Home
ಸುದ್ದಿಜಾಲ

Samsung ನ ಈ ವಿಶೇಷ ಸ್ಮಾರ್ಟ್‌ಫೋನ್‌ಗೆ ಅಮೆಜಾನ್‌ನಲ್ಲಿ 60% ರಿಯಾಯಿತಿ!

ಸ್ಯಾಮ್‌ಸಂಗ್ ಕಂಪನಿ ಈಗಾಗಲೇ ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ ಸರಣಿಯನ್ನು ಲಾಂಚ್‌ ಮಾಡಿಕೊಂಡು ಬಂದಿದೆ. ಅದರಲ್ಲೂ ಗ್ಯಾಲಕ್ಸಿ S ಸರಣಿಯಲ್ಲಿ ಪರಿಚಯಿಸಿರುವ ಹಲವು ಫೋನ್‌ಗಳಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್ ವಿಶೇಷವಾದ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ನಡುವೆ ಈ ಫೋನ್‌ಗೆ ಬರೋಬ್ಬರಿ 60% ಡಿಸ್ಕೌಂಟ್‌ ಘೋಷಣೆ ಮಾಡಲಾಗಿದೆ.

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್‌ನ ಯಾವುದೇ ಫೋನ್‌ಗಳಿಗೂ ಸಹ ಭಾರೀ ಬೇಡಿಕೆ ಇದೆಯಾದರೂ ಕೆಲವು ಫೋನ್‌ಗಳು ತಮ್ಮ ವಿಶೇಷ ಫೀಚರ್ಸ್‌ ಮೂಲಕ ಹೆಚ್ಚು ಗಮನಸೆಳೆದಿವೆ. ಈ ಸಾಲಿಗೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್(Samsung Galaxy S20 FE 5G)ಸಹ ಒಂದಾಗಿದೆ. ಈ ಫೋನ್ ಕ್ವಾಲ್ಕಾಮ್ ಸ್ನ್ಯಾಪ್ ಡ್ರ್ಯಾಗನ್ 865ಪ್ರೊಸೆಸರ್ ಬಲ ಹೊಂದಿದೆ. ಹಾಗಿದ್ರೆ, ಈ ಫೋನ್‌ನ ಪ್ರಮುಖ ಫೀಚರ್ಸ್‌ ಹಾಗೂ ಡಿಸ್ಕೌಂಟ್‌ ವಿವರ ತಿಳಿಯಲು ಈ ಲೇಖನ ಓದಿರಿ.

Samsung ನ ಈ ವಿಶೇಷ ಸ್ಮಾರ್ಟ್‌ಫೋನ್‌ಗೆ ಅಮೆಜಾನ್‌ನಲ್ಲಿ 60% ರಿಯಾಯಿತಿ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ವಿವರ: ಈ ಫೋನ್‌ ಅನ್ನು ಕೈಗೆಟಕುವ ದರದಲ್ಲಿ ಖರೀದಿ ಮಾಡುವ ಮುನ್ನ ಇದರ ಪ್ರಮುಖ ಫೀಚರ್ಸ್‌ ಕಡೆ ಕಣ್ಣಾಯಿಸೋಣ. ಅದರಂತೆ ಈ ಫೋನ್, 6.5 ಇಂಚಿನ ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದ್ದು, 405ppi ಪಿಕ್ಸೆಲ್ ಸಾಂದ್ರತೆಯೊಂದಿಗೆ ಅತ್ಯುತ್ತಮ ರೆಸಲ್ಯೂಶನ್ ಸಾಮರ್ಥ್ಯ ನೀಡುತ್ತದೆ. ಜೊತೆಗೆ 1080 x 2400 ಪಿಕ್ಸೆಲ್ ರೆಸಲ್ಯೂಶನ್ ಬೆಂಬಲ ಇದ್ದು, 120Hz ರಿಫ್ರೆಶ್‌ ರೇಟ್‌ ಆಯ್ಕೆಯೊಂದಿಗೆ ಆಕರ್ಷಕ ಎನಿಸಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ ಪ್ರೊಸೆಸರ್‌: ಈ ಫೋನ್ ಕ್ವಾಲ್ಕಾಮ್ ಸ್ನ್ಯಾಪ್ ಡ್ರ್ಯಾಗನ್ 865 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು ಆಕ್ಟಾ-ಕೋರ್ Kryo 585 ಸಿಂಗಲ್-ಕೋರ್, ಟ್ರೈ-ಕೋರ್ ಮತ್ತು ಕ್ವಾಡ್-ಕೋರ್ ಚಿಪ್‌ಸೆಟ್‌ನೊಂದಿಗೆ ಪ್ಯಾಕ್‌ ಆಗಿದೆ. ಜೊತೆಗೆ ಅಡ್ರಿನೊ 650 GPU ಬಲ ಹೊಂದಿದೆ. ಇನ್ನು 8GB RAM + 128 GB ಇಂಟರ್ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದ್ದು, 1 TB ವರೆಗೆ ವಿಸ್ತರಿಸಬಹುದಾಗಿದೆ.

