ಸ್ಯಾಮ್‌ಸಂಗ್ ಗ್ಯಾಲಕ್ಸಿ S22 5G ಫೋನ್ ಈಗ ಮತ್ತೆ ಡಿಸ್ಕೌಂಟ್‌ನಲ್ಲಿ ಲಭ್ಯ!
ಸ್ಯಾಮ್‌ಸಂಗ್ ಸಂಸ್ಥೆಯು ಇದೀಗ ತನ್ನ ಗ್ಯಾಲಕ್ಸಿ S ಸರಣಿಯಲ್ಲಿ ಗ್ಯಾಲಕ್ಸಿ S23 ಫ್ಲ್ಯಾಗ್‌ಶಿಪ್ ಫೋನ್‌ಗಳನ್ನು ಬಿಡುಗಡೆ ಮಾಡಲು ಸಜ್ಜಾಗುತ್ತಿದೆ. ಹಾಗೆಯೇ ಇತ್ತೀಚಿಗೆ ಸ್ಯಾಮ್‌ಸಂಗ್ ಕಂಪನಿಯ ಗ್ಯಾಲಕ್ಸಿ S22 ಸರಣಿಯ ಫೋನ್‌ಗಳು ರಿಯಾಯಿತಿಯಲ್ಲಿ ಕಾಣಿಸಿಕೊಂಡಿವೆ. ಇದೀಗ ಸ್ಯಾಮ್‌ಸಂಗ್ ಗ್ಯಾಲಕ್ಸಿ S22 5G (Samsung Galaxy S22) ಫೋನ್ ಆಕರ್ಷಕ ಡಿಸ್ಕೌಂಟ್ ದರದಲ್ಲಿ ಲಭ್ಯವಾಗಲಿದೆ.

ಹೌದು, ಸ್ಯಾಮ್‌ಸಂಗ್ ಕಂಪನಿಯ ಸ್ಯಾಮ್‌ಸಂಗ್ ಗ್ಯಾಲಕ್ಸಿ S22 5G ಸ್ಮಾರ್ಟ್‌ಫೋನ್ (Samsung Galaxy S22) ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ 85,999ರೂ. ಗಳ ಬೆಲೆಯಲ್ಲಿ ಇದ್ದು, ಆದರೆ ರಿಯಾಯಿತಿಯಲ್ಲಿ 52,999ರೂ.ಗಳಲ್ಲಿ ಕಾಣಿಸಿಕೊಂಡಿದೆ. ಇನ್ನು ಇದರೊಂದಿಗೆ ಹೆಚ್ಚುವರಿಯಾಗಿ 25,೦೦೦ರೂ. ಗಳ ವರೆಗೂ ಎಕ್ಸ್‌ಚೇಂಜ್ ಕೊಡುಗೆ ಸಹ ಲಭ್ಯವಾಗಲಿದೆ.

ಇನ್ನು ಈ ಫ್ಲ್ಯಾಗ್‌ಶಿಫ್ ಫೋನ್ 8GB RAM + 128GB ಮತ್ತು 8GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಈ ಫೋನ್ ಫ್ಯಾಂಟಮ್ ಬ್ಲ್ಯಾಕ್, ವೈಟ್ ಮತ್ತು ಗ್ರೀನ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ S22 5G ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್ 6.1 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದೆ. ಇನ್ನು ಈ ಫೋನ್ ಆಕ್ಟಾ ಕೋರ್ 4nm SoC ಪ್ರೊಸೆಸರ್ ಬೆಂಬಲ ಹೊಂದಿದ್ದು, 8 GB RAM ಮತ್ತು 256 GB ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ.

ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 3,700mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ. ಹಾಗೆಯೇ 5G, 4G LTE, ವೈ ಫೈ 6, ಬ್ಲೂಟೂತ್ v5.2, ಜಿಪಿಎಸ್/ A ಜಿಪಿಎಸ್, NFC ಮತ್ತು USB ಟೈಪ್ ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆ ಗಳನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಪ್ಲಸ್ ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಪ್ಲಸ್ ಸ್ಮಾರ್ಟ್‌ಫೋನ್ 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದ್ದು, ಇದರೊಂದಿಗೆ ಐ ಕಂಫರ್ಟ್ ಶೀಲ್ಡ್ ಸೌಲಭ್ಯ ಇದೆ. ಇನ್ನು ಈ ಫೋನ್ ಆಕ್ಟಾ ಕೋರ್ 4nm SoC ಪ್ರೊಸೆಸರ್ ಬೆಂಬಲ ಹೊಂದಿದ್ದು, 12 GB RAM ಮತ್ತು 256 GB ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ.

ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಅವು ಕ್ರಮವಾಗಿ 10 ಎಂಪಿ + 50 ಎಂಪಿ + 10 ಎಂಪಿ ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 4,500 mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ. ಹಾಗೆಯೇ 5G, 4G LTE, ವೈ ಫೈ 6E, ಬ್ಲೂಟೂತ್ v5.2, ಜಿಪಿಎಸ್/ A ಜಿಪಿಎಸ್, NFC ಮತ್ತು USB ಟೈಪ್ ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆ ಗಳನ್ನು ಒಳಗೊಂಡಿದೆ.


Click it and Unblock the Notifications








