ಸ್ಯಾಮ್‌ಸಂಗ್‌ನಿಂದ ಮತ್ತೊಂದು ದೈತ್ಯ ಫೋನ್ ಬರಲಿದೆ!..ಗ್ರಾಹಕರಿಗೆ ಕಾದಿದೆ ಶಾಕ್!

|

ಜನಪ್ರಿಯ ಸ್ಯಾಮ್‌ಸಂಗ್ ಮೊಬೈಲ್‌ ಕಂಪನಿಯ ಬಜೆಟ್‌, ಪ್ರೀಮಿಯಂ, ಮೀಡ್‌ರೇಂಜ್‌ ಹಾಗೂ ಹೈ ಎಂಡ್‌ ಮಾದರಿಯ ಸ್ಮಾರ್ಟ್‌ಫೋನ್‌ಗಳ ಆಯ್ಕೆ ಹೊಂದಿದೆ. ಬಹುತೇಕ ಸ್ಯಾಮ್‌ಸಂಗ್‌ನ ಎಲ್ಲ ಮಾಡೆಲ್‌ಗಳಲ್ಲಿ ಗ್ರಾಹಕರಿಂದ ಮೆಚ್ಚುಗೆ ಪಡೆದಿವೆ. ಆದರೆ ಹೈ ಎಂಡ್‌ ಫೀಚರ್ಸ್‌ಗಳ ಫೋನ್‌ಗಳು ಅತ್ಯುತ್ತಮ ಎನಿಸಿವೆ. ಕಂಪನಿಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿದ್ದ, ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್ ಹವಾ ತಗ್ಗುವ ಮುನ್ನವೇ ಕಂಪನಿಯು ಹೊಸದಾಗಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಫೋನ್ ಬಿಡುಗಡೆ ಮಾಡು ಸೂಚನೆ ಹೊರಹಾಕಿದೆ.

ಸ್ಯಾಮ್‌ಸಂಗ್‌ನಿಂದ ಮತ್ತೊಂದು ದೈತ್ಯ ಫೋನ್ ಬರಲಿದೆ!..ಗ್ರಾಹಕರಿಗೆ ಕಾದಿದೆ ಶಾಕ್!

ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನಿನ ಮುಂದುವರಿದ ಭಾಗವಾಗಿ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಲು ಸಜ್ಜಾಗಿದೆ. 2022ರ ಜನೆವರಿ ತಿಂಗಳಿನಲ್ಲಿನ CES 2022 ಕಾರ್ಯಕ್ರಮದಲ್ಲಿ ಅನಾವರಣಗೊಳಿಸುವ ನಿರೀಕ್ಷೆಯಿದೆ. ಈ ಫೋನ್ ದೈತ್ಯ ಫೀಚರ್ಸ್‌ಗಳನ್ನು ಒಳಗೊಂಡಿರುವ ನಿರೀಕ್ಷೆಗಳಿದ್ದು, ಗ್ರಾಹಕರ ಕುತೂಹಲ ಹೆಚ್ಚಿಸಿದೆ. ಆದ್ರೆ, ದೇಶಿಯ ಗ್ರಾಹಕರಿಗೆ ಕಾದಿದೆ ಶಾಕ್. ಏಕೆಂದರೇ ವರದಿಯೊಂದರ ಪ್ರಕಾರ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ ಅನ್ನು ಯುರೋಪಿಯನ್ ಮಾರುಕಟ್ಟೆಯಲ್ಲಿ ಮಾತ್ರ ಮಾರಾಟ ಮಾಡಬಹುದು ಎನ್ನಲಾಗಿದೆ. ಬಹುಶಃ ಭಾರತದಕ್ಕೆ ಈ ಫೋನ್ ಬರದೇ ಇರಬಹುದು ಎನ್ನಲಾಗಿದೆ.

ಬಿಡುಗಡೆ ಯಾವಾಗ?
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್‌ ಇದೇ 2022ರ ಜನೆವರಿ ತಿಂಗಳಿನಲ್ಲಿ ಲಾಂಚ್ ಆಗಲಿದೆ ಎಂದು ಹೇಳಲಾಗಿದೆ. CES 2022 ಟೆಕ್ ಕಾರ್ಯಕ್ರಮದಲ್ಲಿ ಈ ಫೋನ್ ಅಧಿಕೃತವಾಗಿ ಅನಾವರಣ ಆಗಲಿದೆ ಎನ್ನಲಾಗಿದೆ. ಫೆಬ್ರವರಿ ತಿಂಗಳಿನಲ್ಲಿ ಮಾರಾಟ ಪ್ರಾರಂಭಿಸಲಿದೆ ಎಂದು ನಿರೀಕ್ಷಿಸಲಾಗಿದೆ.

