ಸ್ಯಾಮ್‌ಸಂಗ್‌ನ ಈ ಫೋನಿಗೆ ಲಭ್ಯ ಇರುವ ಆಫರ್ ತಿಳಿದ್ರೆ, ನೀವು OMG ಅಂತೀರಾ!
ಸ್ಯಾಮ್‌ಸಂಗ್ ಮೊಬೈಲ್ ಸಂಸ್ಥೆಯು ತನ್ನ S ಸರಣಿಯ ಫೋನ್‌ಗಳ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಸಖತ್ ಹವಾ ಕ್ರಿಯೆಟ್ ಮಾಡಿದೆ. ಆ ಪೈಕಿ ಸಂಸ್ಥೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಫೋನ್ ಸಹ ಒಂದಾಗಿದೆ. ಈ ಫೋನ್ ಸದ್ಯ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ನಲ್ಲಿ ಬೊಂಬಾಟ್ ರಿಯಾಯಿತಿ ಪ್ರೈಸ್ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ.
ಹೌದು, ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಮೊಬೈಲ್ ಶೇ. 42% ರಷ್ಟು ನೇರ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಫೋನಿನ 8 GB RAM + 128 GB ಸ್ಟೋರೇಜ್ ವೇರಿಯಂಟ್ 39,999ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದರೊಟ್ಟಿಗೆಇತರೆ ಆಯ್ದ ಬ್ಯಾಂಕ್ ಆಫರ್, ಎಕ್ಸ್‌ಚೇಂಜ್ ಕೊಡುಗೆ ಸಹ ಲಭ್ಯ.

ಸ್ಯಾಮ್‌ಸಂಗ್‌ನ ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಸೌಲಭ್ಯ ಪಡೆದಿದ್ದು, 4,500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 12 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಫೋನಿನ ಇತರ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE - ಫೀಚರ್ಸ್
ಸ್ಯಾಮ್‌ಸಂಗ್ ಸಂಸ್ಥೆಯ ಈ ಮೊಬೈಲ್ 2340 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4 ಇಂಚಿನ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗೆಯೇ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಸಪೋರ್ಟ್ ಮಾಡುತ್ತೆ. ಇದಲ್ಲದೆ ಅಂಡರ್ ಡಿಸ್‌ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಸಾಮರ್ಥ್ಯದ ಆವೃತ್ತಿ ಒಳಗೊಂಡಿದ್ದು, ಇತ್ತೀಚಿನ ಆಂಡ್ರಾಯ್ಡ್ ಓಎಸ್ ಸಪೋರ್ಟ್ ಕೂಡಾ ಹೊಂದಿದೆ. ಇದರ ಜೊತೆಗೆ 8GB ಮತ್ತು 256 GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆ ಕಾಣಬಹುದಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ ಮೂರು ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾ 12ಎಂಪಿ ಸೆನ್ಸಾರ್ ಸಾಮರ್ಥ್ಯ ಅನ್ನು ಹೊಂದಿದೆ. ಹಾಗೆಯೇ ದ್ವಿತೀಯ ಮತ್ತು ಮೂರನೇ ಕ್ಯಾಮೆರಾಗಳು ಸಹ 12ಎಂಪಿ ಸೆನ್ಸಾರ್ ಅನ್ನು ಪಡೆದಿದೆ. ಅಲ್ಲದೇ ಇದರ ಮುಂಭಾಗದಲ್ಲಿ 32ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿ ಸೆಲ್ಫಿ ಕ್ಯಾಮೆರಾ ಇದೆ.
ಸ್ಯಾಮ್‌ಸಂಗ್ ಕಂಪನಿಯ ಈ ಮೊಬೈಲ್ 4,500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದಿದ್ದು, ಇದಕ್ಕೆ ಪೂರಕವಾಗಿ 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಹಾಗೂ 15W ವೈರ್‌ಲೆಸ್ ಚಾರ್ಜಿಂಗ್ ಸಪೋರ್ಟ್ ಆಯ್ಕೆ ಒಳಗೊಂಡಿದೆ. ಇದರೊಂದಿಗೆ ಇದು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್‌ಗಳನ್ನು ಒಳಗೊಂಡಿದೆ.
ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಫೋನ್ 8 GB + 128 GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಅಂದಹಾಗೆ ಈ ಮೊಬೈಲ್ ಆಲಿವ್, ಗ್ರ್ಯಾಫೈಟ್, ಲ್ಯಾವೆಂಡರ್ ಮತ್ತು ನ್ಯೂ ನೇವಿ ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ. ಗ್ರಾಹಕರು ಫ್ಲಿಪ್‌ಕಾರ್ಟ್ ತಾಣದಲ್ಲಿ ಖರೀದಿ ಮಾಡಬಹುದು.


Click it and Unblock the Notifications








