Just In
- 5 hrs ago ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- 5 hrs ago Realme: ರಿಯಲ್ಮಿ ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಗಣನೆ! ಅಮೋಲೆಡ್ ಡಿಸ್ಪ್ಲೇ ಆಯ್ಕೆ
- 7 hrs ago ನೀವು ಜಿಯೋ ಗ್ರಾಹಕರೇ?..ಹಾಗಿದ್ರೆ, ಈ ಪ್ಲ್ಯಾನಿಗೆ ಖಂಡಿತಾ ಫಿದಾ ಆಗ್ತೀರಾ!
- 8 hrs ago Vivo: ಭಾರತದಲ್ಲಿ ವಿವೋ T3x 5G ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನು?, ಬೆಲೆ ಎಷ್ಟು?
Don't Miss
- Movies Shravani subramanya: ಶ್ರಾವಣಿ ಫೇಲ್: ಸುಬ್ಬು ಗುಟ್ಟಾಗಿಟ್ಟರೆ, ವಿಜಯಾಂಬಿಕೆ ಹಬ್ಬ ಮಾಡುತ್ತಿದ್ದಾಳೆ!
- Lifestyle ಬಿಲ್ಗೇಟ್ಸ್ ಟೀ ಕೇಳಿದ್ದಕ್ಕೆ ಟೀ ಮಾಡುತ್ತಿರುವ ನಾಯಿ: ಕ್ಯೂಟ್ ವೀಡಿಯೋ ವೈರಲ್
- News UPSC: ವಿರಾಟ್ ಕೋಹ್ಲಿ ಯುಪಿಎಸ್ಸಿ ಟಾಪರ್ ಅನನ್ಯಾ ರೆಡ್ಡಿಗೆ ಪ್ರೇರಣೆ
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Sports GT vs DC: ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಯಾಮ್ಸಂಗ್ನ ಈ ಫ್ಲ್ಯಾಗ್ಶಿಪ್ ಫೋನ್ ಬೆಲೆಯಲ್ಲಿ 10,000ರೂ. ಇಳಿಕೆ!
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್ಸಂಗ್ ಸಂಸ್ಥೆಯು ಇದೀಗ ತನ್ನ ಗ್ಯಾಲಕ್ಸಿ S ಸರಣಿಯಲ್ಲಿ ಅಪ್ಡೇಟ್ ಆವೃತ್ತಿಯ ಫ್ಲ್ಯಾಗ್ಶಿಪ್ ಫೋನ್ಗಳನ್ನು ಬಿಡುಗಡೆ ಮಾಡಲು ಸಜ್ಜಾಗುತ್ತಿದೆ. ಹಾಗೆಯೇ ಸ್ಯಾಮ್ಸಂಗ್ ಕಂಪನಿಯು ಜನಪ್ರಿಯ ಸ್ಯಾಮ್ಸಂಗ್ ಗ್ಯಾಲಕ್ಸಿ S22 ಸ್ಮಾರ್ಟ್ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ ಘೋಷಿಸಿದ್ದು, ಗ್ರಾಹಕರನ್ನು ಆಕರ್ಷಿಸಿದೆ. ಇನ್ನು ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ.
ಹೌದು, ಸ್ಯಾಮ್ಸಂಗ್ ಕಂಪನಿಯು ಸ್ಯಾಮ್ಸಂಗ್ ಗ್ಯಾಲಕ್ಸಿ S22 ಸ್ಮಾರ್ಟ್ಫೋನ್ (Samsung Galaxy S22) ಫೋನ್ ದರದಲ್ಲಿ 10,000ರೂ ಇಳಿಕೆ ಮಾಡಿದೆ. ಇನ್ನು ಈ ಫ್ಲ್ಯಾಗ್ಶಿಫ್ ಫೋನ್ 8GB RAM + 128GB ಮತ್ತು 8GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಈ ಎರಡು ವೇರಿಯಂಟ್ ಬೆಲೆಯಲ್ಲಿಯೂ ದರ ಕಡಿತ ಆಗಿದೆ.
