Home
ಸುದ್ದಿಜಾಲ

ಅತ್ಯುತ್ತಮ ಕ್ಯಾಮೆರಾ ಇರುವ ಈ ಸ್ಯಾಮ್‌ಸಂಗ್‌ ಫೋನ್‌ ಈಗ ಡಿಸ್ಕೌಂಟ್‌ನಲ್ಲಿ ಲಭ್ಯ!

ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಒಂದಿಲ್ಲೊಂದು ಆಫರ್‌ ಮೇಳಗಳನ್ನು ಮೂಲಕ ಗ್ರಾಹಕರನ್ನು ಆಕರ್ಷಿಸಿದ್ದು, ಸದ್ಯ ಸ್ಮಾರ್ಟ್‌ಫೋನ್‌ ಫೆಸ್ಟಿವಲ್‌ ಸೇಲ್‌ ಆಯೋಜಿಸಿದ್ದು ಭರ್ಜರಿ ಕೊಡುಗೆಗಳ ಸುರಿಮಳೆ ಘೋಷಿಸಿದೆ. ಅದರಲ್ಲಿಯೂ ಮುಖ್ಯವಾಗಿ ಆಯ್ದ ಮೊಬೈಲ್‌ಗಳಿಗೆ ಬೊಂಬಾಟ್‌ ರಿಯಾಯಿತಿ ಲಭ್ಯ ಮಾಡಿದೆ. ಆ ಪೈಕಿ ಸ್ಯಾಮ್‌ಸಂಗ್‌ ಸಂಸ್ಥೆಯು ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಮೊಬೈಲ್‌ ಭರ್ಜರಿ ಡಿಸ್ಕೌಂಟ್‌ ಬೆಲೆ ಪಡೆಕೊಂಡಿದೆ.

ಹೌದು, ಫ್ಲಿಪ್‌ಕಾರ್ಟ್‌ ತಾಣದಲ್ಲಿ ಸ್ಮಾರ್ಟ್‌ಫೋನ್‌ ಫೆಸ್ಟಿವಲ್‌ ಸೇಲ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಫೋನ್‌ ಶೇ. 55% ರಷ್ಟು ನೇರ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 8 GB RAM + 256 GB ಸ್ಟೋರೇಜ್‌ ವೇರಿಯಂಟ್‌ ಆಫರ್‌ನಲ್ಲಿ 39,999ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಅಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ಡಿಸ್ಕೌಂಟ್‌ ಕೂಡಾ ಪಡೆಯಬಹುದಾಗಿದೆ.

ಅತ್ಯುತ್ತಮ ಕ್ಯಾಮೆರಾ ಇರುವ ಈ ಸ್ಯಾಮ್‌ಸಂಗ್‌ ಫೋನ್‌ ಈಗ ಡಿಸ್ಕೌಂಟ್‌ನಲ್ಲಿ ಲಭ್ಯ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಫೋನ್‌ ತ್ರಿವಳಿ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಆಗಿದೆ. ಅಲ್ಲದೇ ಇದು ಕ್ರೀಮ್‌, ಗ್ರೀನ್‌, ವ್ಯಾವೆಂಡರ್ ಹಾಗೂ ಪ್ಯಾಂಟಮ್ ಬ್ಲ್ಯಾಕ್ ಕಲರ್‌ ಆಯ್ಕೆಗಳನ್ನು ಪಡೆದಿದ್ದು, 3,900mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಸಹ ಪಡೆದಿದೆ. ಹಾಗಾದರೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 - ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಫೋನ್‌ 6.1 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡೈನಾಮಿಕ್‌ ಅಮೋಲೆಡ್‌ 2X ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗೆಯೇ ಈ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಬೆಂಬಲಿಸಲಿದ್ದು, 48Hz ತನಕ ಇಳಿಸಬಹುದಾಗಿದೆ. ಇನ್ನು ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್‌ 8GB RAM ಮತ್ತು 512GB ಆಂತರೀಕ ಸ್ಟೋರೇಜ್‌ ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಮತ್ತು ತೃತೀಯ ಕ್ಯಾಮೆರಾ 10 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಅನ್ನು ಹೊಂದಿದೆ.

ಇದರೊಂದಿಗೆ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಅಲ್ಲದೇ ಈ ಮೊಬೈಲ್ ಅಪ್‌ಗ್ರೇಡ್‌ ಕ್ಯಾಮೆರಾ ಅಪ್ಲಿಕೇಶನ್ ಅನ್ನು ಪಡೆದಿದ್ದು, ಇದರ ಮೂಲಕ ಸೆಕೆಂಡಿಗೆ 30 ಫ್ರೇಮ್‌ಗಳಲ್ಲಿ 8K ವೀಡಿಯೊ ರೆಕಾರ್ಡಿಂಗ್ ಮಾಡಬಹುದಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸ S23 ಫೋನ್‌ 3,900mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, 25W ವೈರ್ಡ್ ಚಾರ್ಜಿಂಗ್ ಮತ್ತು 15W ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇದರ ಮೂಲಕ ಬ್ಯಾಟರಿಯನ್ನು ಕೇವಲ 30 ನಿಮಿಷಗಳಲ್ಲಿ 50% ಚಾರ್ಜಿಂಗ್‌ ಮಾಡಬಹುದು ಎಂದು ಸ್ಯಾಮ್‌ಸಂಗ್‌ ಕಂಪೆನಿ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.3, Wi-Fi ಡೈರೆಕ್ಟ್ ಮತ್ತು USB ಟೈಪ್-C ಪೋರ್ಟ್ ಅನ್ನು ಸಪೋರ್ಟ್‌ ಸಹ ಇದೆ.

Best Mobiles in India

English summary
SAMSUNG Galaxy S23 5G Phone now available at Huge price cut in Flipkart India. check out offer price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+