Just In
- 32 min ago
ChatGPT Effect: AI ಟೂಲ್ಸ್ ಬ್ಯಾನ್ ಮಾಡಲು ಮುಂದಾದ ಬೆಂಗಳೂರಿನ ಈ ಕಾಲೇಜುಗಳು!
- 16 hrs ago
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- 17 hrs ago
ತಿಮ್ಮಪ್ಪನ ಭಕ್ತರಿಗಾಗಿ ಹೊಸ ಆ್ಯಪ್ ಪರಿಚಯಿಸಿದ ಟಿಟಿಡಿ! ಏನೆಲ್ಲಾ ಸೇವೆಗಳು ಲಭ್ಯ!
- 18 hrs ago
ನೀವು ದಿನವೂ ಬಳಸುವ ಗೂಗಲ್ನ ಈ ಆಪ್ಗಳಲ್ಲಿ ಎಐ ಹೇಗೆ ಕೆಲಸ ಮಾಡಲಿದೆ!?; ಇಲ್ಲಿದೆ ವಿವರ
Don't Miss
- Automobiles
ಜನಪ್ರಿಯ ಮಾರುತಿ ಸೆಲೆರಿಯೊ ಕಾರಿನ ರೀಬ್ಯಾಡ್ಜ್ ಆದ ಟೊಯೊಟಾ Vitz ಅನಾವರಣ
- News
ಪ್ರಧಾನಿಯಾಗಿ ದೇವೇಗೌಡರು ಜನ ಮನ ಗೆಲ್ಲಲಿಲ್ಲ; ಡಿ.ಕೆ ಶಿವಕುಮಾರ್ ಹೇಳಿಕೆಗೆ ಜೆಡಿಎಸ್ ತಿರುಗೇಟು
- Finance
ಹಿಂಡನ್ಬರ್ಗ್ vs ಅದಾನಿ ನಡುವೆ ಎಲ್ಐಸಿ, ಎಸ್ಬಿಐ ಉಳಿತಾಯ ರಿಸ್ಕ್ನಲ್ಲಿದೆಯೇ?
- Movies
ಬಾಕ್ಸಾಫೀಸ್ನಲ್ಲಿ 'ಪಠಾಣ್' ಬಿರುಗಾಳಿ: ಮೂರೇ ದಿನಕ್ಕೆ ಹಲವು ದಾಖಲೆಗಳು ಉಡೀಸ್
- Sports
SA Vs Eng 1st ODI: ಚೇಸಿಂಗ್ನಲ್ಲಿ ಎಡವಿದ ಇಂಗ್ಲೆಂಡ್ : ದಕ್ಷಿಣ ಆಫ್ರಿಕಾಗೆ 27 ರನ್ಗಳ ಜಯ
- Lifestyle
2023ರಲ್ಲಿ ರಾಜಯೋಗದಿಂದಾಗಿ ಈ 4 ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನವಾಗಲಿದೆ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಫ್ಲಿಪ್‌ಕಾರ್ಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಫೋನ್‌ಗೆ ಭಾರೀ ರಿಯಾಯಿತಿ
ಜನಪ್ರಿಯ ಸ್ಯಾಮ್‌ಸಂಗ್ ಸಂಸ್ಥೆಯು ತನ್ನ ಗ್ಯಾಲಕ್ಸಿ S ಸರಣಿಯಲ್ಲಿ ಹಲವು ಹೈ ಎಂಡ್ ಫೋನ್‌ಗಳಲ್ಲಿ ಪರಿಚಯಿಸಿ ಗಮನ ಸೆಳೆದಿದೆ. ಆ ಪೈಕಿ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಆಕರ್ಷಕ ಎನಿಸಿದೆ. ಈ ಸ್ಮಾರ್ಟ್‌ಫೋನ್ ಇದೀಗ ಭರ್ಜರಿ ಬೆಲೆ ಇಳಿಕೆ ಕಂಡಿದ್ದು, ಸ್ಯಾಮ್‌ಸಂಗ್ ಮೊಬೈಲ್ ಪ್ರಿಯರು ಖುಷಿಯಾಗುವಂತೆ ಮಾಡಿದೆ.

