Home
ಸುದ್ದಿಜಾಲ

ಸ್ಯಾಮ್‌ಸಂಗ್ 'ಗ್ಯಾಲಕ್ಸಿ ಎಸ್‌20' ಸರಣಿ ಬಿಡುಗಡೆ!..ಬೆಲೆ ಎಷ್ಟು? ಫೀಚರ್ಸ್‌ ಏನು?

ಜನಪ್ರಿಯ ಸ್ಯಾಮ್‌ಸಂಗ್ ಸಂಸ್ಥೆಯು ಈಗಾಗಲೇ ಗ್ಯಾಲಕ್ಸಿ S ಸರಣಿಯಲ್ಲಿ ಹಲವು ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಮೆಚ್ಚುಗೆ ಗಳಿಸಿದೆ. ಅದರ ಮುಂದುವರಿದ ಭಾಗವಾಗಿ ಇದೀಗ ತನ್ನ ಗ್ಯಾಲಕ್ಸಿ S ಸರಣಿಯಲ್ಲಿ ಗ್ಯಾಲಕ್ಸಿ S20, ಗ್ಯಾಲಕ್ಸಿ S20 ಪ್ಲಸ್ ಮತ್ತು ಗ್ಯಾಲಕ್ಸಿ S20 ಅಲ್ಟ್ರಾ ಹೆಸರಿನ ಮೂರು ಫ್ಲ್ಯಾಗ್‌ಶಿಫ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಜೊತೆಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ ಬಡ್ಸ್‌ ಪ್ಲಸ್‌ ಸಹ ಲಾಂಚ್ ಮಾಡಿದೆ. ಇವು ಸಂಪೂರ್ಣ ಹೈ ಎಂಡ್‌ ಫೀಚರ್ಸ್‌ಗಳನ್ನು ಒಳಗೊಂಡಿದ್ದು, ಮೊಬೈಲ್ ಮಾರುಕಟ್ಟೆಯಲ್ಲಿ ಹೊಸ ಅಲೆ ಎಬ್ಬಿಸಲಿವೆ.

ಗ್ಯಾಲಕ್ಸಿ ಅನ್‌ಪ್ಯಾಕ್ಡ್ 2020

ಹೌದು, ಸ್ಯಾಮ್‌ಸಂಗ್ ಕಂಪನಿಯು ಸ್ಯಾನ್ ಫ್ರಾನ್ಸಿಸ್ಕೊ, ಕ್ಯಾಲಿಫೋರ್ನಿಯಾದಲ್ಲಿ ನಡೆದ 'ಗ್ಯಾಲಕ್ಸಿ ಅನ್‌ಪ್ಯಾಕ್ಡ್ 2020' ಕಾರ್ಯಕ್ರಮದಲ್ಲಿ ಸಂಸ್ಥೆಯು ಗ್ಯಾಲಕ್ಸಿ S20, ಗ್ಯಾಲಕ್ಸಿ S20 ಪ್ಲಸ್ ಮತ್ತು ಗ್ಯಾಲಕ್ಸಿ S20 ಅಲ್ಟ್ರಾ ಸ್ಮಾರ್ಟ್‌ಫೋನ್‌ಗಳನ್ನು ಅನ್ನು ಅಧಿಕೃತವಾಗಿ ಅನಾವರಣ ಮಾಡಿದೆ. ಈ ಮೂರು ಸ್ಮಾರ್ಟ್‌ಫೋನ್‌ಗಳು ತ್ರಿವಳಿ ಕ್ಯಾಮೆರಾ, ವೇಗದ ಆಕ್ಟಾ ಕೋರ್ ಪ್ರೊಸೆಸರ್, ದೀರ್ಘ ಬ್ಯಾಟರಿ ಫೀಚರ್ಸ್‌ ಪಡೆದಿವೆ. ಅವುಗಳಲ್ಲಿ ಗ್ಯಾಲಕ್ಸಿ S20 ಅಲ್ಟ್ರಾ ಸ್ಮಾರ್ಟ್‌ಫೋನ್ 108ಎಂಪಿ ಸೆನ್ಸಾರ್ ಪಡೆದಿರುವುದು ಪ್ರಮುಖ ಅಟ್ರ್ಯಾಕ್ಷನ್ ಆಗಿದೆ.