ಸ್ಯಾಮ್‌ಸಂಗ್‌ನಿಂದ ಮತ್ತೊಂದು ದೈತ್ಯ ಫೋನ್ ಬರಲಿದೆ!..ಗ್ರಾಹಕರಿಗೆ ಕಾದಿದೆ ಶಾಕ್!

ನಿರೀಕ್ಷಿತ ಬೆಲೆ ಎಷ್ಟು?
ಕೆಲವು ಆನ್‌ಲೈನ್ ಲೀಕ್ ಮಾಹಿತಿ ಪ್ರಕಾರ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್‌ ಈ ಹಿಂದಿನ ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ ಬೆಲೆಗಿಂತ ಅಗ್ಗ ಇರಲಿದೆ ಎಂದು ಸೂಚಿಸಿವೆ. ಗ್ಯಾಲಕ್ಸಿ S21 FE ಬೆಲೆ KRW 700,000 (ಸುಮಾರು 45,900ರೂ.) ಮತ್ತು KRW 800,000 (ಸುಮಾರು 52,450ರೂ.) ನಡುವೆ ಇರಲಿದೆ ಎಂದು ಹೇಳಲಾಗುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್‌ Exynos 2100 SoC ಅಥವಾ SD888 ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿರಲಿದೆ ಎನ್ನಲಾಗಿದೆ. ಹಾಗೆಯೇ ಈ ಫೋನ್ 120Hz ರಿಫ್ರೆಶ್ ದರದೊಂದಿಗೆ 6.4-ಇಂಚಿನ AMOLED ಇನ್ಫಿನಿಟಿ-ಒ ಡಿಸ್ಪ್ಲೇಯನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಇದಲ್ಲದೆ, ಈ ಫೋನ್ ಹಿಂದಿನ ಪ್ಯಾನೆಲ್‌ನಲ್ಲಿ ಟ್ರಿಪಲ್ ಕ್ಯಾಮೆರಾ ವ್ಯವಸ್ಥೆಯನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ಅವು ಕ್ರಮವಾಗಿ 12 ಮೆಗಾ ಪಿಕ್ಸಲ್ ಪ್ರಾಥಮಿಕ ಕ್ಯಾಮೆರಾ, 12 ಮೆಗಾ ಪಿಕ್ಸಲ್ ಅಲ್ಟ್ರಾ ವೈಡ್ ಕ್ಯಾಮೆರಾ ಮತ್ತು 8 ಮೆಗಾ ಪಿಕ್ಸಲ್ ಟೆಲಿಫೋಟೋ ಸೆನ್ಸಾರ್ ಅನ್ನು ಒಳಗೊಂಡಿರುತ್ತದೆ ಎನ್ನುವುದು ಲೀಕ್ ಮಾಹಿತಿಯಿಂದ ತಿಳಿದುಬಂದಿದೆ.

ಸ್ಯಾಮ್‌ಸಂಗ್‌ನಿಂದ ಮತ್ತೊಂದು ದೈತ್ಯ ಫೋನ್ ಬರಲಿದೆ!..ಗ್ರಾಹಕರಿಗೆ ಕಾದಿದೆ ಶಾಕ್!

ಹಾಗೆಯೇ ಈ ಫೋನ್ 32 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಅನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಜೊತೆಗೆ 4,500 mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರಲಿದ್ದು, ಇದಕ್ಕೆ ಪೂರಕವಾಗಿ 25W ಚಾರ್ಜಿಂಗ್ ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಪಡೆದಿರಲಿದೆ ಎಂದು ಹೇಳಲಾಗುತ್ತಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಫೀಚರ್ಸ್‌
ಈ ಹಿಂದಿನ ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 20: 9 ರಚನೆ ಅನುಪಾತವನ್ನು ಒಳಗೊಂಡಿರುವ ಸೂಪರ್ ಅಮೋಲೆಡ್ ಇನ್ಫಿನಿಟಿ-ಒ ಡಿಸ್‌ಪ್ಲೇ ಆಗಿದೆ. ಅಲ್ಲದೆ ಇದು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ. ಇದು ಆಕ್ಟಾ-ಕೋರ್ ಎಕ್ಸಿನೋಸ್ 990 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 8GB RAM + 128GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು 1TB ವರೆಗೆ ವಿಸ್ತರಿಸಲು ಅವಕಾಶ ನೀಡಲಾಗಿದೆ.

ಹಾಗೆಯೇ ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್‌ವೈಡ್-ಆಂಗಲ್ ಲೆನ್ಸ್ ಹೊಂದಿದ್ದು, ಎರಡನೇ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 15W ಫಾಸ್ಟ್ ಚಾರ್ಜಿಂಗ್ ಮತ್ತು ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Best Mobiles in India

English summary
Samsung Galaxy S21 FE Launch Date Tipped, But Might Not Come to India: Report.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X