ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE 5G ಸ್ಮಾರ್ಟ್‌ಫೋನ್ ಎಂಟ್ರಿಗೆ ಮುಹೂರ್ತ ನಿಗದಿ!
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಇತ್ತೀಚಿಗಷ್ಟೆ ನೂತನವಾಗಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE 5G ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಈ ಫೋನ್ ಅನ್ನು ಭಾರತದಲ್ಲಿ ಇದೇ ಜನೆವರಿ 10 ರಂದು ಅಧಿಕೃತವಾಗಿ ಬಿಡುಗಡೆ ಮಾಡಲಿದೆ. ಗ್ಯಾಲಕ್ಸಿ S21 FE 5G ಸ್ಮಾರ್ಟ್‌ಫೋನ್ ಗ್ಯಾಲಕ್ಸಿ S20 FE 5G ಫೋನಿನ ಉತ್ತರಾಧಿಕಾರಿಯಾಗಿ ಮಾರುಕಟ್ಟೆಗೆ ಲಗ್ಗೆ ಇಡುತ್ತಿದೆ. ಈ ಫೋನ್ 120Hz AMOLED ಡಿಸ್‌ಪ್ಲೇ ಮತ್ತು ತ್ರಿವಳಿ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ಜನೆವರಿ 10 ರಂದು ತನ್ನ ಹೊಸ ಗ್ಯಾಲಕ್ಸಿ S21 FE 5G ಸ್ಮಾರ್ಟ್‌ಫೋನ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಲಾಂಚ್ ಮಾಡಲಿದೆ. ಈ ಫೋನ್ 6.4 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE 5G ಸ್ಮಾರ್ಟ್‌ಫೋನ್ 2340 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4 ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಅಂಡರ್ ಡಿಸ್‌ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್ ಬಲ ಯಾವುದು
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಒನ್ ಯುಐ 4.0 ಆಧಾರಿತ ಆಂಡ್ರಾಯ್ಡ್ 12 ಔಟ್ ಆಫ್ ದಿ ಬಾಕ್ಸ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 6GB ಮತ್ತು 128GB, 8GB ಮತ್ತು 128GB, ಹಾಗೂ 8GB ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಮೂರು ವೇರಿಯೆಂಟ್ ಆಯ್ಕೆಗಳನ್ನು ಪಡೆದುಕೊಂಡಿದೆ.

ತ್ರಿವಳಿ ಕ್ಯಾಮೆರಾ ಸೆನ್ಸಾರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12MP ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 12MP ಅಲ್ಟ್ರಾವೈಡ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 8MP 3x ಟೆಲಿಫೋಟೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 32MP ಫಿಕ್ಸೆಡ್ ಫೋಕಸ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಬಂಪ್ ಅನ್ನು ಮ್ಯಾಟ್-ಫಿನಿಶ್ ಬ್ಯಾಕ್ ಪ್ಯಾನೆಲ್‌ಗೆ ಸಂಯೋಜಿಸಲಾಗಿದೆ. ಫ್ಲ್ಯಾಶ್ ಮಾಡ್ಯೂಲ್ ಅನ್ನು ಕ್ಯಾಮರಾ ಲೈಟ್ ಹೊರಗೆ ಇರಿಸಲಾಗಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE 5G ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್‌ಗಳನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಹಲವಾರು ಶೂಟಿಂಗ್ ಮೋಡ್‌ಗಳನ್ನು ಸಹ ಹೊಂದಿದೆ. ಇದು ಮಲ್ಟಿ-ಕ್ಯಾಮೆರಾ ರೆಕಾರ್ಡಿಂಗ್ ಮೋಡ್ ಅನ್ನು ಒಳಗೊಂಡಿದೆ. ಇದರಿಂದ ಒಂದೇ ಸಮಯದಲ್ಲಿ ಸೆಲ್ಫಿ ಮತ್ತು ರಿಯರ್ ಕ್ಯಾಮೆರಾಗಳಿಂದ ವೀಡಿಯೊವನ್ನು ಸೆರೆಹಿಡಿಯಲು ನಿಮಗೆ ಅನುಮತಿಸುತ್ತದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE 5G ಸ್ಮಾರ್ಟ್‌ಫೋನ್ ಬೆಲೆ 52,000ರೂ. ನಿಂದ ಪ್ರಾರಂಭವಾಗಲಿದೆ ಎಂದು ವದಂತಿಗಳಿವೆ. ಅದಾಗ್ಯೂ, ಈ ಫೋನ್ 48,000ರೂ ಮತ್ತು ರೂ. 49,000 ನಡುವೆ ಲಭ್ಯ ಆಗಬಹುದು ಎಂದು ಊಹಿಸಲಾಗುತ್ತಿದೆ. ಆದರೆ ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE 5G ಫೋನಿನ ಬೆಲೆಯ ಬಗ್ಗೆ ಇನ್ನೂ ಅಧಿಕೃತವಾಗಿ ವಿವರಗಳನ್ನು ಘೋಷಿಸಬೇಕಾಗಿದೆ.


Click it and Unblock the Notifications








