Home
ಸುದ್ದಿಜಾಲ

Samsung Galaxy S23 5G ಫೋನ್‌ ಖರೀದಿಸಲು ಇದು ಬೆಸ್ಟ್‌ ಟೈಮ್‌; ಈ ಆಫರ್‌ ಬಿಡಬೇಡಿ!

ಬಹುನಿರೀಕ್ಷಿತ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಈಗ ಬಿಗ್‌ ಬಿಲಿಯನ್‌ ಡೇಸ್‌ 2024 (Flipkart Big Billion Days Sale 2024) ಸೇಲ್‌ ಚಾಲ್ತಿ ಆಗಿದೆ. ಈ ವಿಶೇಷ ಮಾರಾಟ ಮೇಳದಲ್ಲಿ ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳು ಆಕರ್ಷಕ ಡಿಸ್ಕೌಂಟ್‌ ಪಡೆದಿದ್ದು, ಇದರೊಂದಿಗೆ ಕೆಲವು ಬ್ಯಾಂಕ್‌ ಆಫರ್‌ಗಳು ಕೂಡಾ ಲಭ್ಯ ಇವೆ. ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 (Samsung Galaxy S23 5G) ಫೋನ್‌ ವಾವ್‌ ಎನಿಸುವಂತಹ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ.

ಹೌದು, ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 (Samsung Galaxy S23 5G) ಮೊಬೈಲ್ ಶೇ. 57% ರಷ್ಟು ಡಿಸ್ಕೌಂಟ್‌ ಪಡೆದಿದೆ. ಈ ಫೋನಿನ 8GB RAM + 128 GB ಸ್ಟೋರೇಜ್‌ ವೇರಿಯಂಟ್‌ ಅನ್ನು ಖರೀದಿದಾರರು 37,999ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿ ಮಾಡಬಹುದು. ಇದರ ಜೊತೆಗೆ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳ ಆಫರ್‌ ಸಹ ಲಭ್ಯವಾಗಲಿವೆ.

Samsung Galaxy S23 5G ಖರೀದಿಸಲು ಇದು ಬೆಸ್ಟ್‌ ಟೈಮ್‌; ಈ ಆಫರ್‌ ಬಿಡಬೇಡಿ!

ಈ ಮೊಬೈಲ್ ಕ್ರೀಮ್‌, ಗ್ರೀನ್‌, ವ್ಯಾವೆಂಡರ್ ಹಾಗೂ ಪ್ಯಾಂಟಮ್ ಬ್ಲ್ಯಾಕ್ ಕಲರ್‌ ಆಯ್ಕೆಗಳನ್ನು ಪಡೆದಿದ್ದು, 3,900mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಸಹ ಪಡೆದಿದೆ. ಅಲ್ಲದೇ ಈ ಫೋನ್ ತ್ರಿವಳಿ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಆಗಿದೆ. ಹಾಗಾದರೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 - ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಮೊಬೈಲ್‌ 6.1 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡೈನಾಮಿಕ್‌ ಅಮೋಲೆಡ್‌ 2X ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗೆಯೇ ಈ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಬೆಂಬಲಿಸಲಿದ್ದು, 48Hz ತನಕ ಇಳಿಸಬಹುದಾಗಿದೆ. ಇನ್ನು ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್‌ 8GB RAM ಮತ್ತು 512GB ಆಂತರೀಕ ಸ್ಟೋರೇಜ್‌ ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಮೊಬೈಲ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ದ್ವಿತೀಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಮತ್ತು ತೃತೀಯ ಕ್ಯಾಮೆರಾ 10 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಅನ್ನು ಹೊಂದಿದೆ.

ಇದರೊಂದಿಗೆ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಅಲ್ಲದೇ ಈ ಮೊಬೈಲ್ ಅಪ್‌ಗ್ರೇಡ್‌ ಕ್ಯಾಮೆರಾ ಅಪ್ಲಿಕೇಶನ್ ಅನ್ನು ಹೊಂದಿದ್ದು, ಇದರ ಮೂಲಕ ಸೆಕೆಂಡಿಗೆ 30 ಫ್ರೇಮ್‌ಗಳಲ್ಲಿ 8K ವೀಡಿಯೊ ರೆಕಾರ್ಡಿಂಗ್ ಮಾಡಬಹುದಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸ S23 ಮೊಬೈಲ್‌ 3,900mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, 25W ವೈರ್ಡ್ ಚಾರ್ಜಿಂಗ್ ಮತ್ತು 15W ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇದರ ಮೂಲಕ ಬ್ಯಾಟರಿಯನ್ನು ಕೇವಲ 30 ನಿಮಿಷಗಳಲ್ಲಿ 50% ಚಾರ್ಜಿಂಗ್‌ ಮಾಡಬಹುದು ಎಂದು ಸ್ಯಾಮ್‌ಸಂಗ್‌ ಕಂಪೆನಿ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.3, Wi-Fi ಡೈರೆಕ್ಟ್ ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ.

Best Mobiles in India

English summary
Samsung Galaxy S23 5G available at 58 Percent Discount on Flipkart Big Billion Days Sale 2024. check full details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+