Just In
Don't Miss
- Movies
ಡ್ರಾಮಾ ಜ್ಯೂನಿಯರ್ಸ್ ವೇದಿಕೆಯಲ್ಲಿ 'ಪದ್ಮಶ್ರೀ' ಜೋಗತಿ ಮಂಜಮ್ಮ, ಮಕ್ಕಳ ಅಭಿನಯಕ್ಕೆ ಫಿದಾ
- Automobiles
2024ರ ವೇಳೆಗೆ ಫ್ಲೆಕ್ಸಿ ಇಂಧನ ವಾಹನಗಳನ್ನು ಅಭಿವೃದ್ಧಿಪಡಿಸಿಲು ಹೋಂಡಾ ನಿರ್ಧಾರ
- Education
IOCL Recruitment 2022 : 43 ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- News
ಮಳೆ ಅವಾಂತರ: ಬೆಂಗಳೂರಿನ 8 ವಲಯಗಳಿಗೆ ಸಚಿವರ ನೇತೃತ್ವದಲ್ಲಿ ಟಾಸ್ಕ್ಫೋರ್ಸ್
- Finance
ಎಸಿ ಬಳಸಿದರೂ ವಿದ್ಯುತ್ ಬಿಲ್ ಕಡಿತ ಮಾಡುವುದು ಹೇಗೆ?
- Sports
MI vs DC: ಆರ್ಸಿಬಿಯ ಭವಿಷ್ಯ ನಿರ್ಧರಿಸುವ ಪಂದ್ಯ: ಪ್ರಿವ್ಯೂ, ಪಿಚ್ ರಿಪೋರ್ಟ್, ಸಂಭಾವ್ಯ ಪ್ಲೇಯಿಂಗ್ XI
- Lifestyle
ಮಳೆಗಾಲದಲ್ಲಿ ಮಕ್ಕಳು ಕಾಯಿಲೆ ಬೀಳದಿರಲು ಈ ಆಹಾರ ನೀಡಿ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ S21 FE 5G ಸ್ಮಾರ್ಟ್ಫೋನ್ ಬೆಲೆ ಇಳಿಕೆ!
ಸ್ಯಾಮ್ಸಂಗ್ ಕಂಪೆನಿ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ತನ್ನ ವೈವಿಧ್ಯಮಯ ಸ್ಮಾರ್ಟ್ಫೋನ್ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್ಫೋನ್ಗಳನ್ನ ತನ್ನ ಗ್ಯಾಲಕ್ಸಿ ಎಂ, ಗ್ಯಾಲಕ್ಸಿ ಎ, ಗ್ಯಾಲಕ್ಸಿ ಎಸ್ ಹಾಗೂ ಎಫ್ ಸರಣಿಯಲ್ಲಿ ಪರಿಚಯಿಸಿ ಸೈ ಎನಿಸಿಕೊಂಡಿದೆ. ಇನ್ನು ಇತ್ತೀಚಿಗಷ್ಟೇ ಭಾರತದಲ್ಲಿ ತನ್ನ ಹೊಸ ಗ್ಯಾಲಕ್ಸಿ S21 FE 5G ಸ್ಮಾರ್ಟ್ಫೋನ್ ಅನ್ನು ಲಾಂಚ್ ಮಾಡಿತ್ತು. ಸದ್ಯ ಇದೀಗ ಈ ಸ್ಮಾರ್ಟ್ಫೋನ್ ಅಮೆಜಾನ್ ಇಂಡಿಯಾದಲ್ಲಿ ಬಿಗ್ ಡಿಸ್ಕೌಂಟ್ ಪಡೆದುಕೊಂಡಿದೆ. ಬಿಡುಗಡೆಯಾದ ಕೆಲವೇ ದಿನಗಳಲ್ಲಿ 5,000ರೂ.ಗಳಷ್ಟು ಬೆಲೆಯನ್ನು ಕಡಿತ ಗೊಳಿಸಿದೆ.

ಹೌದು, ಸ್ಯಾಮ್ಸಂಗ್ ಕಂಪೆನಿ ತನ್ನ ಹೊಸ ಸ್ಯಾಮ್ಸಂಗ್ ಗ್ಯಾಲಕ್ಸಿ S21 FE 5G ಫೋನ್ ಬೆಲೆಯನ್ನು ಕಡಿತಗೊಳಿಸಿದೆ. ಈ ಪ್ರೀಮಿಯಂ ಸ್ಮಾರ್ಟ್ಫೋನ್ ಅನ್ನು ಪ್ರಸ್ತುತ ಅಮೆಜಾನ್ನಲ್ಲಿ ನೀವು ಕೇವಲ 49,999ರೂ.ಗಳಿಗೆ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್ಫೋನ್ ಮೇಲೆ ಹೆಚ್ಚುವರಿ 10% ಬ್ಯಾಂಕ್ ಆಫರ್ ಹಾಗೂ ಎಕ್ಸಚೇಂಜ್ ಆಫರ್ ಕೂಡ ಲಭ್ಯವಿದೆ. ಹೀಗಾಗಿ ಈ ಸ್ಮಾರ್ಟ್ಫೋನ್ ಬೆಲೆಯಲ್ಲಿ ಇನ್ನಷ್ಟು ಡಿಸ್ಕೌಂಟ್ ಪಡೆಯಬಹುದಾಗಿದೆ.

