Home
ಸುದ್ದಿಜಾಲ

ಈ ಚಾನ್ಸ್‌ ಮಿಸ್‌ ಮಾಡ್ಕೋಬೇಡಿ!..ಸ್ಯಾಮ್‌ಸಂಗ್‌ನ ಈ 5G ಫೋನಿಗೆ ಬಿಗ್ ಆಫರ್!

ದೀಪಾವಳಿ ಹಬ್ಬದ ಪ್ರಯುಕ್ತ ಇ ಕಾಮರ್ಸ್‌ ತಾಣಗಳು ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಆಫರ್ ಘೋಷಣೆ ಮಾಡಿವೆ. ಮುಖ್ಯವಾಗಿ ಇ ಕಾಮರ್ಸ್‌ ದೈತ್ಯ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ಕೆಲವೊಂದು ಜನಪ್ರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಚ್ಚಿನ ಡಿಸ್ಕೌಂಟ್‌ ಲಭ್ಯ ಮಾಡಿದೆ. ಅದರಲ್ಲಿಯೂ ಹೈ ಎಂಡ್ ಸ್ಮಾರ್ಟ್‌ಫೋನ್‌ಗಳಿಗೆ ಗ್ರಾಹಕರು ಕೊಡುಗೆ ಲಭ್ಯ ಮಾಡುತ್ತದೆ. ಆ ಪೈಕಿ ಸದ್ಯ ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಪ್ಲಸ್‌ 5G ಸ್ಮಾರ್ಟ್‌ಫೋನ್‌ ಭರ್ಜರಿ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ.

ಸ್ಮಾರ್ಟ್‌ಫೋನ್‌

ಹೌದು, ಫ್ಲಿಪ್‌ಕಾರ್ಟ್‌ ತಾಣದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಪ್ಲಸ್‌ 5G ಸ್ಮಾರ್ಟ್‌ಫೋನ್‌ (Samsung Galaxy S22+ 5G) 50,000ರೂ. ಗಳ ಒಳಗೆ ಲಭ್ಯವಾಗಲಿದೆ. ಇನ್ನು ಈ ಫ್ಲ್ಯಾಗ್‌ಶಿಫ್‌ ಫೋನ್‌ ಅನ್ನು ಗ್ರಾಹಕರು ಎಲ್ಲ ಕೊಡುಗೆಗಳನ್ನು ಒಳಗೊಂಡು 41499 ರೂ. ಗಳಿಗೆ ಖರೀದಿಸಬಹುದಾಗಿದೆ.

ಆಕ್ಸಿಸ್

ಹಾಗೆಯೇ ಖರೀದಿದಾರರು ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್‌ನೊಂದಿಗೆ ವಹಿವಾಟು ನಡೆಸಿದರೆ, 5% ಇನ್‌ಸ್ಟಂಟ್ ಕ್ಯಾಶ್‌ಬ್ಯಾಕ್ ದೊರೆಯಲಿದೆ. ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಫೋನಿಗೂ ಆಕರ್ಷಕ ಎಕ್ಸ್‌ಚೇಂಜ್ ಕೊಡುಗೆ ದೊರೆಯಲಿದೆ. ಈ ಫೋನಿನ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಪ್ಲಸ್ ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಪ್ಲಸ್ ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಪ್ಲಸ್ ಸ್ಮಾರ್ಟ್‌ಫೋನ್‌ 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದ್ದು, ಇದರೊಂದಿಗೆ ಐ ಕಂಫರ್ಟ್ ಶೀಲ್ಡ್‌ ಸೌಲಭ್ಯ ಇದೆ. ಇನ್ನು ಈ ಫೋನ್ ಆಕ್ಟಾ ಕೋರ್ 4nm SoC ಪ್ರೊಸೆಸರ್‌ ಬೆಂಬಲ ಹೊಂದಿದ್ದು, 12 GB RAM ಮತ್ತು 256 GB ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ.

ಕ್ಯಾಮೆರಾ

ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಅವು ಕ್ರಮವಾಗಿ 10 ಎಂಪಿ + 50 ಎಂಪಿ + 10 ಎಂಪಿ ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 4,500 mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ. ಹಾಗೆಯೇ 5G, 4G LTE, ವೈ ಫೈ 6E, ಬ್ಲೂಟೂತ್ v5.2, ಜಿಪಿಎಸ್‌/ A ಜಿಪಿಎಸ್‌, NFC ಮತ್ತು USB ಟೈಪ್ ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆ ಗಳನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಸ್ಮಾರ್ಟ್‌ಫೋನ್‌ 6.8 ಇಂಚಿನ ಎಡ್ಜ್‌ QHD ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದ್ದು, ಇದರೊಂದಿಗೆ ಐ ಕಂಫರ್ಟ್ ಶೀಲ್ಡ್‌ ಸೌಲಭ್ಯ ಇದೆ. ಇನ್ನು ಈ ಫೋನ್ ಆಕ್ಟಾ ಕೋರ್ 4 nm SoC ಪ್ರೊಸೆಸರ್‌ ಬೆಂಬಲ ಹೊಂದಿದ್ದು, 12 GB RAM ಮತ್ತು ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ.

ಬ್ಯಾಟರಿ

ಹಾಗೆಯೇ ಈ ಫೋನ್ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಈ ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, 45W ಫಾಸ್ಟ್‌ ಚಾರ್ಜಿಂಗ್ ಬೆಂಬಲ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ. ಹಾಗೆಯೇ 5G, 4G LTE, ವೈ ಫೈ 6E, ಬ್ಲೂಟೂತ್ v5.2, ಜಿಪಿಎಸ್‌/ A ಜಿಪಿಎಸ್‌, NFC ಮತ್ತು USB ಟೈಪ್ ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆ ಗಳನ್ನು ಒಳಗೊಂಡಿದೆ.

Best Mobiles in India

English summary
Samsung Galaxy S22 Plus 5G Price Cut at Flipkart: Check This Offers.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+