ಹೊಸ ಫೋನ್‌ ಖರೀದಿಸುವ ಗ್ರಾಹಕರೇ, ತಡ ಮಾಡಿದ್ರೆ ಈ ಆಫರ್‌ ಮತ್ತೆ ಸಿಗಲ್ಲ!

|

ಜನಪ್ರಿಯ ಸ್ಯಾಮ್‌ಸಂಗ್ ಸಂಸ್ಥೆಯು ಬಜೆಟ್‌ ರೇಂಜ್‌ನಿಂದ ಹೈ ಎಂಡ್‌ ಮಾದರಿಯ ಫೋನ್‌ಗಳಿಂದಲೂ ಮಾರುಕಟ್ಟೆಯಲ್ಲಿ ಲೀಡಿಂಗ್‌ನಲ್ಲಿ ಕಾಣಿಸಿಕೊಂಡಿದೆ. ಆ ಪೈಕಿ ಗ್ಯಾಲಕ್ಸಿ S ಸರಣಿಯಲ್ಲಿನ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE (Samsung Galaxy S21 FE 5G) ಸ್ಮಾರ್ಟ್‌ಫೋನ್‌ ಈಗ ಭರ್ಜರಿ ಡಿಸ್ಕೌಂಟ್‌ ಪಡೆದಿದ್ದು, ಗ್ರಾಹಕರನ್ನು ಹಿಂತಿರುಗಿ ನೋಡುವಂತೆ ಮಾಡಿದೆ.

ಪ್ಲಾಟ್‌ಫಾರ್ಮ್

ಹೌದು, ಇ ಕಾಮರ್ಸ್‌ ದೈತ್ಯ ಅಮೆಜಾನ್‌ಪ್ಲಾಟ್‌ಫಾರ್ಮ್ ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್‌ ಬೆಲೆ ಇಳಿಕೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನ್ ಅಮೆಜಾನ್‌ನಲ್ಲಿ 33% ರಿಯಾಯಿತಿ ಪಡೆದಿದ್ದು, 74,999ರೂ. ಬೆಲೆಯ ಫೋನ್ 49,000ರೂ. ಗಳ ಬೆಲೆ ಪಡೆದಿದೆ. ಇನ್ನು ಈ ಫೋನಿಗೆ ಸುಮಾರು 25,000ರೂ. ವರೆಗೂ ಎಕ್ಸ್‌ಚೇಂಜ್ ಕೊಡುಗೆ (ನಿಮ್ಮ ಫೋನ್‌ ಸ್ಥಿತಿ ಆಧರಿಸಿ) ಸಿಗಲಿದೆ.

ಬ್ಯಾಂಕ್‌ಗಳಿಂದ

ಇದರೊಂದಿಗೆ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಲಭ್ಯವಿದ್ದು, ಹಾಗೆಯೇ ನೋ ಕಾಸ್ಟ್‌ ಇಎಮ್‌ಐ ಆಯ್ಕೆಗಳು ಸಹ ಖರೀದಿಸುವ ಗ್ರಾಹಕರಿಗೆ ದೊರೆಯಲಿವೆ. ಹಾಗಾದರೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಫೋನಿನ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್‌ 2340 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.4 ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಅಂಡರ್ ಡಿಸ್‌ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಪಡೆದುಕೊಂಡಿದೆ.

ಯಾವ ಪ್ರೊಸೆಸರ್‌

ಯಾವ ಪ್ರೊಸೆಸರ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಒನ್‌ ಯುಐ 4.0 ಆಧಾರಿತ ಆಂಡ್ರಾಯ್ಡ್‌ 12 ಔಟ್ ಆಫ್ ದಿ ಬಾಕ್ಸ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 6GB ಮತ್ತು 128GB, 8GB ಮತ್ತು 128GB, ಹಾಗೂ 8GB ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

ಕ್ಯಾಮೆರಾ ಸೆನ್ಸಾರ್

ಕ್ಯಾಮೆರಾ ಸೆನ್ಸಾರ್

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12MP ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 12MP ಅಲ್ಟ್ರಾವೈಡ್‌ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 8MP 3x ಟೆಲಿಫೋಟೋ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 32MP ಫಿಕ್ಸೆಡ್ ಫೋಕಸ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಬಂಪ್ ಅನ್ನು ಮ್ಯಾಟ್-ಫಿನಿಶ್ ಬ್ಯಾಕ್ ಪ್ಯಾನೆಲ್‌ಗೆ ಸಂಯೋಜಿಸಲಾಗಿದೆ. ಫ್ಲ್ಯಾಶ್ ಮಾಡ್ಯೂಲ್ ಅನ್ನು ಕ್ಯಾಮರಾ ಲೈಟ್‌ ಹೊರಗೆ ಇರಿಸಲಾಗಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯ

ಬ್ಯಾಟರಿ ಮತ್ತು ಇತರೆ ಸೌಲಭ್ಯ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ಗಳನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಹಲವಾರು ಶೂಟಿಂಗ್ ಮೋಡ್‌ಗಳನ್ನು ಸಹ ಹೊಂದಿದೆ. ಇದು ಮಲ್ಟಿ-ಕ್ಯಾಮೆರಾ ರೆಕಾರ್ಡಿಂಗ್ ಮೋಡ್ ಅನ್ನು ಒಳಗೊಂಡಿದೆ. ಇದರಿಂದ ಒಂದೇ ಸಮಯದಲ್ಲಿ ಸೆಲ್ಫಿ ಮತ್ತು ರಿಯರ್‌ ಕ್ಯಾಮೆರಾಗಳಿಂದ ವೀಡಿಯೊವನ್ನು ಸೆರೆಹಿಡಿಯಲು ನಿಮಗೆ ಅನುಮತಿಸುತ್ತದೆ.

Best Mobiles in India

English summary
Samsung Galaxy S21 FE 5G Receive Price Cut from Rs. 74,999 to Rs. 49,990.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X