Home
ಸುದ್ದಿಜಾಲ

ಸ್ಯಾಮ್‌ಸಂಗ್‌ನ ಈ ಫೋನಿನ ಆಫರ್‌ ತಿಳಿದ್ರೆ, ನೀವು OMG ಅನ್ನೋದು ಪಕ್ಕಾ!

ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್‌ ಸಂಸ್ಥೆಯು ತನ್ನ S ಸರಣಿಯಲ್ಲಿ ಹೈ ಎಂಡ್ ಮಾದರಿಯ ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ಸಂಸ್ಥೆಯ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಮೊಬೈಲ್‌ ಇದೀಗ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಜಬರ್ದಸ್ತ್‌ ರಿಯಾಯಿತಿ ಪಡೆದುಕೊಂಡಿದ್ದು, ಗ್ರಾಹಕರು OMG ಎನ್ನುವಂತೆ ಮಾಡಿದೆ.

ಹೌದು, ಜನಪ್ರಿಯ ಇ ಕಾಮರ್ಸ್‌ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಫೋನ್‌ ಶೇ. 52% ರಷ್ಟು ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. 8 GB RAM + 128 GB ವೇರಿಯಂಟ್‌ ಫೋನ್‌ 32,999ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿಸಲು ಅವಕಾಶ ಇದೆ. ಅದಲ್ಲದೇ ಫ್ಲಿಪ್‌ಕಾರ್ಟ್ನಲ್ಲಿ ಲಭ್ಯ ಇರುವ ಇತರೆ ಕೆಲವು ಬ್ಯಾಂಕ್ ಆಫರ್‌, ಎಕ್ಸ್‌ಚೇಂಜ್ ರಿಯಾಯಿತಿ ಪಡೆದುಕೊಂಡರೆ, ಮತ್ತಷ್ಟು ಕಡಿಮೆ ದರದಲ್ಲಿ ಖರೀದಿ ಮಾಡಬಹುದು.

ಸ್ಯಾಮ್‌ಸಂಗ್‌ನ ಈ ಫೋನಿನ ಆಫರ್‌ ತಿಳಿದ್ರೆ, ನೀವು OMG ಅನ್ನೋದು ಪಕ್ಕಾ!

ಇನ್ನು ಸ್ಯಾಮ್‌ಸಂಗ್‌ನ ಈ ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಪವರ್‌ ಒಳಗೊಂಡಿದ್ದು, 4,500 mAh ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದೆ. ಅಲ್ಲದೇ ಹಿಂಬದಿಯಲ್ಲಿ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಇದ್ದು, ಮೊದಲ ಕ್ಯಾಮೆರಾವು 12 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿ ಇದೆ. ಹಾಗಾದರೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಫೋನಿನ ಇತರ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಫೀಚರ್ಸ್‌ ಹೀಗಿವೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಫೋನ್‌ 2340 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.4 ಇಂಚಿನ AMOLED ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಹಾಗೆಯೇ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಸಪೋರ್ಟ್‌ ಮಾಡುತ್ತದೆ. ಇದಲ್ಲದೆ ಅಂಡರ್ ಡಿಸ್‌ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ನ ಈ ಫೋನಿನ ಆಫರ್‌ ತಿಳಿದ್ರೆ, ನೀವು OMG ಅನ್ನೋದು ಪಕ್ಕಾ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಸಾಮರ್ಥ್ಯದ ಪವರ್‌ ಅನ್ನು ಪಡೆದುಕೊಂಡಿದೆ. ಇತ್ತೀಚಿನ ಆಂಡ್ರಾಯ್ಡ್‌ ಓಎಸ್‌ ಸಪೋರ್ಟ್‌ ಸಹ ಒಳಗೊಂಡಿದೆ. ಇದರ ಜೊತೆಗೆ ಈ ಆವೃತ್ತಿಯು 8GB ಮತ್ತು 256 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆ ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಮೊಬೈಲ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾ 12ಎಂಪಿ ಸೆನ್ಸಾರ್‌ ಸಾಮರ್ಥ್ಯ ಅನ್ನು ಪಡೆದಿದೆ. ಹಾಗೆಯೇ ದ್ವಿತೀಯ ಮತ್ತು ತೃತೀಯ ಕ್ಯಾಮೆರಾಗಳು ಸಹ 12 ಎಂಪಿ ಸೆನ್ಸಾರ್‌ ಅನ್ನು ಪಡೆದಿದೆ. ಇದರೊಂದಿಗೆ ಇದು 32 ಎಂಪಿ ಸೆನ್ಸಾರ್‌ ಸಾಮರ್ಥ್ಯದಲ್ಲಿ ಸೆಲ್ಫಿ ಕ್ಯಾಮೆರಾ ಇದೆ.

ಸ್ಯಾಮ್‌ಸಂಗ್‌ನ ಈ ಫೋನಿನ ಆಫರ್‌ ತಿಳಿದ್ರೆ, ನೀವು OMG ಅನ್ನೋದು ಪಕ್ಕಾ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಮೊಬೈಲ್‌ 4,500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಕೂಡಾ ಹೊಂದಿದ್ದು, ಇದಕ್ಕೆ ಅನುಗುಣವಾಗಿ 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಹಾಗೂ 15W ವೈರ್‌ಲೆಸ್ ಚಾರ್ಜಿಂಗ್ ಸಪೋರ್ಟ್‌ ಆಯ್ಕೆ ಲಭ್ಯ. ಇದರೊಂದಿಗೆ ಇದು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ಗಳನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಮೊಬೈಲ್‌ 8 GB + 128 GB ಹಾಗೂ 8 GB RAM + 256 GB ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಇನ್ನು ಈ ಫೋನ್‌ ಆಲಿವ್, ಗ್ರ್ಯಾಫೈಟ್, ಲ್ಯಾವೆಂಡರ್ ಮತ್ತು ನ್ಯೂ ನೇವಿ ಬ್ಲೂ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Samsung Galaxy S21 FE 5G huge price drop in india. offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+