Home
ಸುದ್ದಿಜಾಲ

ವಾವ್‌!..ಸ್ಯಾಮ್‌ಸಂಗ್‌ನ ಈ ದೈತ್ಯ ಫೋನಿನ ಬೆಲೆಯಲ್ಲಿ ಭಾರೀ ಇಳಿಕೆ!

ದೈತ್ಯ ಇ ಕಾಮರ್ಸ್‌ ತಾಣ ಎಂದು ಗುರುತಿಸಿಕೊಂಡಿರುವ ಅಮೆಜಾನ್‌ ಸಂಸ್ಥೆಯು ಸ್ಮಾರ್ಟ್‌ಫೋನ್‌ಗಳಿಗೆ ಸ್ಪೆಷಲ್ ಡಿಸ್ಕೌಂಟ್‌ ಲಭ್ಯ ಮಾಡುತ್ತಾ, ಮೊಬೈಲ್‌ ಪ್ರಿಯ ಗ್ರಾಹಕರ ಗಮನ ಸೆಳೆಯುತ್ತದೆ. ಸದ್ಯ ಅಮೆಜಾನ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE ಮೊಬೈಲ್‌ ಸಹ ಆಕರ್ಷಕ ರಿಯಾಯಿತಿ ಪಡೆದಿದ್ದು, ಗ್ರಾಹಕರಿಗೆ ಸಖತ್‌ ಖುಷಿ ನೀಡಿದೆ.

ಹೌದು, ಅಮೆಜಾನ್ ಆನ್‌ಲೈನ್‌ ಪ್ಲಾಟ್‌ಫಾರ್ಮ್ ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE ಮೊಬೈಲ್‌ ಶೇ. 25% ರಷ್ಟು ನೇರ ರಿಯಾಯಿತಗಿ ಬೆಲೆಯಲ್ಲಿ ಖರೀದಿಗೆ ಲಭ್ಯ. ಈ ಫೋನಿನ 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 79,999ರೂ. ಆಗಿದ್ದು, ಸದ್ಯ ಕೊಡುಗೆಯಲ್ಲಿ 59,999ರೂ. ಪ್ರೈಸ್‌ಟ್ಯಾಗ್‌ ದರದಲ್ಲಿ ಕಾಣಿಸಿಕೊಂಡಿದೆ. ಇದರ ಜೊತೆಗೆ ಇತರೆ ಬ್ಯಾಂಕ್‌ ಕೊಡುಗೆ ಹಾಗೂ ನೋ ಕಾಸ್ಟ್‌ ಇಎಮ್‌ಐ ಸಹ ಸಿಗಲಿದೆ.

ವಾವ್‌!..ಸ್ಯಾಮ್‌ಸಂಗ್‌ನ ಈ ದೈತ್ಯ ಫೋನಿನ ಬೆಲೆಯಲ್ಲಿ ಭಾರೀ ಇಳಿಕೆ!

ಅಂದಹಾಗೆ ಈ ಮೊಬೈಲ್‌ 4,500mAh ಬ್ಯಾಟರಿ ಬ್ಯಾಕ್‌ಅಪ್‌ ಬಲ ಪಡೆದಿದ್ದು, 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಪ್ರಾಥಮಿಕ ಕ್ಯಾಮೆರಾ ಒಳಗೊಂಡಿದೆ. ಗ್ರಾಹಕರು ಈ ಮೊಬೈಲ್‌ ಅನ್ನುಕ್ರೀಮ್, ಗ್ರ್ಯಾಫೈಟ್, ಮಿಂಟ್ ಮತ್ತು ಪರ್ಪಲ್ ಕಲರ್‌ ಆಯ್ಕೆಯಲ್ಲಿ ಖರೀದಿ ಮಾಡಬಹುದಾಗಿದೆ. ಹಾಗಾದರೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE - ಫೀಚರ್ಸ್‌ ಹೀಗಿವೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE ಮೊಬೈಲ್‌ 6.4 ಇಂಚಿನ ಡೈನಾಮಿಕ್ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 120Hz ವರೆಗೆ ರಿಫ್ರೆಶ್ ರೇಟ್‌ನೊಂದಿಗೆ ಬರಲಿದೆ. ಇದು 83.2% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದುಕೊಂಡಿದೆ. ಇದಲ್ಲದೆ ಡಿಸ್‌ಪ್ಲೇ 19.5:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ವಾವ್‌!..ಸ್ಯಾಮ್‌ಸಂಗ್‌ನ ಈ ದೈತ್ಯ ಫೋನಿನ ಬೆಲೆಯಲ್ಲಿ ಭಾರೀ ಇಳಿಕೆ!

ಸ್ಯಾಮ್‌ಸಂಗ್‌ ಸಂಸ್ಥೆಯ ಈ ಗ್ಯಾಲಕ್ಸಿ S23 FE ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಬೆಂಬಲ ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು 8GB RAM + 256GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಫ್ಲೋಟಿಂಗ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ದ್ವಿತೀಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾವೈಡ್‌ ಲೆನ್ಸ್‌ ಅನ್ನು ಪಡೆದಿದ್ದು, ತೃತೀಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 10 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ವಾವ್‌!..ಸ್ಯಾಮ್‌ಸಂಗ್‌ನ ಈ ದೈತ್ಯ ಫೋನಿನ ಬೆಲೆಯಲ್ಲಿ ಭಾರೀ ಇಳಿಕೆ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE ಮೊಬೈಲ್‌ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಇದು ಯುಎಸ್‌ಬಿ ಟೈಪ್-ಸಿ ಪೋರ್ಟ್ ಮೂಲಕ 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್‌ ಸಹ ಹೊಂದಿದೆ. ಇದು 30 ನಿಮಿಷಗಳಲ್ಲಿ ಫೋನ್ ಅನ್ನು ಶೂನ್ಯದಿಂದ 50% ಚಾರ್ಜಿಂಗ್‌ ಮಾಡಲಿದೆ.

ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್‌ ವೈ-ಫೈ, ಜಿಪಿಎಸ್‌, ಎನ್‌ಎಫ್‌ಸಿ ಮತ್ತು ಬ್ಲೂಟೂತ್ 5.3 ಕನೆಕ್ಟಿವಿಟಿ ಸೌಲಭ್ಯ ಸಹ ಬೆಂಬಲಿಸುತ್ತದೆ. ಹಾಗೆಯೇ ಇದು ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP68 ರೇಟಿಂಗ್‌ ಸೌಲಭ್ಯ ಸಹ ಪಡೆದಿದೆ. ಇನ್ನು ಈ ಫೋನ್‌ ಕ್ರೀಮ್, ಗ್ರ್ಯಾಫೈಟ್, ಮಿಂಟ್ ಮತ್ತು ಪರ್ಪಲ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಅಮೆಜಾನ್‌ ಹಾಗೂ ಸ್ಯಾಮ್‌ಸಂಗ್‌ ತಾಣದ ಮೂಲಕ ಖರೀದಿಸಬಹುದು.

Best Mobiles in India

English summary
Samsung Galaxy S23 FE 5G price drop on Amazon india. check out offer price and specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+