ಬೆಲೆ ಇಳಿಕೆ ಬಳಿಕ 8GB RAM + 128GB ವೇರಿಯಂಟ್ ಬೆಲೆಯು 62,999ರೂ. ಆಗಿದ್ದು, 8GB RAM + 256GB ಸ್ಟೋರೇಜ್ ವೇರಿಯಂಟ್ ದರವು 66,999ರೂ. ಆಗಿದೆ. ಇನ್ನು ಈ ಫೋನ್ ಫ್ಯಾಂಟಮ್ ಬ್ಲ್ಯಾಕ್, ವೈಟ್ ಮತ್ತು ಗ್ರೀನ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಹಾಗಾದರೆ ಸ್ಯಾಮ್ಸಂಗ್ ಗ್ಯಾಲಕ್ಸಿ S22 ಸ್ಮಾರ್ಟ್ಫೋನ್ ಇತರೆ ಫೀಚರ್ಸ್ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್ಸಂಗ್ ಗ್ಯಾಲಕ್ಸಿ S22 ಫೀಚರ್ಸ್
ಸ್ಯಾಮ್ಸಂಗ್ ಗ್ಯಾಲಕ್ಸಿ S22 ಸ್ಮಾರ್ಟ್ಫೋನ್ 6.1 ಇಂಚಿನ ಪೂರ್ಣ ಹೆಚ್ಡಿ ಪ್ಲಸ್ ಡೈನಾಮಿಕ್ AMOLED 2X ಡಿಸ್ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದೆ. ಇನ್ನು ಈ ಫೋನ್ ಆಕ್ಟಾ ಕೋರ್ 4nm SoC ಪ್ರೊಸೆಸರ್ ಬೆಂಬಲ ಹೊಂದಿದ್ದು, 8 GB RAM ಮತ್ತು 256 GB ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ.
ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 3,700mAh ಬ್ಯಾಟರಿ ಬ್ಯಾಕ್ಅಪ್ ಪಡೆದಿದ್ದು, 15W ವೈರ್ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್ಲೆಸ್ ಚಾರ್ಜಿಂಗ್ಗಾಗಿ ವೈರ್ಲೆಸ್ ಪವರ್ಶೇರ್ ಅನ್ನು ಸಹ ಬೆಂಬಲಿಸುತ್ತದೆ. ಹಾಗೆಯೇ 5G, 4G LTE, ವೈ ಫೈ 6, ಬ್ಲೂಟೂತ್ v5.2, ಜಿಪಿಎಸ್/ A ಜಿಪಿಎಸ್, NFC ಮತ್ತು USB ಟೈಪ್ ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆ ಗಳನ್ನು ಒಳಗೊಂಡಿದೆ.
ಸ್ಯಾಮ್ಸಂಗ್ ಗ್ಯಾಲಕ್ಸಿ S22 ಪ್ಲಸ್ ಫೀಚರ್ಸ್
ಸ್ಯಾಮ್ಸಂಗ್ ಗ್ಯಾಲಕ್ಸಿ S22 ಪ್ಲಸ್ ಸ್ಮಾರ್ಟ್ಫೋನ್ 6.6 ಇಂಚಿನ ಪೂರ್ಣ ಹೆಚ್ಡಿ ಪ್ಲಸ್ ಡೈನಾಮಿಕ್ AMOLED 2X ಡಿಸ್ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದ್ದು, ಇದರೊಂದಿಗೆ ಐ ಕಂಫರ್ಟ್ ಶೀಲ್ಡ್ ಸೌಲಭ್ಯ ಇದೆ. ಇನ್ನು ಈ ಫೋನ್ ಆಕ್ಟಾ ಕೋರ್ 4nm SoC ಪ್ರೊಸೆಸರ್ ಬೆಂಬಲ ಹೊಂದಿದ್ದು, 12 GB RAM ಮತ್ತು 256 GB ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ.
ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಅವು ಕ್ರಮವಾಗಿ 10 ಎಂಪಿ + 50 ಎಂಪಿ + 10 ಎಂಪಿ ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 4,500 mAh ಬ್ಯಾಟರಿ ಬ್ಯಾಕ್ಅಪ್ ಪಡೆದಿದ್ದು, 15W ವೈರ್ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್ಲೆಸ್ ಚಾರ್ಜಿಂಗ್ಗಾಗಿ ವೈರ್ಲೆಸ್ ಪವರ್ಶೇರ್ ಅನ್ನು ಸಹ ಬೆಂಬಲಿಸುತ್ತದೆ. ಹಾಗೆಯೇ 5G, 4G LTE, ವೈ ಫೈ 6E, ಬ್ಲೂಟೂತ್ v5.2, ಜಿಪಿಎಸ್/ A ಜಿಪಿಎಸ್, NFC ಮತ್ತು USB ಟೈಪ್ ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆ ಗಳನ್ನು ಒಳಗೊಂಡಿದೆ.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999