ಅಮೆಜಾನ್ ಆಫರ್ ನಂತರ ಬೆಲೆ ಎಷ್ಟು?
ಸ್ಯಾಮ್ಸಂಗ್ ಗ್ಯಾಲಕ್ಸಿ S21 FE 5G ಸ್ಮಾರ್ಟ್ಫೋನ್ ಭಾರತದಲ್ಲಿ ಜನವರಿ 10ರಂದು ಬಿಡುಗಡೆ ಆಗಿತ್ತು. ಬಿಡುಗಡೆಯಾದಾಗ 8GB RAM + 128GB ಸ್ಟೋರೇಜ್ ಆಯ್ಕೆಯ ಬೆಲೆ 54,999ರೂ. ಆಗಿತ್ತು. ಸದ್ಯ ಈ ಸ್ಮಾರ್ಟ್ಫೋನ್ ಅಮೆಜಾನ್ನಲ್ಲಿ 49,999ರೂ.ಗಳಿಗೆ ಲಭ್ಯವಾಗುತ್ತಿದೆ. ಅಂದರೆ ಈ ಸ್ಮಾರ್ಟ್ಫೋನ್ ಮೇಲೆ ನಿಮಗೆ 5,000ರೂ.ಗಳಷ್ಟು ರಿಯಾಯಿತಿ ದೊರೆಯುತ್ತಿದೆ. ಇದಲ್ಲದೆ 58,999ರೂ.ಬೆಲೆ ಹೊಂದಿದ್ದು, 8GB RAM + 256GB ಸ್ಟೋರೇಜ್ ಮಾಡೆಲ್ ಇದೀಗ 53,999ರೂ.ಗಳಿಗೆ ಮಾರಾಟವಾಗುತ್ತಿದೆ. ಇನ್ನು ಅಮೆಜಾನ್ ಬ್ಯಾಂಕ್ ಆಫ್ ಬರೋಡಾ ಕ್ರೆಡಿಟ್ ಕಾರ್ಡ್ ಮತ್ತು ಅಮೆರಿಕನ್ ಎಕ್ಸ್ಪ್ರೆಸ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದವರಿಗೆ 10% ರಷ್ಟು ರಿಯಾಯಿತಿಯನ್ನು ನೀಡುತ್ತಿದೆ. ಪ್ರಸ್ತುತ, ಅಮೆಜಾನ್ ಯಾವುದೇ ವಿಶೇಷ ಸೇಲ್ ನಡೆಸುತ್ತಿಲ್ಲ. ಆದರಿಂದ ಈ ಆಫರ್ ಯಾವಾಗ ಕೊನೆಯಾಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಇನ್ನು ಈ ಹೊಸ ಸ್ಮಾರ್ಟ್ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್ಪ್ಲೇ ರಚನೆ ಮತ್ತು ವಿಶೇಷ
ಸ್ಯಾಮ್ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್ಫೋನ್ 2340×1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4-ಇಂಚಿನ AMOLED ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಅಂಡರ್ ಡಿಸ್ಪ್ಲೇ ಆಪ್ಟಿಕಲ್ ಫಿಂಗರ್ಪ್ರಿಂಟ್ ಸ್ಕ್ಯಾನರ್ ಅನ್ನು ಪಡೆದುಕೊಂಡಿದೆ. ಈ ಡಿಸ್ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಅನ್ನು ಪಡೆದಿದೆ.

ಪ್ರೊಸೆಸರ್ ಯಾವುದು?
ಸ್ಯಾಮ್ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್ಫೋನ್ 5nm Exynos 2100 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಇದು ಒನ್ ಯುಐ 4.0 ಆಧಾರಿತ ಆಂಡ್ರಾಯ್ಡ್ 12 ಔಟ್ ಆಫ್ ದಿ ಬಾಕ್ಸ್ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯವಿದೆ.

ಕ್ಯಾಮೆರಾ ಯಾವುದು?
ಇನ್ನು ಈ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12MP ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 12MP ಅಲ್ಟ್ರಾವೈಡ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 8MP 3x ಟೆಲಿಫೋಟೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 32MP ಫಿಕ್ಸೆಡ್ ಫೋಕಸ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಸ್ಯಾಮ್ಸಂಗ್ ಗ್ಯಾಲಕ್ಸಿ S21 FE 5G ಸ್ಮಾರ್ಟ್ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ಸೂಪರ್-ಫಾಸ್ಟ್ ವೈರ್ಡ್ ಫಾಸ್ಟ್ ಚಾರ್ಜಿಂಗ್, 15W ವೈರ್ಲೆಸ್ ಫಾಸ್ಟ್ ಚಾರ್ಜಿಂಗ್ ಮತ್ತು ರಿವರ್ಸ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್, GPS/ A-GPS, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಈ ಫೋನ್ ಅನ್ನುಬಿಗ್ ಸ್ಕ್ರೀನ್ಗೆ ಕನೆಕ್ಟ್ ಮಾಡುವ ವಾಯರ್ಲೆಸ್ ಡೆಕ್ಸ್ ಬೆಂಬಲ ಕೂಡ ಇದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999