ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಫೋನಿಗೆ ಬಿಗ್ ಡಿಸ್ಕೌಂಟ್; ಆಫರ್ ಬೆಲೆ ತಿಳಿದ್ರೆ, ವಾವ್ ಅಂತೀರಾ!
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಸಂಸ್ಥೆಯು ಇತ್ತೀಚಿಗೆ S ಸರಣಿಯಲ್ಲಿ ಬಿಡುಗಡೆ ಮಾಡಿರುವ ಗ್ಯಾಲಕ್ಸಿ S23 ( Samsung Galaxy S23 ) ಮೊಬೈಲ್ ಆಕರ್ಷಕ ಫೀಚರ್ಸ್‌ನಿಂದ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಇದೀಗ ಈ ಫೋನ್ ಭರ್ಜರಿ ಬೆಲೆ ಇಳಿಕೆ ಪಡೆದಿದ್ದು, ಆನ್‌ಲೈನ್ ಮಾರುಕಟ್ಟೆಯಲ್ಲಿ ಮತ್ತೊಮ್ಮ ಗಮನ ಸೆಳೆದಿದೆ. ಆನ್‌ಲೈನ್ ತಾಣಗಳ ಮೂಲಕ ಈ ಫೋನ್ ಖರೀದಿಸುವ ಗ್ರಾಹಕರು 18,000ರೂ. ಗಳ ರಿಯಯಾತಿ ಪಡೆಯಬಹುದಾಗಿದೆ. ಅಂದಹಾಗೆ ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 2 SoC ಪ್ರೊಸೆಸರ್ ಸಪೋರ್ಟ್ ಪಡೆದಿದೆ.
ಹೌದು, ಅಧಿಕೃತ ಸ್ಯಾಮ್‌ಸಂಗ್ ವೆಬ್‌ಸೈಟ್ ಸೇರಿದಂತೆ ಫ್ಲಿಪ್‌ಕಾರ್ಟ್ ತಾಣದಲ್ಲಿಯೂ ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ( Samsung Galaxy S23 ) ಫೋನ್ ಭರ್ಜರಿ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಫ್ಲಿಪ್‌ಕಾರ್ಟ್ ತಾಣದಲ್ಲಿ 128GB ವೇರಿಯಂಟ್ ಶೇ. 47% ರಷ್ಟು ಡಿಸ್ಕೌಂಟ್ ಪಡೆದಿದ್ದು, ಈ ಫೋನ್ 46,999ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ.

ಇನ್ನು ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ 12 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ ಬ್ಲೂ, ಆರೆಂಜ್ ಹಾಗೂ ಗ್ರೀನ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 - ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಮೊಬೈಲ್ 6.1 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡೈನಾಮಿಕ್ ಅಮೋಲೆಡ್ 2X ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಸಪೋರ್ಟ್ ಮಾಡಲಿದೆ. ಇನ್ನು ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ಪ್ರೊಟೆಕ್ಷನ್ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 2 SoC ಪ್ರೊಸೆಸರ್ ಪವರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 13 ಸಪೋರ್ಟ್ ಜೊತೆಗೆ ಕಾರ್ಯ ನಿರ್ವಹಿಸಲಿದೆ.
ಅಲ್ಲದೇ ಇದು 8GB RAM ಮತ್ತು 128GB, 8GB RAM ಮತ್ತು 256GB ಹಾಗೂ 8GB RAM ಮತ್ತು 512GB ಆಂತರೀಕ ಸ್ಟೋರೇಜ್ ಹೊಂದಿದೆ. ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಸೆಕೆಂಡರಿ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಮತ್ತು ಮೂರನೇ ಕ್ಯಾಮೆರಾ 10 ಮೆಗಾ ಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಅನ್ನು ಹೊಂದಿದೆ.
ಇದಲ್ಲದೆ ಮುಂಭಾಗದಲ್ಲಿ 12 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದರ ಜೊತೆಗೆ ಈ ಮೊಬೈಲ್ ಅಪ್‌ಗ್ರೇಡ್ ಕ್ಯಾಮೆರಾ ಅಪ್ಲಿಕೇಶನ್ ಅನ್ನು ಹೊಂದಿದ್ದು, ಇದರ ಮೂಲಕ ಸೆಕೆಂಡಿಗೆ 30 ಫ್ರೇಮ್‌ಗಳಲ್ಲಿ 8K ವೀಡಿಯೊ ರೆಕಾರ್ಡಿಂಗ್ ಮಾಡಬಹುದಾಗಿದೆ.
ಈ ಸ್ಮಾರ್ಟ್‌ಫೋನ್ 3,900mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, 25W ವೈರ್ಡ್ ಚಾರ್ಜಿಂಗ್ ಮತ್ತು 15W ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.3, Wi-Fi ಡೈರೆಕ್ಟ್ ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ.


Click it and Unblock the Notifications








