ಸ್ಯಾಮ್‌ಸಂಗ್ ಗ್ರಾಹಕರಿಗೆ ಸಿಹಿಸುದ್ದಿ!..ಈ ಹೈ ಎಂಡ್ ಫೋನ್ ಬೆಲೆಯಲ್ಲಿ ಇಳಿಕೆ!
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸಂಸ್ಥೆ ಸ್ಯಾಮ್‌ಸಂಗ್ S ಸರಣಿಯಲ್ಲಿ ಹೈ ಎಂಡ್ ಮಾದರಿಯ ಫೋನ್‌ಗಳನ್ನು ಪರಿಚಯಿಸಿ ಮಾರುಕಟ್ಟೆಯಲ್ಲಿ ಈಗಾಗಲೇ ಅಬ್ಬರಿಸಿದೆ. ಅಂತಹ ಟಾಪ್ ಫೋನ್‌ಗಳ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಮೊಬೈಲ್ ಒಂದಾಗಿದ್ದು, ಆದರೆ ಈ ಫೋನ್ ಫ್ಲಿಪ್‌ಕಾರ್ಟ್ ತಾಣದಲ್ಲಿ ಬಲು ಆಕರ್ಷಕ ರಿಯಾಯಿತಿ ಪಡೆದುಕೊಂಡಿದೆ.
ಹೌದು, ಜನಪ್ರಿಯ ಇ ಕಾಮರ್ಸ್ ಫ್ಲಿಪ್‌ಕಾರ್ಟ್ ತಾಣದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಮೊಬೈಲ್ ಶೇ. 53% ರಷ್ಟು ನೇರ ಡಿಸ್ಕೌಂಟ್ ಪಡೆದುಕೊಂಡಿದೆ. 8 GB RAM + 256 GB ವೇರಿಯಂಟ್ ಫೋನ್ 34,999ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದರೊಟ್ಟಿಗೆ ಫ್ಲಿಪ್‌ಕಾರ್ಟ್ ತಾಣದಲ್ಲಿ ಲಭ್ಯ ಇರುವ ಇತರೆ ಆಯ್ದ ಬ್ಯಾಂಕ್ ಆಫರ್, ಎಕ್ಸ್‌ಚೇಂಜ್ ಕೊಡುಗೆ ಪಡೆದುಕೊಂಡರೆ, ಈ ಫೋನ್ ಇನ್ನಷ್ಟು ರಿಯಾಯಿತಿ ಬೆಲೆಯಲ್ಲಿ ಖರೀದಿ ಮಾಡಬಹುದು.

ಅಂದಹಾಗೆ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಪಡೆದುಕೊಂಡಿದೆ. ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 12 ಮೆಗಾ ಪಿಕ್ಸಲ್ ಸೆನ್ಸಾರ್ ಬಲದಲ್ಲಿ ಇದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಫೋನಿನ ಇತರ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಆಕರ್ಷಕ ಡಿಸ್‌ಪ್ಲೇ ಡಿಸೈನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಮೊಬೈಲ್ 2340 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4 ಇಂಚಿನ AMOLED ಡಿಸ್‌ಪ್ಲೇ ಅನ್ನು ಪಡೆದಿದೆ. ಹಾಗೆಯೇ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಅಂಡರ್ ಡಿಸ್‌ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಪಡೆದುಕೊಂಡಿದೆ.

ವೇಗದ ಪ್ರೊಸೆಸರ್ ಸಾಮರ್ಥ್ಯ ಇದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಸಾಮರ್ಥ್ಯದ ಆವೃತ್ತಿ ಪಡೆದುಕೊಂಡಿದೆ. ಇತ್ತೀಚಿನ ಆಂಡ್ರಾಯ್ಡ್ ಓಎಸ್ ಸಪೋರ್ಟ್ ಸಹ ಹೊಂದಿದೆ. ಇದರ ಜೊತೆಗೆ ಈ ಆವೃತ್ತಿಯು 8GB ಮತ್ತು 256 GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆ ಪಡೆದಿದೆ.

ಟ್ರಿಪಲ್ ಕ್ಯಾಮೆರಾ ಸೆನ್ಸಾರ್ ಸೌಲಭ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 12ಎಂಪಿ ಸೆನ್ಸಾರ್ ಸಾಮರ್ಥ್ಯ ಅನ್ನು ಹೊಂದಿದೆ. ಹಾಗೆಯೇ ದ್ವಿತೀಯ ಮತ್ತು ತೃತೀಯ ಕ್ಯಾಮೆರಾಗಳು ಸಹ 12ಎಂಪಿ ಸೆನ್ಸಾರ್ ಅನ್ನು ಪಡೆದಿದೆ. ಹಾಗೆಯೇ ಇದು 32ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿ ಸೆಲ್ಫಿ ಕ್ಯಾಮೆರಾ ಇದೆ.
ಬ್ಯಾಟರಿ ಮತ್ತು ಇತರೆ ಆಯ್ಕೆಗಳ ಮಾಹಿತಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಫೋನ್ 4,500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದಿದ್ದು, ಇದಕ್ಕೆ ಪೂರಕವಾಗಿ 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಹಾಗೂ 15W ವೈರ್‌ಲೆಸ್ ಚಾರ್ಜಿಂಗ್ ಸಪೋರ್ಟ್ ಆಯ್ಕೆ ಒಳಗೊಂಡಿದೆ. ಇದರೊಂದಿಗೆ ಇದು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್‌ಗಳನ್ನು ಒಳಗೊಂಡಿದೆ.
ಮೆಮೊರಿ ಮತ್ತು ಕಲರ್ ಆಯ್ಕೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಮೊಬೈಲ್ 8 GB + 128 GB ವೇರಿಯಂಟ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಆಲಿವ್, ಗ್ರ್ಯಾಫೈಟ್, ಲ್ಯಾವೆಂಡರ್ ಮತ್ತು ನ್ಯೂ ನೇವಿ ಬ್ಲೂ ಕಲರ್ ಆಯ್ಕೆಗಳನ್ನು ಪಡೆದಿದೆ.


Click it and Unblock the Notifications