Samsung ನ ಈ ವಿಶೇಷ ಸ್ಮಾರ್ಟ್‌ಫೋನ್‌ಗೆ ಅಮೆಜಾನ್‌ನಲ್ಲಿ 60% ರಿಯಾಯಿತಿ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S20 FE ಕ್ಯಾಮೆರಾ ರಚನೆ: ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಹೊಂದಿದ್ದು, ಅದರಲ್ಲಿ f/1.8ವೈಡ್-ಆಂಗಲ್ ಲೆನ್ಸ್‌ನೊಂದಿಗೆ 12 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾ, 8 ಮೆಗಾಪಿಕ್ಸೆಲ್‌ ಟೆಲಿಫೋಟೋ ಲೆನ್ಸ್ ಹಾಗೂ 12ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್-ಆಂಗಲ್ ಸೆನ್ಸರ್‌ ಆಯ್ಕೆ ಪಡೆದುಕೊಂಡಿದೆ. ಇದರೊಂದಿಗೆ ಸೆಲ್ಫಿ ಉದ್ದೇಶಕ್ಕೆ f/2.0 ಆಯ್ಕೆಯ 32 ಮೆಗಾಪಿಕ್ಸೆಲ್‌ ಕ್ಯಾಮೆರಾ ಇದೆ. ಈ ಸೆನ್ಸರ್‌ಗಳು 30x ಡಿಜಿಟಲ್ ಜೂಮ್ ಮತ್ತು ಗರಿಷ್ಠ ಆಪ್ಟಿಕಲ್ ಜೂಮ್ ಸಾಮರ್ಥ್ಯ ಹೊಂದಿವೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S20 FE ಬ್ಯಾಟರಿ ಹಾಗೂ ಇತರೆ: ಈ ಸ್ಮಾರ್ಟ್‌ಫೋನ್ 4500mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್‌ ಆಗಿದ್ದು, ಇದು 25W ಫಾಸ್ಟ್ ಚಾರ್ಜಿಂಗ್ ಮತ್ತು ವಾಯರ್‌ಲೆಸ್‌ ಚಾರ್ಜಿಂಗ್‌ಗೆ ಬೆಂಬಲ ನೀಡಲಿದೆ. ಇದರೊಂದಿಗೆ 4G VOLTE ವೈ-ಫೈ, ಬ್ಲೂಟೂತ್ V5.0, GPS, NFC, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಆಯ್ಕೆ ಪಡೆದುಕೊಂಡಿದ್ದು, ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ವಿಶೇಷವಾಗಿದೆ.

Samsung ನ ಈ ವಿಶೇಷ ಸ್ಮಾರ್ಟ್‌ಫೋನ್‌ಗೆ ಅಮೆಜಾನ್‌ನಲ್ಲಿ 60% ರಿಯಾಯಿತಿ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S20 FE ಆಫರ್‌ ವಿವರ: ಇದೀಗ ಈ ಫೋನ್‌ನ ಪ್ರಮುಖ ವಿಚಾರಕ್ಕೆ ಬರೋಣ. ಅದರಂತೆ ಈ ಫೋನ್ ಅನ್ನು ನೀವು ಕೇವಲ 29,999ರೂ.ಗಳಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಈ ಫೋನ್ ಸಾಮಾನ್ಯ ದರ 74,999ರೂ.ಗಳಾಗಿದ್ದು, ಈಗ ಪ್ರಮುಖ ಇ-ಕಾಮರ್ಸ್‌ ಸೈಟ್‌ ಆಗಿರುವ ಅಮೆಜಾನ್‌ನಲ್ಲಿ 60% ರಷ್ಟು ದೊಡ್ಡ ರಿಯಾಯಿತಿಯನ್ನು ಪಡೆದುಕೊಂಡಿದೆ. ಇದಿಷ್ಟು ಮಾತ್ರವಲ್ಲದೆ ವಿನಿಮಯ ಆಫರ್‌ ಸಹ ಲಭ್ಯವಿದ್ದು, ಇದರಲ್ಲಿ 23,050ರೂ.ವರೆಗೂ ಡಿಸ್ಕೌಂಟ್‌ ಪಡೆದುಕೊಳ್ಳಬಹುದು.

Best Mobiles in India

English summary
Samsung Galaxy S20 FE smartphone got huge discount up to 60% in amazon.This phone is powered by Qualcomm Snapdragon 865 processor.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+