CES 2022: ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ ಅನಾವರಣ!
ದಕ್ಷಿಣ ಕೊರಿಯಾದ ಟೆಕ್ ಸ್ಯಾಮ್‌ಸಂಗ್ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಜನಪ್ರಿಯತೆ ಪಡೆದುಕೊಂಡಿದೆ. ಈಗಾಗಲೇ ತನ್ನ ಗ್ಯಾಲಕ್ಸಿ ಎಂ, ಎಸ್, ಎ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಸದ್ಯ ಇದೀಗ ತನ್ನ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ ಅನ್ನು ಅಧಿಕೃತವಾಗಿ ಅನಾವರಣಗೊಳಿಸಿದೆ. ಇದು ಸ್ಯಾಮ್‌ಸಂಗ್ ಕಂಪೆನಿ 2022ರಲ್ಲಿ ಅನಾವರಣಗೊಳಿಸಿದ ಮೊದಲ ಸ್ಮಾರ್ಟ್‌ಫೋನ್ ಎನಿಸಿಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದಲ್ಲದೆ ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ತನ್ನ ಹೊಸ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ ಅನಾವರಣಗೊಳಿಸಿದೆ. ಈ ಫೋನ್ 6.4-ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ 2340×1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4-ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಅಂಡರ್ ಡಿಸ್‌ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಒನ್ ಯುಐ 4.0 ಆಧಾರಿತ ಆಂಡ್ರಾಯ್ಡ್ 12 ಔಟ್ ಆಫ್ ದಿ ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB ಮತ್ತು 128GB, 8GB ಮತ್ತು 128GB, ಹಾಗೂ 8GB ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಮೂರು ವೇರಿಯೆಂಟ್ ಆಯ್ಕೆಗಳನ್ನು ಪಡೆದುಕೊಂಡಿದೆ.

ಕ್ಯಾಮೆರಾ ವಿನ್ಯಾಸ
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12MP ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 12MP ಅಲ್ಟ್ರಾವೈಡ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 8MP 3x ಟೆಲಿಫೋಟೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 32MP ಫಿಕ್ಸೆಡ್ ಫೋಕಸ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಬಂಪ್ ಅನ್ನು ಮ್ಯಾಟ್-ಫಿನಿಶ್ ಬ್ಯಾಕ್ ಪ್ಯಾನೆಲ್‌ಗೆ ಸಂಯೋಜಿಸಲಾಗಿದೆ. ಫ್ಲ್ಯಾಶ್ ಮಾಡ್ಯೂಲ್ ಅನ್ನು ಕ್ಯಾಮರಾ ಲೈಟ್ ಹೊರಗೆ ಇರಿಸಲಾಗಿದೆ.

ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್‌ಗಳನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಹಲವಾರು ಶೂಟಿಂಗ್ ಮೋಡ್‌ಗಳನ್ನು ಸಹ ಹೊಂದಿದೆ. ಇದು ಮಲ್ಟಿ-ಕ್ಯಾಮೆರಾ ರೆಕಾರ್ಡಿಂಗ್ ಮೋಡ್ ಅನ್ನು ಒಳಗೊಂಡಿದೆ. ಇದರಿಂದ ಒಂದೇ ಸಮಯದಲ್ಲಿ ಸೆಲ್ಫಿ ಮತ್ತು ರಿಯರ್ ಕ್ಯಾಮೆರಾಗಳಿಂದ ವೀಡಿಯೊವನ್ನು ಸೆರೆಹಿಡಿಯಲು ನಿಮಗೆ ಅನುಮತಿಸುತ್ತದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ ಜಾಗತಿಕವಾಗಿ USD 699 (ಅಂದಾಜು 52,031ರೂ.)ಗಳಿಗೆ ಲಭ್ಯವಿದೆ. ಇದು 6GB ಮತ್ತು 128GB, 8GB ಮತ್ತು 128GB, ಹಾಗೂ 8GB ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಮೂರು ವೇರಿಯೆಂಟ್ ಆಯ್ಕೆಗಳಲ್ಲಿ ಲಭ್ಯವಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವಾಗ ಸೇಲ್ ಆಗಲಿದೆ ಯಾವ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ ಎನ್ನುವ ಮಾಹಿತಿ ಇನ್ನು ಕೂಡ ಲಭ್ಯವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಸ್ಯಾಮ್‌ಸಂಗ್ ಕಂಪೆನಿ ಹೇಳಿಕೊಂಡಿದೆ.


Click it and Unblock the Notifications