ಫ್ಲ್ಯಾಗ್‌ಶಿಫ್ ಸ್ಮಾರ್ಟ್‌ಫೋನ್‌

ಹಾಗೆಯೇ ಈ ಮೂರು ಫ್ಲ್ಯಾಗ್‌ಶಿಫ್ ಸ್ಮಾರ್ಟ್‌ಫೋನ್‌ಗಳು ಆಂಡ್ರಾಯ್ಡ್ 10 ಓಎಸ್‌ ಸಾಮರ್ಥ್ಯವನ್ನು ಪಡೆದಿವೆ. ಭಿನ್ನ ಸ್ಟೋರೇಜ್ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದ್ದು, ಪೂರ್ಣ ಹೈ ಎಂಡ್ ಕ್ಯಾಮೆರಾ ರೆಸಲ್ಯೂಶನ್ ಹೊಂದಿವೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ S20, ಗ್ಯಾಲಕ್ಸಿ S20 ಪ್ಲಸ್ ಮತ್ತು ಗ್ಯಾಲಕ್ಸಿ S20 ಅಲ್ಟ್ರಾ ಫೋನ್‌ಗಳ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S20

ಸ್ಯಾಮ್‌ಸಂಗ್ ಗ್ಯಾಲಕ್ಸಿ S20

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 20 ಫೋನ್ 6.2 ಇಂಚಿನ ಇನ್ಫಿನಿಟಿ-O ಡೈನಾಮಿಕ್ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇ ಪಿಕ್ಸಲ್ ರೆಸಲ್ಯೂಶನ್ 1,440x3,200 ಆಗಿದೆ. ಡಿಸ್‌ಪ್ಲೇಯು HDR10 + ಹೊಂದಿದ್ದು, 120Hz ನ ರಿಫ್ರೆಶ್ ರೇಟ್ ಪಡೆದಿದೆ. ಇನ್ನು ಈ ಫೋನ್ 8GB / 12GB RAM ಮತ್ತು 128GB ಆಯ್ಕೆಯ ವೇರಿಯಂಟ್ ಇದೆ. 5G ವೇರಿಯಂಟ್ ಸಹ ಇರಲಿದೆ. ವಾಯರ್‌ಲೆಸ್‌ ಫಾಸ್ಟ್‌ ಚಾರ್ಜಿಂಗ್ ಬೆಂಬಲಿತ 4,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದೆ.

ಇನ್ನು ಈ ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ ಪಡೆದಿವೆ. ಉಳಿದೆರಡು ಕ್ಯಾಮೆರಾಗಳು 12ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿವೆ. ಸೆಲ್ಫಿ ಕ್ಯಾಮೆರಾವು 10ಎಂಪಿ ಸೆನ್ಸಾರ್‌ನಲ್ಲಿದೆ. ಇನ್ನು ಈ ಫೋನಿನ ಆರಂಭಿಕ ಬೆಲೆಯು $999 (ಭಾರತದಲ್ಲಿ ಅಂದಾಜು 72,000ರೂ.)

ಸ್ಯಾಮ್‌ಸಂಗ್ ಗ್ಯಾಲಕ್ಸಿ S20 ಪ್ಲಸ್

ಸ್ಯಾಮ್‌ಸಂಗ್ ಗ್ಯಾಲಕ್ಸಿ S20 ಪ್ಲಸ್

ಸ್ಯಾಮ್‌ಸಂಗ್ ಗ್ಯಾಲಕ್ಸಿ S20 ಪ್ಲಸ್ ಫೋನ್ 1,440x3,200 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.7 ಇಂಚಿನ ಡೈನಾಮಿಕ್ AMOLED ಫುಲ್‌ ಹೆಚ್‌ಡಿ ಪ್ಲಸ್‌ ಹೊಂದಿದೆ. ಈ ಫೋನ್ 8GB RAM ಮತ್ತು 128GB ಹಾಗೂ 12GB RAM+128GB/256GB/512GB ಸ್ಟೋರೇಜ್ ಸಾಮರ್ಥ್ಯ ಪಡೆದಿದೆ. ಹಾಗೆಯೇ 4,500mAh ಬ್ಯಾಟರಿ ಲೈಫ್ ಪಡೆದಿದ್ದು, ವೇಗದ ಚಾರ್ಜಿಂಗ್ ಸೌಲಭ್ಯ ಹೊಂದಿದೆ.

