Home
ಸುದ್ದಿಜಾಲ

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಫೋನ್‌ ಭಾರೀ ಡಿಸ್ಕೌಂಟ್‌ನಲ್ಲಿ ಲಭ್ಯ!

ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಸಂಸ್ಥೆಯ ಗ್ಯಾಲಕ್ಸಿ S ಸರಣಿಯಲ್ಲಿ ಮುಂಬರಲಿರುವ S23 ಸರಣಿಯು ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ. ಅದರೊಂದಿಗೆ ಸ್ಯಾಮ್‌ಸಂಗ್ ಕಂಪನಿಯು ಜನಪ್ರಿಯ ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ 5G ಸ್ಮಾರ್ಟ್‌ಫೋನ್‌ ಡಿಸ್ಕೌಂಟ್‌ ಬೆಲೆಯಲ್ಲಿ ಲಭ್ಯವಿದ್ದು, ಗ್ರಾಹಕರನ್ನು ಆಕರ್ಷಿಸಿದೆ. ಇನ್ನು ಈ ಫೋನಿನ ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ.

Samsung Galaxy S22 S22 Ultra 5G

ಹೌದು, ಸ್ಯಾಮ್‌ಸಂಗ್ ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ 5G ಸ್ಮಾರ್ಟ್‌ಫೋನ್‌ (Samsung Galaxy S22 S22 Ultra 5G) ಫೋನ್‌ ರಿಯಾಯಿತಿ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇನ್ನು ಈ ಫ್ಲ್ಯಾಗ್‌ಶಿಫ್‌ ಫೋನ್‌ 12GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ. ಈ ವೇರಿಯಂಟ್‌ ಆಫರ್‌ ಬೆಲೆಯಲ್ಲಿ ಲಭ್ಯವಿದ್ದು, 1,09,999ರೂ. ಗಳಿಗೆ ಗ್ರಾಹಕರು ಖರೀದಿಸಬಹುದಾಗಿದೆ. ಹಾಗಾದರೇ ಈ ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಸ್ಮಾರ್ಟ್‌ಫೋನ್‌ 6.8 ಇಂಚಿನ ಎಡ್ಜ್‌ QHD ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದ್ದು, ಇದರೊಂದಿಗೆ ಐ ಕಂಫರ್ಟ್ ಶೀಲ್ಡ್‌ ಸೌಲಭ್ಯ ಇದೆ. ಇನ್ನು ಈ ಫೋನ್ ಆಕ್ಟಾ ಕೋರ್ 4 nm SoC ಪ್ರೊಸೆಸರ್‌ ಬೆಂಬಲ ಹೊಂದಿದ್ದು, 12 GB RAM ಮತ್ತು ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ.

108 ಮೆಗಾ ಪಿಕ್ಸಲ್

ಹಾಗೆಯೇ ಈ ಫೋನ್ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಈ ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, 45W ಫಾಸ್ಟ್‌ ಚಾರ್ಜಿಂಗ್ ಬೆಂಬಲ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ. ಹಾಗೆಯೇ 5G, 4G LTE, ವೈ ಫೈ 6E, ಬ್ಲೂಟೂತ್ v5.2, ಜಿಪಿಎಸ್‌/ A ಜಿಪಿಎಸ್‌, NFC ಮತ್ತು USB ಟೈಪ್ ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆ ಗಳನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಪ್ಲಸ್ ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಪ್ಲಸ್ ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಪ್ಲಸ್ ಸ್ಮಾರ್ಟ್‌ಫೋನ್‌ 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದ್ದು, ಇದರೊಂದಿಗೆ ಐ ಕಂಫರ್ಟ್ ಶೀಲ್ಡ್‌ ಸೌಲಭ್ಯ ಇದೆ. ಇನ್ನು ಈ ಫೋನ್ ಆಕ್ಟಾ ಕೋರ್ 4nm SoC ಪ್ರೊಸೆಸರ್‌ ಬೆಂಬಲ ಹೊಂದಿದ್ದು, 12 GB RAM ಮತ್ತು 256 GB ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ.

ಟ್ರಿಪಲ್ ಕ್ಯಾಮೆರಾ

ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಅವು ಕ್ರಮವಾಗಿ 10 ಎಂಪಿ + 50 ಎಂಪಿ + 10 ಎಂಪಿ ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 4,500 mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ. ಹಾಗೆಯೇ 5G, 4G LTE, ವೈ ಫೈ 6E, ಬ್ಲೂಟೂತ್ v5.2, ಜಿಪಿಎಸ್‌/ A ಜಿಪಿಎಸ್‌, NFC ಮತ್ತು USB ಟೈಪ್ ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆ ಗಳನ್ನು ಒಳಗೊಂಡಿದೆ.

Best Mobiles in India

English summary
Samsung Galaxy S22 ultra available at Discount Price in India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+