Home
ಸುದ್ದಿಜಾಲ

ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ ಬಿಡುಗಡೆ!

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಸಂಸ್ಥೆ ಸ್ಯಾಮ್‌ಸಂಗ್‌ ಸಂಸ್ಥೆ ತನ್ನ ಬಹುನಿರೀಕ್ಷಿತ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಕಳೆದ ತಿಂಗಳು ಜಾಗತಿಕವಾಗಿ ಬಿಡುಗಡೆಯಾಗಿದ್ದ, ಈ ಸ್ಮಾರ್ಟ್‌ಫೋನ್‌ ಗ್ಯಾಲಕ್ಸಿ S20 ಫ್ಲ್ಯಾಗ್‌ಶಿಪ್‌ನ ಟೋನ್-ಡೌನ್ ರೂಪಾಂತರವಾಗಿ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಇನ್ನು ಗ್ಯಾಲಕ್ಸಿ S20 ಫ್ಯಾನ್ ಎಡಿಷನ್ ಎಂದೂ ಕರೆಯಲ್ಪಡುವ ಈ ಹೊಸ ಸ್ಮಾರ್ಟ್‌ಫೋನ್ ಗ್ಯಾಲಕ್ಸಿ S20 ಮತ್ತು ಗ್ಯಾಲಕ್ಸಿ ನೋಟ್ 20 ಸರಣಿಗಳಿಗೆ ಹೊಂದಿಕೆಯಾಗುವ ವಿನ್ಯಾಸವನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ವಾಯರ್‌ಲೆಸ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಸ್ಯಾಮ್‌ಸಂಗ್‌

ಹೌದು, ಸ್ಮಾರ್ಟ್‌ಫೋನ್‌ ದಿಗ್ಗಜ ಸ್ಯಾಮ್‌ಸಂಗ್‌ ತನ್ನ ಗ್ಯಾಲಕ್ಸಿ S20FE ಸ್ಮಾರ್ಟ್‌ಫೋನ್‌ ಅನ್ನು ಭಾರತದ ಮಾರುಕಟ್ಟೆಗೆ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ 120Hz ರಿಫ್ರೆಶ್ ರೇಟ್ ಒಳಗೊಂಡಿರುವ 6.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ ಆಕ್ಟಾ ಕೋರ್‌ ಎಕ್ಸಿನೋಸ್‌ 990 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇನ್ನು ಭಾರತದಲ್ಲಿ 8GB RAM + 128GB ಇಂಟರ್‌ ಸ್ಟೊರೇಜ್‌ ಸಾಮರ್ಥ್ಯದ ಸಿಂಗಲ್ ವೇರಿಯೆಂಟ್‌ ಆಯ್ಕೆಯಲ್ಲಿ ಬಿಡುಗಡೆಯಾಗಿದ್ದು, ಇದರ ಬೆಲೆ 49,999 ರೂ.ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ಇದು 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 20: 9 ರಚನೆ ಅನುಪಾತವನ್ನು ಒಳಗೊಂಡಿರುವ ಸೂಪರ್ ಅಮೋಲೆಡ್ ಇನ್ಫಿನಿಟಿ-ಒ ಡಿಸ್‌ಪ್ಲೇ ಆಗಿದೆ. ಅಲ್ಲದೆ ಇದು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ಗ್ಯಾಲಕ್ಸಿ S20 FE 4G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಎಕ್ಸಿನೋಸ್ 990 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 8GB RAM + 128GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು 1TB ವರೆಗೆ ವಿಸ್ತರಿಸಬಹುದಾಗಿದೆ

ಟ್ರಿಪಲ್ ರಿಯರ್ ಕ್ಯಾಮೆರಾ

ಟ್ರಿಪಲ್ ರಿಯರ್ ಕ್ಯಾಮೆರಾ

ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ವೈಡ್-ಆಂಗಲ್ ಲೆನ್ಸ್ ಹೊಂದಿದ್ದು, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (ಒಐಎಸ್) ಮತ್ತು ಡ್ಯುಯಲ್ ಫೇಸ್ ಡಿಟೆಕ್ಷನ್ ಆಟೋಫೋಕಸ್ ಅನ್ನು ಬೆಂಬಲಿಸುತ್ತದೆ. ಎರಡನೇ ಕ್ಯಾಮೆರಾ 123 ಡಿಗ್ರಿ ಫೀಲ್ಡ್ ವ್ಯೂ ಜೊತೆಗೆ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್‌ ಅನ್ನು ಹೊಂದಿದೆ.ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಗ್ಯಾಲಕ್ಸಿ S20FE ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 15W ಫಾಸ್ಟ್ ಚಾರ್ಜಿಂಗ್ ಮತ್ತು ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ವಾಯರ್‌ಲೆಸ್‌ ಚಾರ್ಜಿಂಗ್-ಬೆಂಬಲಿತ ಡಿವೈಸ್‌ಗಳೊಂದಿಗೆ ಪವರ್‌ ಹಂಚಿಕೊಳ್ಳಲು ಸ್ಯಾಮ್‌ಸಂಗ್‌ನ ವಾಯರ್‌ಲೆಸ್ ಪವರ್‌ಶೇರ್ ಸಹ ಇದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE ವೈ-ಫೈ, ಬ್ಲೂಟೂತ್ V5.0, GPS, NFC, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಸಹ ಹೊಂದಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಹಾಲ್ ಸೆನ್ಸರ್ ಅನ್ನು ಹೊಂದಿದೆ. ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ 8GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಸಿಂಗಲ್‌ ವೇರಿಯೆಂಟ್‌ ಬೆಲೆ 49,999 ರೂ. ಆಗಿದೆ. ಈ ಫೋನ್ ಕ್ಲೌಡ್ ರೆಡ್, ಕ್ಲೌಡ್ ಲ್ಯಾವೆಂಡರ್, ಕ್ಲೌಡ್ ಮಿಂಟ್, ಕ್ಲೌಡ್ ನೇವಿ ಮತ್ತು ಕ್ಲೌಡ್ ವೈಟ್ ಸೇರಿದಂತೆ ಐದು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇದು ಇದೇ ಅಕ್ಟೋಬರ್ 9 ರಿಂದ ಪ್ರಿ-ಆರ್ಡರ್‌ ಮಾಡುವುದಕ್ಕೆ ಅವಕಾಶವಿದ್ದು, ಇದು ಅಮೆಜಾನ್, ಸ್ಯಾಮ್ಸಂಗ್ ಇಂಡಿಯಾ ಆನ್‌ಲೈನ್ ಸ್ಟೋರ್ ಮೂಲಕ ಮಾರಾಟವಾಗಲಿದೆ. ಇನ್ನು ಅಮೆಜಾನ್ ಇಂಡಿಯಾ ಅಪ್ಲಿಕೇಶನ್‌ನ ಬ್ಯಾನರ್ ಪ್ರಕಾರ ಈ ಸ್ಮಾರ್ಟ್‌ಫೋನ್‌ ಅಕ್ಟೋಬರ್ 16 ರಿಂದ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ.

Best Mobiles in India

English summary
Samsung Galaxy S20 FE has been officially launched in India, and will be available to buy from October 16.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+