Home
ಸುದ್ದಿಜಾಲ

ಸ್ಯಾಮ್‌ಸಂಗ್‌ನ ಈ ಹಳೆಯ ಜನಪ್ರಿಯ ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

ಮೊಬೈಲ್‌ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್ ಮೊಬೈಲ್‌ ಸಂಸ್ಥೆಯು ತನ್ನ S ಸರಣಿಯ ಫೋನ್‌ಗಳಿಗೆ ಡಿಮ್ಯಾಂಡ್‌ ಹೆಚ್ಚಿದೆ. ಆ ಪೈಕಿ ಸ್ಯಾಮ್‌ಸಂಗ್‌ ಸಂಸ್ಥೆಯ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE 5G ಫೋನ್‌ ಸಹ ಒಂದಾಗಿದ್ದು, ಈ ಹಳೆಯ ಮೊಬೈಲ್‌ ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ನಲ್ಲಿ ಸಖತ್‌ ಡಿಸ್ಕೌಂಟ್‌ ದರದಲ್ಲಿ ಖರೀದಿಗೆ ಲಭ್ಯ ಇದೆ.

ಹೌದು, ಇ ಕಾಮರ್ಸ್‌ ದೈತ್ಯ ವೆಬ್‌ಸೈಟ್‌ ಎನಿಸಿರುವ ಫ್ಲಿಪ್‌ಕಾರ್ಟ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಫೋನ್‌ ಬರೋಬ್ಬರಿ ಶೇ. 57% ರಷ್ಟು ನೇರ ರಿಯಾಯಿತಿ ಪಡೆದುಕೊಂಡಿದೆ. ಈ ಫೋನಿನ 8 GB RAM + 128 GB ಸ್ಟೋರೇಜ್‌ ವೇರಿಯಂಟ್‌ 29,999ರೂ. ಗಳ ಆಫರ್‌ ದರದಲ್ಲಿ ಖರೀದಿಗೆ ಲಭ್ಯ ಇದೆ. ಹಾಗೆಯೇ ಕೆಲವು ಆಯ್ದ ಬ್ಯಾಂಕ್‌ಗಳ ಆಫರ್‌, ವಿನಿಮಯ ಕೊಡುಗೆ ಪಡೆದರೆ, ಇನ್ನಷ್ಟು ರಿಯಾಯಿತಿ ದೊರೆಯಲಿದೆ.

ಸ್ಯಾಮ್‌ಸಂಗ್‌ನ ಈ ಹಳೆಯ ಜನಪ್ರಿಯ ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

ಅಂದಹಾಗೆ ಸ್ಯಾಮ್‌ಸಂಗ್‌ನ ಈ ದೈತ್ಯ ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಪವರ್‌ ಪಡೆದಿದೆ. ಅಲ್ಲದೇ ಇದು ತ್ರಿವಳಿ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 12 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದಂತೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಮೊಬೈಲ್‌ನ ಇತರ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE - ಫೀಚರ್ಸ್‌ ಹೀಗಿವೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಮೊಬೈಲ್‌ 2340 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಒಳಗೊಂಡ 6.4 ಇಂಚಿನ AMOLED ಡಿಸ್‌ಪ್ಲೇ ಸೌಲಭ್ಯವನ್ನು ಹೊಂದಿದೆ. ಹಾಗೆಯೇ ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್‌ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಅಂಡರ್ ಡಿಸ್‌ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಪಡೆದಿದೆ.

ಸ್ಯಾಮ್‌ಸಂಗ್‌ನ ಈ ಹಳೆಯ ಜನಪ್ರಿಯ ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಸಾಮರ್ಥ್ಯದ ಆವೃತ್ತಿ ಅನ್ನು ಪಡೆದುಕೊಂಡಿದ್ದು, ನೂತನ ಆಂಡ್ರಾಯ್ಡ್‌ ಓಎಸ್‌ ಸಪೋರ್ಟ್‌ನಲ್ಲಿ ಕೆಲಸ ಮಾಡುತ್ತದೆ. ಇದರ ಜೊತೆಗೆ ಈ ಫೋನ್‌ 8GB ಮತ್ತು 256 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಗಳು ಕೂಡಾ ಲಭ್ಯ ಇವೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಮೊಬೈಲ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದ್ದು, ಇದರ ಮೊದಲ ಕ್ಯಾಮೆರಾ 12 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯ ಅನ್ನು ಹೊಂದಿದೆ. ಹಾಗೆಯೇ ಎರಡನೇ ಮತ್ತು ತೃತೀಯ ಕ್ಯಾಮೆರಾಗಳು ಸಹ 12 ಮೆಗಾ ಪಿಕ್ಸಲ್‌ ಸೆನ್ಸಾರ್‌ ಅನ್ನು ಪಡೆದಿದೆ. ಅಲ್ಲದೇ ಇದರ ಮುಂಭಾಗದಲ್ಲಿ 32 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಮೊಬೈಲ್‌ 4,500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಹಾಗೂ 15W ವೈರ್‌ಲೆಸ್ ಚಾರ್ಜಿಂಗ್ ಸಪೋರ್ಟ್‌ ಆಯ್ಕೆ ಪಡೆದುಕೊಂಡಿದೆ. ಇದರೊಂದಿಗೆ ಇದು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ಗಳನ್ನು ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಫೋನ್‌ 8 GB + 128 GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆಯಲ್ಲಿ ದೊರೆಯಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ ಆಲಿವ್, ಗ್ರ್ಯಾಫೈಟ್, ಲ್ಯಾವೆಂಡರ್ ಮತ್ತು ನ್ಯೂ ನೇವಿ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ. ಆಸಕ್ತ ಖರೀದಿದಾರರು ಈ ಫೋನ್‌ ಅನ್ನು ಫ್ಲಿಪ್‌ಕಾರ್ಟ್‌ ತಾಣದಲ್ಲಿ ಖರೀದಿ ಮಾಡಬಹುದು.

Best Mobiles in India

English summary
Samsung Galaxy S21 FE 5G Price drop. Grab this phone at Rs 29,999 Offer price. Check Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+