ಈ ಸ್ಯಾಮ್‌ಸಂಗ್ ಫೋನಿಗೆ ಭಾರೀ ಡಿಸ್ಕೌಂಟ್!..ಬೆಲೆ ತಿಳಿದ್ರೆ, OMG ಅಂತೀರಾ!
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಸಂಸ್ಥೆಯು ತನ್ನ ಜನಪ್ರಿಯ ಗ್ಯಾಲಕ್ಸಿ ಸರಣಿಯಲ್ಲಿ ಹಲವು ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ ಸಹ ಗಮನ ಸೆಳೆದ ಫೋನ್‌ಗಳಲ್ಲಿ ಒಂದಾಗಿದೆ. ಈ ಫೋನ್ ಇದೀಗ ಸಖತ್ ಬೆಲೆ ಇಳಿಕೆ ಪಡೆದಿದ್ದು, ಗ್ರಾಹಕರು ಖುಷಿ ಪಡುವಂತೆ ಮಾಡಿದೆ.
ಹೌದು, ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ತಾಣದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಫೋನ್ 57% ರಷ್ಟು ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಇದೆ. ಈ ಫೋನಿನ 8 GB RAM +128 GB ಸ್ಟೋರೇಜ್ ವೇರಿಯಂಟ್ ಬೆಲೆಯು 74,999ರೂ. ಆಗಿದೆ. ಆದರೆ ಕೊಡುಗೆಯಲ್ಲಿ ಈ ಫೋನ್ 31,999ರೂ. ಗಳಿಗೆ ಗ್ರಾಹಕರಿಗೆ ಲಭ್ಯ ಆಗಲಿದೆ. ಜೊತೆಗೆ ಇತರೆ ಬ್ಯಾಂಕ್ ಆಫರ್ ಸಹ ಲಭ್ಯ.

ಅಂದಾಹಾಗೆ ಈ ಫೋನ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಪವರ್ ನಲ್ಲಿ ಕಾರ್ಯ ನಿರ್ವಹಿಸಲಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಸಹ ಪಡೆದಿದೆ. ಹಾಗೆಯೇ 8GB ಮತ್ತು 256GB ಸ್ಟೋರೇಜ್‌ನ ಟಾಪ್ ಎಂಡ್ ಮಾಡೆಲ್ ಆಯ್ಕೆ ಅನ್ನು ಸಹ ಪಡೆದಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಡಿಸ್‌ಪ್ಲೇ ರಚನೆ ಹೇಗಿದೆ : ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಮೊಬೈಲ್ 2340 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4 ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಅಂಡರ್ ಡಿಸ್‌ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಪ್ರೊಸೆಸರ್ ಕಾರ್ಯವೈಖರಿ : ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಒನ್ ಯುಐ 4.0 ಆಧಾರಿತ ಆಂಡ್ರಾಯ್ಡ್ 12 ಔಟ್ ಆಫ್ ದಿ ಬಾಕ್ಸ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 6GB ಮತ್ತು 128GB, 8GB ಮತ್ತು 128GB, ಹಾಗೂ 8GB ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಮೂರು ವೇರಿಯೆಂಟ್ ಆಯ್ಕೆಗಳನ್ನು ಪಡೆದುಕೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಕ್ಯಾಮೆರಾ ಸೆನ್ಸಾರ್ ರಚನೆ : ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 12MP ಸೆನ್ಸಾರ್ ಸಾಮರ್ಥ್ಯ ಅನ್ನು ಒಳಗೊಂಡಿದೆ. ಸೆಕೆಂಡರಿ ಕ್ಯಾಮೆರಾ 12MP ಅಲ್ಟ್ರಾವೈಡ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 8MP 3x ಟೆಲಿಫೋಟೋ ಸೆನ್ಸಾರ್ ಅನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸೆಲ್ಫಿ ಕ್ಯಾಮೆರಾ ಎಷ್ಟು : ಈ ಫೋನ್ 32MP ಫಿಕ್ಸೆಡ್ ಫೋಕಸ್ ಸೆಲ್ಫಿ ಕ್ಯಾಮೆರಾ ಅನ್ನು ಹೊಂದಿದೆ. ಇನ್ನು ಕ್ಯಾಮೆರಾ ಬಂಪ್ ಅನ್ನು ಮ್ಯಾಟ್-ಫಿನಿಶ್ ಬ್ಯಾಕ್ ಪ್ಯಾನೆಲ್‌ಗೆ ಸಂಯೋಜಿಸಲಾಗಿದ್ದು, ಇದರ ಫ್ಲ್ಯಾಶ್ ಮಾಡ್ಯೂಲ್ ಅನ್ನು ಕ್ಯಾಮರಾ ಲೈಟ್ ಹೊರಗೆ ಇರಿಸಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಬ್ಯಾಟರಿ ಬ್ಯಾಕ್‌ಅಪ್ : ಈ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಇದು 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್‌ಗಳನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ ಹಲವಾರು ಶೂಟಿಂಗ್ ಮೋಡ್ ಗಳನ್ನು ಸಹ ಪಡೆದಿದ್ದು, ಇದು ಮಲ್ಟಿ-ಕ್ಯಾಮೆರಾ ರೆಕಾರ್ಡಿಂಗ್ ಮೋಡ್ ಅನ್ನು ಹೊಂದಿದೆ. ಇದರಿಂದ ಒಂದೇ ಸಮಯ ದಲ್ಲಿ ಸೆಲ್ಫಿ ಮತ್ತು ರಿಯರ್ ಕ್ಯಾಮೆರಾಗಳಿಂದ ವೀಡಿಯೊವನ್ನು ಸೆರೆಹಿಡಿಯಲು ಬಳಕೆದಾರರಿಗೆ ಪೂರಕ ಎನಿಸುವಂತೆ ಇದೆ.


Click it and Unblock the Notifications








