Home
ಸುದ್ದಿಜಾಲ

ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22 ಸರಣಿ ಬಿಡುಗಡೆ ದಿನಾಂಕ ಬಹಿರಂಗ!

ಸ್ಮಾರ್ಟ್‌ಫೋನ್‌ ದೈತ್ಯ ಸ್ಯಾಮ್‌ಸಂಗ್‌ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗುರುತಿಸಕೊಂಡಿದೆ. ಈಗಾಗಲೇ ಗ್ಯಾಲಕ್ಸಿ ಎಂ, ಗ್ಯಾಲಕ್ಸಿ ಎ, ಗ್ಯಾಲಕ್ಸಿ ಎಸ್‌ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್‌ ಮಾಡಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದ ಮಾರುಕಟ್ಟೆಯಲ್ಲಿ ತನ್ನ ಹೊಸ ಗ್ಯಾಲಕ್ಸಿ S22 ಸರಣಿಯನ್ನು ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಇದೇ ಫೆಬ್ರವರಿ 17 ರಂದು ಅಂದರೆ ನಾಳೆ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

ಗ್ಯಾಲಕ್ಸಿ S22

ಹೌದು, ಸ್ಯಾಮ್‌ಸಂಗ್‌ ಕಂಪೆನಿ ತನ್ನ ಹೊಸ ಗ್ಯಾಲಕ್ಸಿ S22 ಸರಣಿಯನ್ನು ಫೆಬ್ರವರಿ 17 ರಂದು ಲಾಂಚ್‌ ಮಾಡುವುದಾಗಿ ಹೇಳಿದೆ. ಇನ್ನು ಸ್ಯಾಮ್‌ಸಂಗ್‌ ಕಂಪೆನಿ ಈ ವರ್ಷದ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಅನ್‌ಪ್ಯಾಕ್ಡ್‌ ಈವೆಂಟ್‌ನಲ್ಲಿ ಗ್ಯಾಲಕ್ಸಿ S22 ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಅನಾವರಣಗೊಳಿಸಿದೆ. ಈ ಸರಣಿಯಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22 ಅಲ್ಟ್ರಾ, ಗ್ಯಾಲಕ್ಸಿ S22 ಪ್ಲಸ್ ಮಾದರಿ ಮತ್ತು ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್‌ಗಳು ಬರಲಿವೆ. ಹಾಗಾದ್ರೆ ಭಾರತದಲ್ಲಿ ಗ್ಯಾಲಕ್ಸಿ S22 ಸರಣಿಯ ಬೆಲೆ ಹಾಗೂ ಫೀಚರ್ಸ್‌ ಏನಿರಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22 ಮತ್ತು ಗ್ಯಾಲಕ್ಸಿ S22+

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22 ಮತ್ತು ಗ್ಯಾಲಕ್ಸಿ S22+

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್‌ 6.1 ಇಂಚಿನ ಫುಲ್‌ HD+ ಡೈನಾಮಿಕ್ ಅಮೋಲೆಡ್‌ 2X ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ ವಿಕ್ಟಸ್+ ಪ್ರೊಟೆಕ್ಷನ್‌ ಹೊಂದಿದೆ. ಜೊತೆಗೆ 120Hz ರಿಫ್ರೆಶ್ ರೇಟ್‌ ಬೆಂಬಲವನ್ನು ಹೊಂದಿದೆ. ಆದರೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22+ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಗ್ಯಾಲಕ್ಸಿ S22 ಸರಣಿಯ ಸ್ಮಾರ್ಟ್‌ಫೋನ್‌ಗಳು ಭಾರತದಲ್ಲಿ ಸ್ನಾಪ್‌ಡ್ರಾಗನ್ 8 Gen 1 ಪ್ರೊಸೆಸರ್‌ ಹೊಂದಿರಲಿವೆ ಎಂದು ಸ್ಯಾಮ್‌ಸಂಗ್‌ ಈಗಾಗಲೇ ದೃಢಪಡಿಸಿದೆ. ಇನ್ನು ಈ ಡಿವೈಸ್‌ಗಳು ಆಂಡ್ರಾಯ್ಡ್‌ 12 ನಲ್ಲಿ ಒಂದು UI 4.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಗ್ಯಾಲಕ್ಸಿ S22 ಮತ್ತು ಗ್ಯಾಲಕ್ಸಿ S22 ಪ್ಲಸ್ ಎರಡೂ ಮಾದರಿಗಳು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿವೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಗೆ ಸಹ ಬೆಂಬಲವನ್ನು ಹೊಂದಿದೆ. ಇದಲ್ಲದೆ 10 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇನ್ನು ಗ್ಯಾಲಕ್ಸಿ S22 3,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್, 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ. ಆದರೆ ಗ್ಯಾಲಕ್ಸಿ S22+ 4,500mAh ಸಾಂರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 45W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22 ಅಲ್ಟ್ರಾ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22 ಅಲ್ಟ್ರಾ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22 ಅಲ್ಟ್ರಾ ಸ್ಮಾರ್ಟ್‌ಫೋನ್‌ S ಪೆನ್‌ನೊಂದಿಗೆ ಬರುವ Galaxy S ಸರಣಿಯ ಮೊದಲ ಡಿವೈಸ್‌ ಆಗಿದೆ. ಈ ಸ್ಮಾರ್ಟ್‌ಫೋನ್‌ 6.8 ಇಂಚಿನ ಎಡ್ಜ್ QHD+ ಡೈನಾಮಿಕ್ ಅಮೋಲೆಡ್‌ 2X ಡಿಸ್‌ಪ್ಲೇ ಹೊಂದಿದೆ. ಇದು 1,750ನಿಟ್‌ಗಳ ಗರಿಷ್ಠ ಬ್ರೈಟ್‌ನೆಸ್‌ ಮಟ್ಟವನ್ನು ಹೊಂದಿದೆ. ಇನ್ನು ಈ ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 45W ನಲ್ಲಿ ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಜೊತೆಗೆ 15W ವೈರ್‌ಲೆಸ್ ಚಾರ್ಜಿಂಗ್‌ಗೆ ಕಂಪನಿಯು ಬೆಂಬಲವನ್ನು ಒದಗಿಸಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22 ಸರಣಿಯು ಭಾರತದಲ್ಲಿ 69,900ರೂ.ಗಳ ಆರಂಭಿಕ ಬೆಲೆಯೊಂದಿಗೆ ಬರುವ ಸಾಧ್ಯತೆ ಇದೆ.

Best Mobiles in India

English summary
Samsung Galaxy S22 series to launch in India tomorrow: Here are the expected prices
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+