Home
ಸುದ್ದಿಜಾಲ

ಸ್ಯಾಮ್‌ಸಂಗ್‌ ಸಂಸ್ಥೆಯಿಂದ ಬಹುನಿರೀಕ್ಷಿತ ಗ್ಯಾಲಕ್ಸಿ S20FE ಸ್ಮಾರ್ಟ್‌ಫೋನ್‌ ಲಾಂಚ್‌!

ಸ್ಮಾರ್ಟ್‌ಫೋನ್‌ ದಿಗ್ಗಜ ಸ್ಯಾಮ್‌ಸಂಗ್‌ ಸಂಸ್ಥೆ ತನ್ನ ಬಹುನಿರೀಕ್ಷಿತ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದು ಗ್ಯಾಲಕ್ಸಿ S20 ಫ್ಲ್ಯಾಗ್‌ಶಿಪ್‌ನ ಟೋನ್-ಡೌನ್ ವೇರಿಯೆಂಟ್‌ ಆಯ್ಕೆಯ ಸ್ಮಾರ್ಟ್‌ಫೋನ್‌ ಇದಾಗಿದೆ. ಇನ್ನು ಗ್ಯಾಲಕ್ಸಿ S20 ಫ್ಯಾನ್ ಎಡಿಷನ್ ಎಂದೂ ಕರೆಯಲ್ಪಡುವ ಈ ಹೊಸ ಸ್ಮಾರ್ಟ್‌ಫೋನ್ ಗ್ಯಾಲಕ್ಸಿ S20 ಮತ್ತು ಗ್ಯಾಲಕ್ಸಿ ನೋಟ್ 20 ಸರಣಿಗಳಿಗೆ ಹೊಂದಿಕೆಯಾಗುವ ವಿನ್ಯಾಸವನ್ನು ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಮತ್ತು ಪಂಚ್-ಹೋಲ್‌ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S20FE

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ S20FE ಸ್ಮಾರ್ಟ್‌ಫೋನ್‌ ಅಂತಿಮವಾಗಿ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ 120Hz ರಿಫ್ರೆಶ್ ರೇಟ್ ಅನ್ನು ಸಹ ನೀಡಿದೆ. ಜೊತೆಗೆ ಆಕ್ಟಾ ಕೋರ್‌ ಎಕ್ಸಿನೋಸ್‌ 990 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದಲ್ಲದೆ, ಸ್ಯಾಮ್‌ಸಂಗ್ ಗ್ಯಾಲಕ್ಸಿ S20FE ಸ್ಮಾರ್ಟ್‌ಫೋನ್‌ 4G ಮತ್ತು 5G ಎರಡೂ ಆವೃತ್ತಿಗಳಲ್ಲಿಯೂ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಇದು 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 20: 9 ರಚನೆ ಅನುಪಾತವನ್ನು ಒಳಗೊಂಡಿರುವ ಸೂಪರ್ ಅಮೋಲೆಡ್ ಇನ್ಫಿನಿಟಿ-ಒ ಡಿಸ್‌ಪ್ಲೇ ಹೊಂದಿದೆ. ಅಲ್ಲದೆ ಇದು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ. ಡಿಸ್‌ಪ್ಲೇಯ ಪಿಕ್ಸೆಲ್ ಸಾಂದ್ರತೆ 407 PPI ಹೊಂದಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ಗ್ಯಾಲಕ್ಸಿ S20 FE 4G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಎಕ್ಸಿನೋಸ್ 990 SoC ಪ್ರೊಸೆಸರ್‌ ಹೊಂದಿದೆ. ಆದರೆ 5G ಆಯ್ಕೆಯ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 8GB RAM + 128GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ವಿಶೇಷತೆ

ಕ್ಯಾಮೆರಾ ವಿಶೇಷತೆ

ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ವೈಡ್-ಆಂಗಲ್ ಲೆನ್ಸ್ ಹೊಂದಿದೆ ಮತ್ತು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (ಒಐಎಸ್) ಮತ್ತು ಡ್ಯುಯಲ್ ಫೇಸ್ ಡಿಟೆಕ್ಷನ್ ಆಟೋಫೋಕಸ್ ಅನ್ನು ಬೆಂಬಲಿಸುತ್ತದೆ. ಎರಡನೇ ಕ್ಯಾಮೆರಾ 123 ಡಿಗ್ರಿ ಫೀಲ್ಡ್ ವ್ಯೂ ಜೊತೆಗೆ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್‌ ಅನ್ನು ಹೊಂದಿದೆ.ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಗ್ಯಾಲಕ್ಸಿ S20FE ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 15W ಫಾಸ್ಟ್ ಚಾರ್ಜಿಂಗ್ ಮತ್ತು ವೈರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ವಾಯರ್‌ಲೆಸ್‌ ಚಾರ್ಜಿಂಗ್-ಬೆಂಬಲಿತ ಡಿವೈಸ್‌ಗಳೊಂದಿಗೆ ಪವರ್‌ ಹಂಚಿಕೊಳ್ಳಲು ಸ್ಯಾಮ್‌ಸಂಗ್‌ನ ವಾಯರ್‌ಲೆಸ್ ಪವರ್‌ಶೇರ್ ಸಹ ಇದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್ V5.0, GPS, NFC, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಸಹ ಹೊಂದಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಹಾಲ್ ಸೆನ್ಸರ್ ಅನ್ನು ಹೊಂದಿದೆ. ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

5G ಮಾದರಿಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ S20FE ಬೆಲೆ $699 ರಿಂದ (ಸುಮಾರು ರೂ. 51,400) ಪ್ರಾರಂಭವಾಗಲಿದೆ. 4G ಮಾದರಿಯ ಬೆಲೆಯ ಬಗ್ಗೆ ಈಗ ಯಾವುದೇ ಮಾಹಿತಿ ಲಭ್ಯವಾಗಿಲ್ಲ.ಇನ್ನು ಈ ಸ್ಮಾರ್ಟ್‌ಫೋನ್‌ ಕ್ಲೌಡ್ ರೆಡ್, ಕ್ಲೌಡ್ ಆರೆಂಜ್, ಕ್ಲೌಡ್ ಲ್ಯಾವೆಂಡರ್, ಕ್ಲೌಡ್ ಮಿಂಟ್, ಕ್ಲೌಡ್ ನೇವಿ ಮತ್ತು ಕ್ಲೌಡ್ ವೈಟ್ ಎಂಬ ಆರು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇದಲ್ಲದೆ, ಇದು ಆಯ್ದ ಮಾರುಕಟ್ಟೆಗಳಲ್ಲಿ ಅಕ್ಟೋಬರ್ 2 ರಿಂದ ಮಾರಾಟವಾಗಲಿದೆ.

Best Mobiles in India

English summary
Samsung Galaxy S20 FE 5G price starts at $699 (roughly Rs. 51,400). There is no word on the price of the 4G model.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+