ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು OMG ಅಂತೀರಾ!
ಜನಪ್ರಿಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣವು ಇದೀಗ 'ಬಿಗ್ ದೀಪಾವಳಿ ಸೇಲ್' (Big Diwali Sale) ಅನ್ನು ಆಯೋಜಿಸಿದ್ದು, ಆನ್‌ಲೈನ್ ಶಾಪಿಂಗ್ ಪ್ರಿಯರ ಗಮನ ಸೆಳೆದಿದೆ. ಇನ್ನು ಈ ಸೇಲ್‌ನಲ್ಲಿ ಆಪಲ್, ಸ್ಯಾಮ್‌ಸಂಗ್, ಶಿಯೋಮಿ ಹಾಗೂ ರೆಡ್ಮಿ ಸಂಸ್ಥೆಯ ಕೆಲವು ಸ್ಮಾರ್ಟ್‌ಫೋನ್‌ಗಳು ಗ್ರಾಹಕರು ತಿರುಗಿ ನೋಡುವಂತಹ ರಿಯಾಯಿತಿ ಪಡೆದಿವೆ. ಆ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S ಸರಣಿಯ ಸ್ಮಾರ್ಟ್‌ಫೋನ್‌ವೊಂದು ಜಬರ್ದಸ್ತ್ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡಿದೆ.

ಹೌದು, ಫ್ಲಿಪ್‌ಕಾರ್ಟ್ ಆಯೋಜಸಿರುವ 'ಬಿಗ್ ದೀಪಾವಳಿ ಸೇಲ್' (Big Diwali Sale) ಭಾರೀ ರಿಯಾಯಿತಿಯಲ್ಲಿ ನೂತನ ಫೋನ್ ಖರೀದಿ ಮಾಡುವ ಗ್ರಾಹಕರಿಗೆ ಅತ್ಯುತ್ತಮ ಎನಿಸಿದೆ. ಈ ಮಾರಾಟದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE (Samsung Galaxy S21 FE 5G) ಸ್ಮಾರ್ಟ್‌ಫೋನ್ ಬರೋಬ್ಬರಿ 19,000ರೂ. ಗಳ ರಿಯಾಯಿತಿ ಬೆಲೆಯಲ್ಲಿ ಲಭ್ಯವಿದೆ.

ಈ ವರ್ಷದ ಜನೆವರಿಯಲ್ಲಿ ಲಾಂಚ್ ಆಗಿರುವ ಈ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಫೋನ್ ಆರಂಭದಲ್ಲಿ 8GB RAM + 128GB ಸ್ಟೋರೇಜ್ ವೇರಿಯಂಟ್ ಮಾದರಿಯು 54,999 ರೂ. ಪ್ರೈಸ್ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿತ್ತು. ಈಗ ಬಿಗ್ ರಿಯಾಯಿತಿ ಪಡೆದಿದ್ದು, 35,999 ರೂ. ಗಳ ಆಫರ್ ಬೆಲೆಗೆ ಖರೀದಿಗೆ ಲಭ್ಯವಾಗಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ 2340 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4 ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಅಂಡರ್ ಡಿಸ್‌ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಪಡೆದುಕೊಂಡಿದೆ.

ಯಾವ ಪ್ರೊಸೆಸರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಒನ್ ಯುಐ 4.0 ಆಧಾರಿತ ಆಂಡ್ರಾಯ್ಡ್ 12 ಔಟ್ ಆಫ್ ದಿ ಬಾಕ್ಸ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 6GB ಮತ್ತು 128GB, 8GB ಮತ್ತು 128GB, ಹಾಗೂ 8GB ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಮೂರು ವೇರಿಯೆಂಟ್ ಆಯ್ಕೆಗಳನ್ನು ಪಡೆದುಕೊಂಡಿದೆ.

ಕ್ಯಾಮೆರಾ ಸೆನ್ಸಾರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12MP ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 12MP ಅಲ್ಟ್ರಾವೈಡ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 8MP 3x ಟೆಲಿಫೋಟೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 32MP ಫಿಕ್ಸೆಡ್ ಫೋಕಸ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಬಂಪ್ ಅನ್ನು ಮ್ಯಾಟ್-ಫಿನಿಶ್ ಬ್ಯಾಕ್ ಪ್ಯಾನೆಲ್‌ಗೆ ಸಂಯೋಜಿಸಲಾಗಿದೆ. ಫ್ಲ್ಯಾಶ್ ಮಾಡ್ಯೂಲ್ ಅನ್ನು ಕ್ಯಾಮರಾ ಲೈಟ್ ಹೊರಗೆ ಇರಿಸಲಾಗಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್‌ಗಳನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಹಲವಾರು ಶೂಟಿಂಗ್ ಮೋಡ್‌ಗಳನ್ನು ಸಹ ಹೊಂದಿದೆ. ಇದು ಮಲ್ಟಿ-ಕ್ಯಾಮೆರಾ ರೆಕಾರ್ಡಿಂಗ್ ಮೋಡ್ ಅನ್ನು ಒಳಗೊಂಡಿದೆ. ಇದರಿಂದ ಒಂದೇ ಸಮಯದಲ್ಲಿ ಸೆಲ್ಫಿ ಮತ್ತು ರಿಯರ್ ಕ್ಯಾಮೆರಾಗಳಿಂದ ವೀಡಿಯೊವನ್ನು ಸೆರೆಹಿಡಿಯಲು ನಿಮಗೆ ಅನುಮತಿಸುತ್ತದೆ.


Click it and Unblock the Notifications