ಇನ್ನು ಈ ಫೋನ್ ಸಹ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ ಪಡೆದಿವೆ. ಉಳಿದೆರಡು ಕ್ಯಾಮೆರಾಗಳು 12ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿವೆ. ಸೆಲ್ಫಿ ಕ್ಯಾಮೆರಾವು 10ಎಂಪಿ ಸೆನ್ಸಾರ್‌ನಲ್ಲಿದೆ. ಇನ್ನು ಈ ಫೋನಿನ ಆರಂಭಿಕ ಬೆಲೆಯು $1,199 (ಭಾರತದಲ್ಲಿ ಅಂದಾಜು 85,500ರೂ)

ಸ್ಯಾಮ್‌ಸಂಗ್ ಗ್ಯಾಲಕ್ಸಿ S20 ಅಲ್ಟ್ರಾ

ಸ್ಯಾಮ್‌ಸಂಗ್ ಗ್ಯಾಲಕ್ಸಿ S20 ಅಲ್ಟ್ರಾ

ಸ್ಯಾಮ್‌ಸಂಗ್ ಗ್ಯಾಲಕ್ಸಿ S20 ಅಲ್ಟ್ರಾ ಫೋನ್ 1440x3200 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.90 ಇಂಚಿನ ಡೈನಾಮಿಕ್ AMOLED ಫುಲ್‌ ಹೆಚ್‌ಡಿ ಪ್ಲಸ್‌ ಹೊಂದಿದೆ. ಈ ಫೋನ್ 12GB/16GB RAM ಮತ್ತು 128GB, 256GB ಮತ್ತು 512GB ಸ್ಟೋರೇಜ್ ಸಾಮರ್ಥ್ಯ ಆಯ್ಕೆಯ ಪಡೆದಿದೆ. ಹಾಗೆಯೇ 5000mAh ಬ್ಯಾಟರಿ ಸಾಮರ್ಥ್ಯ ಪಡೆದಿದ್ದು, 45W ಸಾಮರ್ಥ್ಯದ ವೇಗದ ಚಾರ್ಜಿಂಗ್ ಸೌಲಭ್ಯ ಹೊಂದಿದೆ.

ಗ್ಯಾಲಕ್ಸಿ S20 ಅಲ್ಟ್ರಾ ಫೋನ್ ಸಹ ಹಿಂಬದಿ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 108ಎಂಪಿ ಸೆನ್ಸಾರ್ ಪಡೆದಿವೆ. ಸೆಕೆಂಡರಿ ಕ್ಯಾಮೆರಾ ಕ್ರಮವಾಗಿ 48ಎಂಪಿ, ತೃತೀಯ ಕ್ಯಾಮೆರಾ 12ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿವೆ. ಸೆಲ್ಫಿ ಕ್ಯಾಮೆರಾವು 40ಎಂಪಿ ಸೆನ್ಸಾರ್‌ನಲ್ಲಿದೆ. ಇನ್ನು ಈ ಫೋನಿನ ಆರಂಭಿಕ ಬೆಲೆಯು $1,399 (ಭಾರತದಲ್ಲಿ ಅಂದಾಜು 100,000ರೂ)

ಸ್ಯಾಮ್‌ಸಂಗ್ ಗ್ಯಾಲಕ್ಸಿ ಬಡ್ಸ್‌ ಪ್ಲಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ ಬಡ್ಸ್‌ ಪ್ಲಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ ಬಡ್ಸ್ ಪ್ಲಸ್‌ ಇಯರ್‌ಬಡ್‌ಗಳನ್ನು ಸುಲಭವಾಗಿ ಕನೆಕ್ಟ್ ಮಾಡಬಹುದಾಗಿದೆ. ಈ ಡಿವೈಸ್‌ಗಳು ಒಎಸ್‌ನೊಂದಿಗೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುತ್ತವೆ. ಇನ್ನು ಈ ಇಯರ್‌ಬಡ್‌ ಡಿವೈಸ್‌ಗಳು ವೈರ್‌ಲೆಸ್ ಚಾರ್ಜಿಂಗ್ ಬೆಂಬಲದೊಂದಿಗೆ ಪಡೆದುಕೊಂಡಿವೆ. ಗ್ಯಾಲಕ್ಸಿ ಬಡ್ಸ್ + ಒಂದೇ ಚಾರ್ಜ್‌ನಲ್ಲಿ ಸುಮಾರು 11 ಗಂಟೆಗಳವರೆಗೆ ಬಾಳಿಕೆ ಬರುತ್ತದೆ ಇರುತ್ತದೆ ಎನ್ನಲಾಗಿದೆ. ಇನ್ನು ಗ್ಯಾಲಕ್ಸಿ ಬಡ್ಸ್ + ಬೆಲೆಯು $149 (ಭಾರತದಲ್ಲಿ ಅಂದಾಜು 10,500ರೂ.) ಇದೇ ಫೆಬ್ರವರಿ 14 ರಿಂದ ಖರೀದಿಗೆ ಲಭ್ಯವಿರುತ್ತದೆ.

Best Mobiles in India

English summary
Samsung has officially unveiled its S series flagships for 2020 the Galaxy S20, Galaxy S20+ and Galaxy S20 Ultra.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+