ಸ್ಯಾಮ್‌ಸಂಗ್‌ನ ಈ ಫೋನ್ ಮೇಲೆ 53% ಡಿಸ್ಕೌಂಟ್ ಆಫರ್!..128GB ಸ್ಟೋರೇಜ್ ಆಯ್ಕೆ!
ಹೊಸ ವರ್ಷದ ಪ್ರಯುಕ್ತ ಹೊಸ ಮೊಬೈಲ್ ಖರೀದಿಸಬೇಕೆಂದುಕೊಂಡವರಿಗೆ ಸಿಹಿಸುದ್ದಿ ಸಿಕ್ಕಿದೆ. ಅದರಲ್ಲೂ ನೀವು ಸ್ಯಾಮ್‌ಸಂಗ್ ಪೋನ್ ಖರೀದಿಸುವುದಕ್ಕೆ ಬಯಸಿದರೆ ಇಲ್ಲಿದೆ ಬಿಗ್ ಆಫರ್. ಜನಪ್ರಿಯ ಇ-ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ತಾಣದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE 5G ಸ್ಮಾರ್ಟ್‌ಫೋನ್ ಬರೋಬ್ಬರಿ 53% ಡಿಸ್ಕೌಂಟ್ ಪಡೆದುಕೊಂಡಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ನಲ್ಲಿ 53% ಡಿಸ್ಕೌಂಟ್‌ನಲ್ಲಿ ಲಭ್ಯವಿದೆ. ಇದರಿಂದ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭಾರಿ ಇಳಿಕೆಯನ್ನು ಕಾಣಬಹುದಾಗಿದೆ. ಇನ್ನು ಸ್ಮಾರ್ಟ್‌ಫೋನ್ ಎಕ್ಸಿನೋಸ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನಲ್ಲಿ ಬರಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಡಿಸ್ಕೌಂಟ್ ನಂತರದ ಬೆಲೆ ಎಷ್ಟು? ಇದರ ಫೀಚರ್ಸ್ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್ಕೌಂಟ್ ಎಷ್ಟಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ತಾಣದಲ್ಲಿ 74,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಆದರೆ ಇದರ ಮೇಲೆ 53% ಡಿಸ್ಕೌಂಟ್ ನೀಡಲಾಗುತ್ತಿರುವುದರಿಂದ ಕೇವಲ 34,999ರೂ ಬೆಲೆಗೆ ಲಭ್ಯವಾಗುತ್ತಿದೆ. ಇದರಿಂದ ಪ್ರೀಮಿಯಂ ಫೀಚರ್ಸ್‌ಗಳನ್ನು ಒಳಗೊಂಡ ಸ್ಮಾರ್ಟ್‌ಫೋನ್ ಖರೀದಿಸುವವರಿಗೆ ಇದು ಬೆಸ್ಟ್ ಟೈಂ ಆಗಿದೆ. ಇದಲ್ಲದೆ ವಿವಿಧ ಬ್ಯಾಂಕ್ ಕಾರ್ಡ್‌ಗಳ ಮೂಲಕ ಈ ಫೋನ್ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಕೂಡ ದೊರೆಯಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಫೀಚರ್ಸ್ ಹೇಗಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ 6.4 ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 2340 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದ್ದು, 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಅಂಡರ್ ಡಿಸ್‌ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ ಎಕ್ಸಿನೋಟ್ ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಒನ್ ಯುಐ 4.0 ಆಧಾರಿತ ಆಂಡ್ರಾಯ್ಡ್ 12 ಔಟ್ ಆಫ್ ದಿ ಬಾಕ್ಸ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 6GB ಮತ್ತು 128GB, 8GB ಮತ್ತು 128GB, ಹಾಗೂ 8GB ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಮೂರು ವೇರಿಯೆಂಟ್ ಆಯ್ಕೆಗಳನ್ನು ಪಡೆದುಕೊಂಡಿದೆ. ಇದರಲ್ಲಿ 8GB ಮತ್ತು 128GB ಸ್ಟೋರೇಜ್ ಆಯ್ಕೆಗೆ ಈ ರಿಯಾಯಿತಿಯು ಅನ್ವಯವಾಗುತ್ತಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಕ್ಯಾಮೆರಾ ಸೆಟಪ್ ಏನಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12MP ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 12MP ಅಲ್ಟ್ರಾವೈಡ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 8MP 3x ಟೆಲಿಫೋಟೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 32MP ಫಿಕ್ಸೆಡ್ ಫೋಕಸ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್‌ಗಳನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಹಲವಾರು ಶೂಟಿಂಗ್ ಮೋಡ್‌ಗಳನ್ನು ಸಹ ಹೊಂದಿದೆ.


Click it and Unblock the Notifications








