Home
ಸುದ್ದಿಜಾಲ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22 ಬೆಲೆಯಲ್ಲಿ ಶಾಶ್ವತ ಇಳಿಕೆ!..ಉಳಿತಾಯ ಪಕ್ಕಾ!

ಸ್ಯಾಮ್‌ಸಂಗ್ ಸಂಸ್ಥೆಯ ಗ್ಯಾಲಕ್ಸಿ S ಸರಣಿಯ ಸ್ಮಾರ್ಟ್‌ಫೋನ್‌ಗಳು ಹೈ ಎಂಡ್‌ ಫೀಚರ್ಸ್‌ಗಳನ್ನು ಒಳಗೊಂಡಿದ್ದು, ಟ್ರೆಂಡ್‌ ಹುಟ್ಟುಹಾಕಿವೆ. ಆ ಪೈಕಿ ಸಂಸ್ಥೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಸಹ ಒಂದಾಗಿದ್ದು, ಈ ಫೋನ್‌ ಇದೀಗ ಶಾಶ್ವತವಾಗಿ ಬೆಲೆ ಇಳಿಕೆ ಕಂಡಿದ್ದು, ಗ್ರಾಹಕರು ಕುತೂಹಲದಿಂದ ಹಿಂತಿರುಗಿ ನೋಡುವಂತಾಗಿದೆ.

ಹೌದು, ಸ್ಯಾಮ್‌ಸಂಗ್‌ ಸಂಸ್ಥೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ S22 (Samsung Galaxy S22) ಸ್ಮಾರ್ಟ್‌ಫೋನ್‌ 8GB RAM + 128GB ವೇರಿಯಂಟ್‌ 72,999ರೂ. ಗಳಲ್ಲಿ ಲಾಂಚ್ ಆಗಿತ್ತು. ಇದೀಗ ಬೆಲೆ ಇಳಿಕೆಯಿಂದಾಗಿ 62,999ರೂ. ಗಳಿಗೆ ಲಭ್ಯ. ಇದಲ್ಲದೇ ಬ್ಯಾಂಕ್‌ ಆಫರ್‌ ಹಾಗೂ ಇತರೆ ಕೊಡುಗೆಗಳು ಸೇರಿ ಈ ಫೋನ್‌ ಅನ್ನು ಮತ್ತಷ್ಟು ರಿಯಾಯಿತಿ ಬೆಲೆಗೆ ಖರೀದಿಸಬಹುದಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22 ಬೆಲೆಯಲ್ಲಿ ಶಾಶ್ವತ ಇಳಿಕೆ!..ಉಳಿತಾಯ ಪಕ್ಕಾ!

ಅಂದಹಾಗೆ ಗ್ರಾಹಕರು ಸ್ಯಾಮ್‌ಸಂಗ್‌ನ ಆನ್‌ಲೈನ್‌ ಸ್ಟೋರ್‌ನಲ್ಲಿ, ಅಮೆಜಾನ್‌ ಪ್ಲಾಟ್‌ಫಾರ್ಮ್ ಗಳಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಫೋನ್‌ ಅನ್ನು ಖರೀದಿಸಬಹುದಾಗಿದೆ. ಇನ್ನು ಈ ಫೋನ್‌ ಗ್ರೀನ್, ಪರ್ಪಲ್, ಪಿಂಕ್ ಗೋಲ್ಡ್‌, ಫಾಂಟೋಮ್‌ ಬ್ಲ್ಯಾಕ್‌ ಹಾಗೂ ಫ್ಯಾಂಟೋಮ್‌ ವೈಟ್‌ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಸರಣಿ ಫೋನ್‌ಗಳ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಫೀಚರ್ಸ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್‌ 6.1 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದೆ. ಇನ್ನು ಈ ಫೋನ್ ಆಕ್ಟಾ ಕೋರ್ 4nm SoC ಪ್ರೊಸೆಸರ್‌ ಬೆಂಬಲ ಹೊಂದಿದ್ದು, 8 GB RAM ಮತ್ತು 256 GB ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ.

ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 3,700mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ. ಹಾಗೆಯೇ 5G, 4G LTE, ವೈ ಫೈ 6, ಬ್ಲೂಟೂತ್ v5.2, ಜಿಪಿಎಸ್‌/ A ಜಿಪಿಎಸ್‌, NFC ಮತ್ತು USB ಟೈಪ್ ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆ ಗಳನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಪ್ಲಸ್ ಫೀಚರ್ಸ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಪ್ಲಸ್ ಸ್ಮಾರ್ಟ್‌ಫೋನ್‌ 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದ್ದು, ಇದರೊಂದಿಗೆ ಐ ಕಂಫರ್ಟ್ ಶೀಲ್ಡ್‌ ಸೌಲಭ್ಯ ಇದೆ. ಇನ್ನು ಈ ಫೋನ್ ಆಕ್ಟಾ ಕೋರ್ 4nm SoC ಪ್ರೊಸೆಸರ್‌ ಬೆಂಬಲ ಹೊಂದಿದ್ದು, 12 GB RAM ಮತ್ತು 256 GB ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ.

ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಅವು ಕ್ರಮವಾಗಿ 10 ಎಂಪಿ + 50 ಎಂಪಿ + 10 ಎಂಪಿ ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 4,500 mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ. ಹಾಗೆಯೇ 5G, 4G LTE, ವೈ ಫೈ 6E, ಬ್ಲೂಟೂತ್ v5.2, ಜಿಪಿಎಸ್‌/ A ಜಿಪಿಎಸ್‌, NFC ಮತ್ತು USB ಟೈಪ್ ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆ ಗಳನ್ನು ಒಳಗೊಂಡಿದೆ.

Best Mobiles in India

English summary
Samsung Galaxy S22 now available for Rs 62,999 in India. details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+