ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಫೋನಿಗೆ ಈಗ ಭಾರಿ ಡಿಸ್ಕೌಂಟ್!
ಜನಪ್ರಿಯ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿಯು ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್ ಸರಣಿಯನ್ನು ಪರಿಚಯಿಸಿ ಗ್ರಾಹಕರನ್ನು ಆಕರ್ಷಿಸಿದೆ. ಸಂಸ್ಥೆಯು ಇತ್ತೀಚಿಗಷ್ಟೆ ನೂತನವಾಗಿ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದ್ದು, ಈ ಫೋನ್ ಫ್ಲ್ಯಾಗ್‌ಶಿಫ್ ಮಾದರಿಯ ಫೀಚರ್ಸ್‌ಗಳಿಂದ ಸ್ಮಾರ್ಟ್‌ಫೋನ್ ಪ್ರಿಯರ ಗಮನ ಸೆಳೆದಿತ್ತು. ಇದೀಗ ಈ ಸ್ಮಾರ್ಟ್‌ಫೋನ್ ಭಾರಿ ರಿಯಾಯಿತಿಯಿಂದ ಗ್ರಾಹಕರನ್ನು ಆಕರ್ಷಿಸಿದೆ.

ಹೌದು, ಸ್ಯಾಮ್‌ಸಂಗ್ ತನ್ನ ಗ್ಯಾಲಕ್ಸಿ S20FE ಸ್ಮಾರ್ಟ್‌ಫೋನ್ ಹಬ್ಬದ ವಿಶೇಷ ಸೇಲ್ ಪ್ರಯುಕ್ತ ದೇಶಿಯ ಮಾರುಕಟ್ಟೆಯಲ್ಲಿ ಈಗ ಡಿಸ್ಕೌಂಟ್ ದರದಲ್ಲಿ ಲಭ್ಯವಾಗಲಿದೆ. ಭಾರತದಲ್ಲಿ ಈ ಸ್ಮಾರ್ಟ್‌ಫೋನ್ 9000ರೂ. ಗಳ ಡಿಸ್ಕೌಂಟ್ ಬೆಲೆಯನ್ನು ಪಡೆದಿದೆ. ಇನ್ನು ಈ ಫೋನಿನ 128GB ಸ್ಟೋರೇಜ್‌ನ ಆರಂಭಿಕ ವೇರಿಯಂಟ್ ರಿಯಾಯಿತಿ ಬೆಲೆಯು 40,999ರೂ.ಗಳು ಆಗಿದೆ. ಹಾಗೆಯೇ 256GB ವೇರಿಯಂಟ್ ದರವು 44,999ರೂ.ಗಳು ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ ಆನ್‌ಲೈನ್ ಸ್ಟೋರ್ ಹಾಗೂ ಅಮೆಜಾನ್ ತಾಣಗಳಲ್ಲಿ ಲಭ್ಯ. ಈ ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿಶೇಷ
ಗ್ಯಾಲಕ್ಸಿ S20FE ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಫುಲ್-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 20: 9 ರಚನೆ ಅನುಪಾತವನ್ನು ಒಳಗೊಂಡಿರುವ ಸೂಪರ್ ಅಮೋಲೆಡ್ ಇನ್ಫಿನಿಟಿ-ಒ ಡಿಸ್‌ಪ್ಲೇ ಆಗಿದೆ. ಅಲ್ಲದೆ ಇದು 120Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ.

ಪ್ರೊಸೆಸರ್ ಬಲ
ಗ್ಯಾಲಕ್ಸಿ S20 FE 4G ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಎಕ್ಸಿನೋಸ್ 990 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 8GB RAM + 128GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು 1TB ವರೆಗೆ ವಿಸ್ತರಿಸಬಹುದಾಗಿದೆ

ಕ್ಯಾಮೆರಾ ಸೆನ್ಸಾರ್
ಗ್ಯಾಲಕ್ಸಿ S20FE ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ವೈಡ್-ಆಂಗಲ್ ಲೆನ್ಸ್ ಹೊಂದಿದ್ದು, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (ಒಐಎಸ್) ಮತ್ತು ಡ್ಯುಯಲ್ ಫೇಸ್ ಡಿಟೆಕ್ಷನ್ ಆಟೋಫೋಕಸ್ ಅನ್ನು ಬೆಂಬಲಿಸುತ್ತದೆ. ಎರಡನೇ ಕ್ಯಾಮೆರಾ 123 ಡಿಗ್ರಿ ಫೀಲ್ಡ್ ವ್ಯೂ ಜೊತೆಗೆ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್ ಅನ್ನು ಹೊಂದಿದೆ.ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಗ್ಯಾಲಕ್ಸಿ S20FE ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದು 15W ಫಾಸ್ಟ್ ಚಾರ್ಜಿಂಗ್ ಮತ್ತು ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ವಾಯರ್‌ಲೆಸ್ ಚಾರ್ಜಿಂಗ್-ಬೆಂಬಲಿತ ಡಿವೈಸ್‌ಗಳೊಂದಿಗೆ ಪವರ್ ಹಂಚಿಕೊಳ್ಳಲು ಸ್ಯಾಮ್‌ಸಂಗ್‌ನ ವಾಯರ್‌ಲೆಸ್ ಪವರ್‌ಶೇರ್ ಸಹ ಇದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE ವೈ-ಫೈ, ಬ್ಲೂಟೂತ್ V5.0, GPS, NFC, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಸಹ ಹೊಂದಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಹಾಲ್ ಸೆನ್ಸರ್ ಅನ್ನು ಹೊಂದಿದೆ. ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಒಳಗೊಂಡಿದೆ.


Click it and Unblock the Notifications