ಹೌದು, ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE (8GB RAM + 128GB) ಸ್ಮಾರ್ಟ್‌ಫೋನ್ 53% ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, 34,999 ರೂ. ಪ್ರೈಸ್ ಟ್ಯಾಗ್ ಪಡೆದಿದೆ. ಇದರೊಂದಿಗೆ ಬ್ಯಾಂಕ್ ಆಫರ್ ಸೌಲಭ್ಯ ಇದ್ದು, ಜೊತೆಗೆ ಸುಮಾರು 20,000ರೂ. ಎಕ್ಸ್‌ಚೇಂಜ್ ಕೊಡುಗೆ (ಹಳೆಯ ಫೋನ್ ಕಾರ್ಯವೈಖರಿ ಸ್ಥಿತಿ ಆಧರಿಸಿ ವಿನಿಮಯ ಮೊತ್ತ ನಿಗದಿಪಡಿಸಲಾಗುತ್ತದೆ) ಸಹ ಲಭ್ಯವಾಗಲಿದೆ. ಹಾಗಾದರೆ, ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ 2340 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4 ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120 Hz ರಿಫ್ರೆಶ್ ರೇಟ್ ಮತ್ತು 240 Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಅಂಡರ್ ಡಿಸ್‌ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಪಡೆದುಕೊಂಡಿದೆ.
ಯಾವ ಪ್ರೊಸೆಸರ್ ಇದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಒನ್ ಯುಐ 4.0 ಆಧಾರಿತ ಆಂಡ್ರಾಯ್ಡ್ 12 ಔಟ್ ಆಫ್ ದಿ ಬಾಕ್ಸ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 6GB ಮತ್ತು 128 GB, 8GB ಮತ್ತು 128 GB, ಹಾಗೂ 8GB ಮತ್ತು 256 GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಮೂರು ವೇರಿಯೆಂಟ್ ಆಯ್ಕೆಗಳನ್ನು ಪಡೆದುಕೊಂಡಿದೆ.

ಕ್ಯಾಮೆರಾ ಸೆನ್ಸಾರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12MP ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 12MP ಅಲ್ಟ್ರಾವೈಡ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 8MP 3x ಟೆಲಿಫೋಟೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 32MP ಫಿಕ್ಸೆಡ್ ಫೋಕಸ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಬಂಪ್ ಅನ್ನು ಮ್ಯಾಟ್-ಫಿನಿಶ್ ಬ್ಯಾಕ್ ಪ್ಯಾನೆಲ್‌ಗೆ ಸಂಯೋಜಿಸಲಾಗಿದೆ. ಫ್ಲ್ಯಾಶ್ ಮಾಡ್ಯೂಲ್ ಅನ್ನು ಕ್ಯಾಮರಾ ಲೈಟ್ ಹೊರಗೆ ಇರಿಸಲಾಗಿದೆ.
ಬ್ಯಾಟರಿ ಮತ್ತು ಇತರೆ ಸೌಲಭ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್‌ಗಳನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಹಲವಾರು ಶೂಟಿಂಗ್ ಮೋಡ್‌ಗಳನ್ನು ಸಹ ಹೊಂದಿದೆ. ಇದು ಮಲ್ಟಿ-ಕ್ಯಾಮೆರಾ ರೆಕಾರ್ಡಿಂಗ್ ಮೋಡ್ ಅನ್ನು ಒಳಗೊಂಡಿದೆ. ಇದರಿಂದ ಒಂದೇ ಸಮಯದಲ್ಲಿ ಸೆಲ್ಫಿ ಮತ್ತು ರಿಯರ್ ಕ್ಯಾಮೆರಾಗಳಿಂದ ವೀಡಿಯೊವನ್ನು ಸೆರೆಹಿಡಿಯಲು ನಿಮಗೆ ಅನುಮತಿಸುತ್ತದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470