Samsung Galaxy S22 price cut : ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಬೆಲೆಯಲ್ಲಿ ದಿಢೀರ್ ಇಳಿಕೆ; ಭಾರೀ ಉಳಿತಾಯ ಪಕ್ಕಾ!
ಸ್ಯಾಮ್‌ಸಂಗ್ ಸಂಸ್ಥೆಯ ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಫೋನ್ ಸರಣಿಯು ಬಿಡುಗಡೆ ಆಗಿದ್ದು, ಗ್ರಾಹಕರಿಗೆ ಸಂತಸ ತಂದಿದೆ. ಇದರ ಬೆನ್ನಲ್ಲೇ ಸ್ಯಾಮ್‌ಸಂಗ್ ಸಂಸ್ಥೆಯು ಈ ಹಿಂದಿನ ಜನಪ್ರಿಯ ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಫೋನ್ ಬೆಲೆಯಲ್ಲಿ ದಿಢೀರ್ ಭರ್ಜರಿ ಇಳಿಕೆ ಮಾಡಿದ್ದು, ಗ್ರಾಹಕರ ಖುಷಿ ಮತ್ತಷ್ಟು ಹೆಚ್ಚಿಸಿದೆ.

ಹೌದು, ಸ್ಯಾಮ್‌ಸಂಗ್ ಸಂಸ್ಥೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ S22 (Samsung Galaxy S22) ಸ್ಮಾರ್ಟ್‌ಫೋನ್ 8GB RAM + 128GB ವೇರಿಯಂಟ್ 72,999ರೂ. ಗಳಲ್ಲಿ ಲಾಂಚ್ ಆಗಿತ್ತು. ಇದೀಗ ಬೆಲೆ ಇಳಿಕೆಯಿಂದಾಗಿ 57,999ರೂ. ಗಳಿಗೆ ಲಭ್ಯ. ಹಾಗೆಯೇ 8GB + 256GB ಸ್ಟೋರೇಜ್ ವೇರಿಯಂಟ್ ಫೋನ್ 61,999ರೂ. ಗಳ ಬೆಲೆಯಲ್ಲಿ ಖರೀದಿಸಬಹುದಾಗಿದೆ.
ಅಂದಹಾಗೆ ಗ್ರಾಹಕರು ಸ್ಯಾಮ್‌ಸಂಗ್‌ನ ಆನ್‌ಲೈನ್ ಸ್ಟೋರ್‌ನಲ್ಲಿ, ಅಮೆಜಾನ್ ಇಂಡಿಯಾ ಪ್ಲಾಟ್‌ಫಾರ್ಮ್ ಗಳಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಫೋನ್ ಅನ್ನು ಖರೀದಿಸಬಹುದಾಗಿದೆ. ಇನ್ನು ಈ ಫೋನ್ ಗ್ರೀನ್, ಪರ್ಪಲ್, ಪಿಂಕ್ ಗೋಲ್ಡ್, ಫಾಂಟೋಮ್ ಬ್ಲ್ಯಾಕ್ ಹಾಗೂ ಫ್ಯಾಂಟೋಮ್ ವೈಟ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಸರಣಿ ಫೋನ್‌ಗಳ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್ 6.1 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದೆ. ಇನ್ನು ಈ ಫೋನ್ ಆಕ್ಟಾ ಕೋರ್ 4nm SoC ಪ್ರೊಸೆಸರ್ ಬೆಂಬಲ ಹೊಂದಿದ್ದು, 8 GB RAM ಮತ್ತು 256 GB ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ.
ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 3,700mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ. ಹಾಗೆಯೇ 5G, 4G LTE, ವೈ ಫೈ 6, ಬ್ಲೂಟೂತ್ v5.2, ಜಿಪಿಎಸ್/ A ಜಿಪಿಎಸ್, NFC ಮತ್ತು USB ಟೈಪ್ ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆ ಗಳನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಪ್ಲಸ್ ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಪ್ಲಸ್ ಸ್ಮಾರ್ಟ್‌ಫೋನ್ 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದ್ದು, ಇದರೊಂದಿಗೆ ಐ ಕಂಫರ್ಟ್ ಶೀಲ್ಡ್ ಸೌಲಭ್ಯ ಇದೆ. ಇನ್ನು ಈ ಫೋನ್ ಆಕ್ಟಾ ಕೋರ್ 4nm SoC ಪ್ರೊಸೆಸರ್ ಬೆಂಬಲ ಹೊಂದಿದ್ದು, 12 GB RAM ಮತ್ತು 256 GB ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ.
ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಅವು ಕ್ರಮವಾಗಿ 10 ಎಂಪಿ + 50 ಎಂಪಿ + 10 ಎಂಪಿ ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 4,500 mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ. ಹಾಗೆಯೇ 5G, 4G LTE, ವೈ ಫೈ 6E, ಬ್ಲೂಟೂತ್ v5.2, ಜಿಪಿಎಸ್/ A ಜಿಪಿಎಸ್, NFC ಮತ್ತು USB ಟೈಪ್ ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆ ಗಳನ್ನು ಒಳಗೊಂಡಿದೆ.


Click it and Unblock the Notifications








