Home
ಸುದ್ದಿಜಾಲ

ಸ್ಯಾಮ್‌ಸಂಗ್‌ನ ಈ ದೈತ್ಯ 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ!

ಸ್ಯಾಮ್‌ಸಂಗ್ ಸಂಸ್ಥೆಯು ಇದೀಗ ತನ್ನ ಗ್ಯಾಲಕ್ಸಿ S ಸರಣಿಯಲ್ಲಿ ಗ್ಯಾಲಕ್ಸಿ S23 ಫ್ಲ್ಯಾಗ್‌ಶಿಪ್‌ ಫೋನ್‌ಗಳನ್ನು ಬಿಡುಗಡೆ ಮಾಡಲು ಸಜ್ಜಾಗುತ್ತಿದ್ದು, ಗ್ರಾಹಕರನ್ನು ಭಾರೀ ಕುತೂಹಲ ಮೂಡಿಸಿದೆ. ಹಾಗೆಯೇ ಸ್ಯಾಮ್‌ಸಂಗ್ ಕಂಪನಿಯ ಗ್ಯಾಲಕ್ಸಿ S22 ಸರಣಿಯ ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಫೋನ್ ಆಕರ್ಷಕ ಡಿಸ್ಕೌಂಟ್‌ ದರದಲ್ಲಿ ಲಭ್ಯವಾಗಲಿದೆ.

ಸ್ಯಾಮ್‌ಸಂಗ್‌ನ ಈ ದೈತ್ಯ 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ!

ಹೌದು, ಸ್ಯಾಮ್‌ಸಂಗ್ ಕಂಪನಿಯ ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಸ್ಮಾರ್ಟ್‌ಫೋನ್‌ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಭರ್ಜರಿ ಆಫರ್‌ನಲ್ಲಿ ಕಾಣಿಸಿಕೊಂಡಿದೆ. 12GB+256GB ವೇರಿಯಂಟ್‌ ಫೋನ್‌ 1,31,999ರೂ. ಗಳ ಬೆಲೆಯಲ್ಲಿ ಇದ್ದು, ಆದರೆ ರಿಯಾಯಿತಿಯಲ್ಲಿ 52,999ರೂ.ಗಳಲ್ಲಿ ಕಾಣಿಸಿಕೊಂಡಿದೆ. ಇನ್ನು ಇದರೊಂದಿಗೆ ಹೆಚ್ಚುವರಿಯಾಗಿ 23,3೦೦ರೂ. ಗಳ ವರೆಗೂ ಎಕ್ಸ್‌ಚೇಂಜ್ ಕೊಡುಗೆ ಸಹ ಲಭ್ಯವಾಗಲಿದೆ.

ಇನ್ನು ಈ ಫ್ಲ್ಯಾಗ್‌ಶಿಫ್‌ ಫೋನ್‌ 8GB RAM + 256GB ಮತ್ತು 8GB RAM + 512GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಫ್ಯಾಂಟಮ್ ಬ್ಲ್ಯಾಕ್‌, ವೈಟ್‌ ಮತ್ತು ಗ್ರೀನ್‌ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ S22 5G ಅಲ್ಟ್ರಾ ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ನ ಈ ದೈತ್ಯ 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ!

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಫೀಚರ್ಸ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಸ್ಮಾರ್ಟ್‌ಫೋನ್‌ 6.8 ಇಂಚಿನ ಎಡ್ಜ್‌ QHD ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದ್ದು, ಇದರೊಂದಿಗೆ ಐ ಕಂಫರ್ಟ್ ಶೀಲ್ಡ್‌ ಸೌಲಭ್ಯ ಇದೆ. ಇನ್ನು ಈ ಫೋನ್ ಆಕ್ಟಾ ಕೋರ್ 4 nm SoC ಪ್ರೊಸೆಸರ್‌ ಬೆಂಬಲ ಹೊಂದಿದ್ದು, 12 GB RAM ಮತ್ತು 256GB ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ.

ಹಾಗೆಯೇ ಈ ಫೋನ್ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಈ ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, 45W ಫಾಸ್ಟ್‌ ಚಾರ್ಜಿಂಗ್ ಬೆಂಬಲ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ. ಹಾಗೆಯೇ 5G, 4G LTE, ವೈ ಫೈ 6E, ಬ್ಲೂಟೂತ್ v5.2, ಜಿಪಿಎಸ್‌/ A ಜಿಪಿಎಸ್‌, NFC ಮತ್ತು USB ಟೈಪ್ ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆ ಗಳನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ನ ಈ ದೈತ್ಯ 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ!

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಪ್ಲಸ್ ಫೀಚರ್ಸ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಪ್ಲಸ್ ಸ್ಮಾರ್ಟ್‌ಫೋನ್‌ 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದ್ದು, ಇದರೊಂದಿಗೆ ಐ ಕಂಫರ್ಟ್ ಶೀಲ್ಡ್‌ ಸೌಲಭ್ಯ ಇದೆ. ಇನ್ನು ಈ ಫೋನ್ ಆಕ್ಟಾ ಕೋರ್ 4nm SoC ಪ್ರೊಸೆಸರ್‌ ಬೆಂಬಲ ಹೊಂದಿದ್ದು, 12 GB RAM ಮತ್ತು 256 GB ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ.ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಅವು ಕ್ರಮವಾಗಿ 10 ಎಂಪಿ + 50 ಎಂಪಿ + 10 ಎಂಪಿ ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ.

Best Mobiles in India

English summary
Samsung Galaxy S22 5G Ultra available on big discount price on Amazon; know more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+