ದೀಪಾವಳಿ ಆಫರ್: ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಫೋನಿಗೆ ಜಬರ್ದಸ್ತ್ ಡಿಸ್ಕೌಂಟ್‌!

|

ದೀಪಾವಳಿ ಹಬ್ಬ ಇನ್ನೇನು ಬಂದೇ ಬಿಡ್ತು. ಹಬ್ಬದ ಪ್ರಯುಕ್ತ ಇ ಕಾಮರ್ಸ್‌ ತಾಣಗಳು ಈಗಾಗಲೇ ಭರ್ಜರಿ ಆಫರ್ ಘೋಷಣೆ ಮಾಡಿವೆ. ಹಾಗೆಯೇ ಇ ಕಾಮರ್ಸ್‌ ದೈತ್ಯ ಅಮೆಜಾನ್‌ ಪ್ಲಾಟ್‌ಫಾರ್ಮ್ ಕೆಲವೊಂದ ಜನಪ್ರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಚ್ಚಿನ ಡಿಸ್ಕೌಂಟ್‌ಗಳ ಮೂಲಕ ಗುರುತಿಸಿಕೊಂಡಿದೆ. ಮುಖ್ಯವಾಗಿ ಹೈ ಎಂಡ್ ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ಡಿಸ್ಕೌಂಟ್‌ ಕೊಡುಗೆ ಲಭ್ಯ ಮಾಡುತ್ತದೆ. ಆ ಪೈಕಿ ಸದ್ಯ ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್‌ ಭರ್ಜರಿ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ.

S22

ಹೌದು, ಅಮೆಜಾನ್‌ ತಾಣದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್‌ (Samsung Galaxy S22) 50,000ರೂ. ಗಳ ಒಳಗೆ ಲಭ್ಯವಾಗಲಿದೆ. ಇನ್ನು ಈ ಫ್ಲ್ಯಾಗ್‌ಶಿಫ್‌ ಫೋನಿನ ರೀಟೇಲ್ ಬೆಲೆಯು 59,000ರೂ. ಆಗಿದ್ದು, ಕೊಡುಗೆಯಲ್ಲಿ ಈ ಫೋನ್‌ 49,000ರೂ. ಗಳಿಗೆ ದೊರೆಯುತ್ತದೆ. 10,000ರೂ. ಗಳ ರಿಯಾಯಿತಿ ಕೂಪನ್‌ ಕೊಡುಗೆ ಲಭ್ಯವಾಗಲಿದೆ. ಇನ್ನು ಈ ಫೋನ್ ಫ್ಯಾಂಟಮ್ ವೈಟ್, ಫ್ಯಾಂಟಮ್ ಬ್ಲಾಕ್ ಮತ್ತು ಗ್ರೀನ್ ಬಣ್ಣಗಳಲ್ಲಿ ಲಭ್ಯವಾಗಲಿದೆ. ಈ ಫೋನಿನ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್‌ 6.1 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದೆ. ಇನ್ನು ಈ ಫೋನ್ ಆಕ್ಟಾ ಕೋರ್ 4nm SoC ಪ್ರೊಸೆಸರ್‌ ಬೆಂಬಲ ಹೊಂದಿದ್ದು, 8 GB RAM ಮತ್ತು 256 GB ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ.

ಬ್ಯಾಕ್‌ಅಪ್‌

ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 3,700mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ. ಹಾಗೆಯೇ 5G, 4G LTE, ವೈ ಫೈ 6, ಬ್ಲೂಟೂತ್ v5.2, ಜಿಪಿಎಸ್‌/ A ಜಿಪಿಎಸ್‌, NFC ಮತ್ತು USB ಟೈಪ್ ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆ ಗಳನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಪ್ಲಸ್ ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಪ್ಲಸ್ ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಪ್ಲಸ್ ಸ್ಮಾರ್ಟ್‌ಫೋನ್‌ 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದ್ದು, ಇದರೊಂದಿಗೆ ಐ ಕಂಫರ್ಟ್ ಶೀಲ್ಡ್‌ ಸೌಲಭ್ಯ ಇದೆ. ಇನ್ನು ಈ ಫೋನ್ ಆಕ್ಟಾ ಕೋರ್ 4nm SoC ಪ್ರೊಸೆಸರ್‌ ಬೆಂಬಲ ಹೊಂದಿದ್ದು, 12 GB RAM ಮತ್ತು 256 GB ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ.

ಟ್ರಿಪಲ್

ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಅವು ಕ್ರಮವಾಗಿ 10 ಎಂಪಿ + 50 ಎಂಪಿ + 10 ಎಂಪಿ ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 4,500 mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ. ಹಾಗೆಯೇ 5G, 4G LTE, ವೈ ಫೈ 6E, ಬ್ಲೂಟೂತ್ v5.2, ಜಿಪಿಎಸ್‌/ A ಜಿಪಿಎಸ್‌, NFC ಮತ್ತು USB ಟೈಪ್ ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆ ಗಳನ್ನು ಒಳಗೊಂಡಿದೆ.

Best Mobiles in India

English summary
Samsung Galaxy S22 Available Under Rs 50,000 On Amazon.in: Details.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X