತು ಡ್ಯುಯಲ್ ಫೇಸ್ ಡಿಟೆಕ್ಷನ್ ಆಟೋಫೋಕಸ್ ಅನ್ನು ಬೆಂಬಲಿಸುತ್ತದೆ. ಎರಡನೇ ಕ್ಯಾಮೆರಾ 123 ಡಿಗ್ರಿ ಫೀಲ್ಡ್ ವ್ಯೂ ಜೊತೆಗೆ 12 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 15W ಫಾಸ್ಟ್ ಚಾರ್ಜಿಂಗ್ ಮತ್ತು ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ವಾಯರ್‌ಲೆಸ್‌ ಚಾರ್ಜಿಂಗ್-ಬೆಂಬಲಿತ ಡಿವೈಸ್‌ಗಳೊಂದಿಗೆ ಪವರ್‌ ಹಂಚಿಕೊಳ್ಳಲು ಸ್ಯಾಮ್‌ಸಂಗ್‌ನ ವಾಯರ್‌ಲೆಸ್ ಪವರ್‌ಶೇರ್ ಸಹ ಇದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE ವೈ-ಫೈ, ಬ್ಲೂಟೂತ್ V5.0, ಜಿಪಿಎಸ್‌, NFC, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಸಹ ಹೊಂದಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಹಾಲ್ ಸೆನ್ಸಾರ್ ಅನ್ನು ಹೊಂದಿದೆ. ಇನ್ ಡಿಸ್ಪ್ಲೇ ಫಿಂಗರ್‌ ಪ್ರಿಂಟ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ 8GB RAM + 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಸಿಂಗಲ್‌ ವೇರಿಯೆಂಟ್‌ ಬೆಲೆ ಸದ್ಯ 36,990ರೂ.ಗಳು ಆಗಿದೆ. ಈ ಫೋನ್ ಕ್ಲೌಡ್ ರೆಡ್, ಕ್ಲೌಡ್ ಲ್ಯಾವೆಂಡರ್, ಕ್ಲೌಡ್ ಮಿಂಟ್, ಕ್ಲೌಡ್ ನೇವಿ ಮತ್ತು ಕ್ಲೌಡ್ ವೈಟ್ ಸೇರಿದಂತೆ ಐದು ಬಣ್ಣಗಳ ಆಯ್ಕೆಯಲ್ಲಿ ಲಭ್ಯ.

Best Mobiles in India

English summary
Samsung Galaxy S20 FE Gets the Biggest Price Cut: Details Here.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X