ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್ ಸರಣಿ ಬಿಡುಗಡೆ!..ಫೀಚರ್ಸ್ ಏನು?
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಸಂಸ್ಥೆಯ ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್ ಸರಣಿಯನ್ನು ಅಧಿಕೃತವಾಗಿ ಇಂದು (ಫೆ.9) ಬಿಡುಗಡೆ ಆಗಿದೆ. ಸ್ಯಾಮ್‌ಸಂಗ್ ತನ್ನ ಗ್ಯಾಲಕ್ಸಿ ಅನ್‌ಪ್ಯಾಕ್ಡ್ 2022 ಕಾರ್ಯಕ್ರಮದಲ್ಲಿ ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್ ಸರಣಿಯನ್ನು ಅನಾವರಣ ಮಾಡಿದೆ. ಕಳೆದ ವರ್ಷ ಬಿಡುಗಡೆ ಯಾದ ಗ್ಯಾಲಕ್ಸಿ S21 ಸರಣಿಯಂತೆಯೇ ಈ ಹೊಸ ಸರಣಿಯು ತನ್ನ ಪ್ರಮುಖ ಸ್ಮಾರ್ಟ್‌ಫೋನ್ ಸರಣಿ ಗ್ಯಾಲಕ್ಸಿ S22, ಗ್ಯಾಲಕ್ಸಿ S22 ಪ್ಲಸ್ ಮತ್ತು ಗ್ಯಾಲಕ್ಸಿ S22 ಅಲ್ಟ್ರಾ ಮಾದರಿಗಳನ್ನು ಒಳಗೊಂಡಿದೆ.

ಹೌದು, ಸ್ಯಾಮ್‌ಸಂಗ್ ಕಂಪನಿಯು ತನ್ನ ಗ್ಯಾಲಕ್ಸಿ S22 ಸ್ಮಾರ್ಟ್ ಫೋನ್ ಸರಣಿಯ ಗ್ಯಾಲಕ್ಸಿ S22, ಗ್ಯಾಲಕ್ಸಿ S22 ಪ್ಲಸ್ ಮತ್ತು ಗ್ಯಾಲಕ್ಸಿ S22 ಅಲ್ಟ್ರಾ ಈ ಮೂರು ಮಾದರಿಗಳು ಕ್ರಮವಾಗಿ AMOLED ಡಿಸ್‌ಪ್ಲೇ ಹೊಂದಿದ್ದು ಜೊತೆಗೆ 120 Hz ರಿಫ್ರೆಶ್ ರೇಟ್ ಅನ್ನು ಪಡೆದಿವೆ. ಇನ್ನು ಮಂದ ಬೆಳಕಿನಲ್ಲಿ ಅತ್ಯುತ್ತಮ ಫೋಟೊಗ್ರಫಿಗಾಗಿ ನೈಟೋಗ್ರಫಿ (Nightography) ಆಯ್ಕೆಯನ್ನು ಪರಿಚಯಿಸಿದೆ. ಹಾಗಾದರೇ ಇನ್ನುಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ S22, ಗ್ಯಾಲಕ್ಸಿ S22 ಪ್ಲಸ್ ಮತ್ತು ಗ್ಯಾಲಕ್ಸಿ S22 ಅಲ್ಟ್ರಾ ಸ್ಮಾರ್ಟ್‌ಫೋನ್‌ಗಳು ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್ 6.1 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದೆ. ಇನ್ನು ಈ ಫೋನ್ ಆಕ್ಟಾ ಕೋರ್ 4nm SoC ಪ್ರೊಸೆಸರ್ ಬೆಂಬಲ ಹೊಂದಿದ್ದು, 8 GB RAM ಮತ್ತು 256 GB ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ. ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 3,700mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ. ಹಾಗೆಯೇ 5G, 4G LTE, ವೈ ಫೈ 6, ಬ್ಲೂಟೂತ್ v5.2, ಜಿಪಿಎಸ್/ A ಜಿಪಿಎಸ್, NFC ಮತ್ತು USB ಟೈಪ್ ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆ ಗಳನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಪ್ಲಸ್ ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಪ್ಲಸ್ ಸ್ಮಾರ್ಟ್‌ಫೋನ್ 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದ್ದು, ಇದರೊಂದಿಗೆ ಐ ಕಂಫರ್ಟ್ ಶೀಲ್ಡ್ ಸೌಲಭ್ಯ ಇದೆ. ಇನ್ನು ಈ ಫೋನ್ ಆಕ್ಟಾ ಕೋರ್ 4nm SoC ಪ್ರೊಸೆಸರ್ ಬೆಂಬಲ ಹೊಂದಿದ್ದು, 12 GB RAM ಮತ್ತು 256 GB ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ. ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಅವು ಕ್ರಮವಾಗಿ 10 ಎಂಪಿ + 50 ಎಂಪಿ + 10 ಎಂಪಿ ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 4,500 mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ. ಹಾಗೆಯೇ 5G, 4G LTE, ವೈ ಫೈ 6E, ಬ್ಲೂಟೂತ್ v5.2, ಜಿಪಿಎಸ್/ A ಜಿಪಿಎಸ್, NFC ಮತ್ತು USB ಟೈಪ್ ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆ ಗಳನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಸ್ಮಾರ್ಟ್‌ಫೋನ್ 6.8 ಇಂಚಿನ ಎಡ್ಜ್ QHD ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದ್ದು, ಇದರೊಂದಿಗೆ ಐ ಕಂಫರ್ಟ್ ಶೀಲ್ಡ್ ಸೌಲಭ್ಯ ಇದೆ. ಇನ್ನು ಈ ಫೋನ್ ಆಕ್ಟಾ ಕೋರ್ 4 nm SoC ಪ್ರೊಸೆಸರ್ ಬೆಂಬಲ ಹೊಂದಿದ್ದು, 12 GB RAM ಮತ್ತು ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ. ಹಾಗೆಯೇ ಈ ಫೋನ್ ಕ್ವಾಡ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಈ ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, 45W ಫಾಸ್ಟ್ ಚಾರ್ಜಿಂಗ್ ಬೆಂಬಲ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ. ಹಾಗೆಯೇ 5G, 4G LTE, ವೈ ಫೈ 6E, ಬ್ಲೂಟೂತ್ v5.2, ಜಿಪಿಎಸ್/ A ಜಿಪಿಎಸ್, NFC ಮತ್ತು USB ಟೈಪ್ ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆ ಗಳನ್ನು ಒಳಗೊಂಡಿದೆ.
ಬೆಲೆ ಎಷ್ಟು?
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಬೆಲೆ $799 (ಅಂದಾಜು ಸುಮಾರು 59,900 ರೂ.) ಮತ್ತು ಗ್ಯಾಲಕ್ಸಿ S22 ಪ್ಲಸ್ ಬೆಲೆ $999 (ಅಂದಾಜು 74,800 ರೂ) ಆಗಿದೆ. ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಬೆಲೆಯು $1,199 (ಅಂದಾಜು 89,700 ರೂ.) ರಿಂದ ಪ್ರಾರಂಭವಾಗುತ್ತದೆ. ಭಾರತದಲ್ಲಿ ಈ ಮೂರು ಫೋನ್‌ಗಳ ಬೆಲೆಯ ವಿವರಗಳನ್ನು ಕಂಪನಿಯು ಇನ್ನೂ ಬಹಿರಂಗಪಡಿಸಿಲ್ಲ.


Click it and Unblock the Notifications








